8:46 PM Wednesday12 - November 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ

ಇತ್ತೀಚಿನ ಸುದ್ದಿ

ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಪೊಲೀಸ್ ಕಮಿಷನರ್ ನೇತೃತ್ವದಲ್ಲಿ ದಿಢೀರ್ ದಾಳಿ: ಒಂದೂವರೆ ತಾಸು ತಪಾಸಣೆ; ಬೀಡಿ, ಸಿಗರೇಟ್ ಮಾತ್ರ ಪತ್ತೆ

02/04/2023, 18:26

ಮಂಗಳೂರು(reporterkarnataka.com):ರಾಜ್ಯ ವಿಧಾನ ಸಭೆಯ ಚುನಾವಣೆಯ ಹಿನ್ನಲೆಯಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸುವ ದೃಷ್ಟಿಯಿಂದ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ನೇತೃತ್ವದಲ್ಲಿ ಪೊಲೀಸರ ತಂಡ ನಗರದ ಜಿಲ್ಲಾ ಕಾರಾಗೃಹಕ್ಕೆ ದಾಳಿ ನಡೆಸಿ ತಪಾಸಣೆ ನಡೆಸಿತು.
ಹಿರಿಯ ಅಧಿಕಾರಿಗಳು ಸೇರಿದಂತೆ ಸುಮಾರು 300ಕ್ಕೂ ಹೆಚ್ಚು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.


ದಾಳಿಯ ನಂತರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಮಾಧ್ಯಮದ ಜತೆಮಾತನಾಡಿ, ಜೈಲಿನಲ್ಲಿ ಬೀಡಿ ಮತ್ತು ಸಿಗರೇಟ್ ಹೊರತುಪಡಿಸಿ ಯಾವುದೇ ನಿಷೇಧಿತ ವಸ್ತುಗಳು ಪೊಲೀಸರಿಗೆ ಸಿಗಲಿಲ್ಲ. ಒಂದೂವರೆ ಗಂಟೆಯೊಳಗೆ ತಪಾಸಣೆ ಪೂರ್ಣಗೊಂಡಿತು. ಜೈಲಿನೊಳಗೆ ಯಾವುದೇ ಅಕ್ರಮ ಚಟುವಟಿಕೆಗಳು ನಡೆಯದಂತೆ ನೋಡಿಕೊಳ್ಳಲು ಬರುವ ದಿನಗಳಲ್ಲಿ ಇಂತಹ ದಾಳಿಗಳನ್ನು ನಡೆಸಲಾಗುವುದು ಎಂದರು.
ಬೀಡಿ, ಸಿಗರೇಟ್‌ಗಳು ಕೈದಿಗಳಿಗೆ ಹೇಗೆ ರವಾನೆ ಆಗುತ್ತವೆ. ಎಂಬುದರ ಕುರಿತು ಜೈಲು ಅಧೀಕ್ಷಕರ ಜತೆಗೆ ಚರ್ಚೆ ಮಾಡಲಾಯಿತು. ಸಂಬಂಧಿಕರು ಮತ್ತು ಕುಟುಂಬ ಸದಸ್ಯರ ಭೇಟಿಯ ಸಮಯದಲ್ಲಿ ಅದನ್ನು ಪೂರೈಸಲಾಗುತ್ತದೆ ಎಂದು ತಿಳಿಸಿದ್ದಾರೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು