6:42 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಎಸ್ ಸಿಡಿಸಿಸಿ ಬ್ಯಾಂಕ್ ಗೆ 61.38 ಕೋಟಿ ರೂ. ಲಾಭ; ಬ್ಯಾಂಕ್ ಇತಿಹಾಸದಲ್ಲೇ ಮೊದಲ ದಾಖಲೆ: ಡಾ. ರಾಜೇಂದ್ರ ಕುಮಾರ್

03/04/2023, 21:54

ಮಂಗಳೂರು(reporterkarnataka.com): ಜಿಲ್ಲೆಯ ಪ್ರತಿಷ್ಠೆಯ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಾರ್ಚ್ ತಿಂಗಳ ಅಂತ್ಯ ಕಂಡ ಆರ್ಥಿಕ ವರ್ಷದಲ್ಲಿ ದಾಖಲೆಯ ರೂಪಾಯಿ 61.38 ಕೋಟಿ ಲಾಭ ಗಳಿಸಿದೆ. ಕಳೆದ ವರ್ಷದ ಲಾಭಕ್ಕಿಂತ ಶೇ. 21.57 ರಷ್ಟು ಏರಿಕೆ ಕಂಡಿದ್ದು ಲಾಭವು ದ್ವಿಗುಣವಾಗಿದ್ದು, ಇದು ಬ್ಯಾಂಕ್‌ ಇತಿಹಾಸದಲ್ಲೇ ಮೊದಲು ಎಂದು ಎಂದು ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್.ರಾಜೇಂದ್ರಕುಮಾರ್ ಹೇಳಿದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಭಿವೃದ್ದಿಯಲ್ಲಿ ಮುಂಚೂಣಿಯಲ್ಲಿದೆ.
ಸಹಕಾರಿ ರಂಗದಲ್ಲಿ ವಿಶಿಷ್ಟ ಹಾಗೂ ವಿನೂತನ ಬ್ಯಾಂಕಿಂಗ್ ಸೇವೆಯನ್ನು ನಗರ ಹಾಗೂ ಗ್ರಾಮೀಣ ಪ್ರದೇಶದ ಜನರಿಗೆ 111 ಶಾಖೆಗಳ ಮೂಲಕ ನೀಡುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕ್ ಜನಸಾಮಾನ್ಯರ ಬ್ಯಾಂಕ್ ಆಗಿ ಗುರುತಿಸಿಕೊಂಡಿದೆ. 109 ವರ್ಷಗಳ ಸಾರ್ಥಕ ಸೇವೆಯನ್ನು ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ನೀಡುತ್ತಿದೆ ಎಂದು ತಿಳಿಸಿದರು.
ಎಸ್‌ಸಿಡಿಸಿಸಿ ಬ್ಯಾಂಕ್‌ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಶಾಖೆಗಳನ್ನು ಹೊಂದಿದ್ದು ಗ್ರಾಹಕರನ್ನು ಆಕರ್ಷಿಸುತ್ತಿದೆ. ಈ ವರ್ಷದಲ್ಲಿ ರೂಪಾಯಿ 13,512 ಕೋಟಿ ವ್ಯವಹಾರ ದಾಖಲಿಸಿ ಹೊಸ ಇತಿಹಾಸ ನಿರ್ಮಿಸಿದೆ. ಕಳೆದ ಸಾಲಿನ ಒಟ್ಟು ವ್ಯವಹಾರಕ್ಕಿಂತ ಈ ಬಾರಿ ಶೇ 16.40 ಏರಿಕೆಯನ್ನು ಕಂಡಿದೆ. 2023-24ನೇ ಸಾಲಿಗೆ ರೂಪಾಯಿ 15,000 ಕೋಟಿ ವ್ಯವಹಾರದ ಗುರಿಯನ್ನು ಬ್ಯಾಂಕ್ ಹೊಂದಿದೆ ಎಂದರು.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಮಂಗಳ ಕಿಸಾನ್ ಕ್ರೆಡಿಟ್ ಕಾರ್ಡ್ ಖಾತೆಯನ್ನು ಹೊಂದಿರುವ ರೈತರಿಗೆ ಬ್ಯಾಂಕ್‌ ರುಪೇ ಕಿಸಾನ್ ಕಾರ್ಡ್‌ ನೀಡಿದೆ. ಈಗಾಗಲೇ 1,32,291 ರುಪೇ ಕಿಸಾನ್ ಕಾರ್ಡ್ ರೈತರಿಗೆ ವಿತರಿಸಲಾಗಿದೆ. 72,298 ರುಪೇ ಡೆಬಿಟ್ ಕಾರ್ಡ್‌ಗಳನ್ನು ಬ್ಯಾಂಕ್‌ನ ಇತರ ಗ್ರಾಹಕರಿಗೆ ನೀಡಲಾಗಿದೆ. ಬ್ಯಾಂಕ್ ಮುಂದಿನ ಅವಧಿಯಲ್ಲಿ 15 ಹೊಸ ಶಾಖೆಗಳನ್ನು ತೆರೆಯುವ ಯೋಜನೆಯನ್ನು ಹಮ್ಮಿಕೊಂಡಿದೆ. ಈಗಾಗಲೇ 3 ತಾಲೂಕಿನ ಬ್ಯಾಂಕಿನ ಮುಖ್ಯ ಶಾಖೆಗಳಲ್ಲಿ ಎಟಿಎಂ ಅಳವಡಿಸಲಾಗಿದ್ದು ಮುಂದೆ ಉಳಿದ 13 ತಾಲೂಕಿನ ಮುಖ್ಯ ಶಾಖೆಗಳಲ್ಲಿ ಎಟಿಎಂ ಅಳವಡಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ. ಬ್ಯಾಂಕಿಗೆ 20 ಬಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ, 18 ಬಾರಿ ನಬಾರ್ಡ್ ಪ್ರಶಸ್ತಿ ಲಭಿಸಿದೆ.
ಬ್ಯಾಂಕ್ ತನ್ನ 111 ಶಾಖೆಗಳ ಮುಖಾಂತರ ಒಟ್ಟು 6,368.50 ಕೋಟಿ ರೂಪಾಯಿ ಠೇವಣಿ ಸಂಗ್ರಹಿಸಿ ಸಾಧನೆ ಮಾಡಿದೆ. ಕೇಂದ್ರ ಹಾಗೂ ರಾಜ್ಯ ಸರಕಾರದ ಯಾವುದೇ ಠೇವಣಾತಿ ಇಲ್ಲದೆಯೂ ಇದು ಮಾಡಿದ ಸಾಧನೆಯಾಗಿದೆ. ಎಸ್‌ಸಿಡಿಸಿಸಿ ಬ್ಯಾಂಕ್ ಠೇವಣಿ ಸಂಗ್ರಹಣೆಯಲ್ಲಿ ರಾಜ್ಯದ ಇತರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಗಳಲ್ಲಿ ಮುಂಚೂಣಿಯಲ್ಲಿದೆ. ಕಳೆದ ಸಾಲಿನ ಠೇವಣಿ ಸಂಗ್ರಹಣೆಗಿಂತ ಈ ಬಾರಿ ಶೇ 12.69 ಏರಿಕೆ ಕಂಡಿದೆ. ಕೃಷಿ ಅಭಿವೃದ್ಧಿಗೆ ಅಲ್ಪಾವಧಿ ಸಾಲವಾಗಿ ರೂಪಾಯಿ 1,681.46 ಕೋಟಿ, ಮಧ್ಯಮಾವಧಿ ಸಾಲ 150.20 ಕೋಟಿ ರೂಪಾಯಿ, ಹೀಗೆ ಕೃಷಿ ಕ್ಷೇತ್ರಕ್ಕೆ ಒಟ್ಟು 1,83166 ಕೋಟಿ ರೂಪಾಯಿ ಸಾಲ ನೀಡಲಾಗಿದೆ.
ಕೃಷಿಯೇತರ ಸಾಲವಾಗಿ ರೂ 3,863.89 ಕೋಟಿ ಸಾಲ ನೀಡಿದ್ದು, ಪ್ರಸಕ್ತ ಸಾಲಿನಲ್ಲಿ ಕೃಷಿ ಹಾಗೂ ಕೃಷಿಯೇತರ ಸಾಲಗಳ ಹೊರ ಬಾಕಿ ರೂ 7,143.38 ಕೋಟಿ ಆಗಿದ್ದು, ಕಳೆದ ವರ್ಷದ ಹೊರಬಾಕಿ ಸಾಲ ರೂಪಾಯಿ 5,956.87 ಕೋಟಿಯಾಗಿದ್ದು ಕಳೆದ ಸಾಲಿಗಿಂತ ಶೇ 19.92 ಏರಿಕೆ ಕಂಡಿದೆ ಎಂದರು.
ಎರಡು ಬಾರಿ ಫ್ರಾಂಟಿಯರ್ ಇನ್ ಕೋ ಅಪರೇಟಿವ್ ಬ್ಯಾಂಕಿಂಗ್ ಅವಾರ್ಡ್ ರಾಷ್ಟ್ರೀಯ ಪ್ರಶಸ್ತಿಯಿಂದ ಬ್ಯಾಂಕ್‌ ಪುರಸ್ಕೃತಗೊಂಡಿದೆ. ಬ್ಯಾಂಕಿನ ಸರ್ವಾಂಗೀಣ ಸಾಧನೆಗಾಗಿ ಎರಡು ಬಾರಿ ಪ್ರತಿಷ್ಠಿತ ಬ್ಯಾಂಕ್ ಬ್ಲೂ ರಿಬ್ಬನ್ ಪ್ರಶಸ್ತಿ ಲಭಿಸಿದೆ ಎಂದು ತಿಳಿಸಿದರು.
ಬ್ಯಾಂಕ್ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಬೆಳಪು,
ಗೋಪಿನಾಥ್ ಭಟ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು