11:29 AM Wednesday3 - December 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ

ಇತ್ತೀಚಿನ ಸುದ್ದಿ

ಮಂಗಳೂರು ಅಲೋಶಿಯಸ್ ಕಾಲೇಜು: ಮತದಾನ ಜಾಗೃತಿಯ ವ್ಯಂಗ್ಯ ಚಿತ್ರಗಳ ಪ್ರದರ್ಶನ

03/04/2023, 22:23

ಮಂಗಳೂರು(reporterkarnataka.com): ಬರುವ ಮೇ.10ರಂದು ನಡೆಯಲಿರುವ
ವಿಧಾನ ಸಭಾ ಚುನಾವಣಾ ಮತದಾನದಲ್ಲಿ ಜಿಲ್ಲೆಯ ಎಲ್ಲಾ ಮತದಾರರು ತಮ್ಮ ಹಕ್ಕನ್ನು ಚಲಾಯಿಸುವ ಮೂಲಕ ಶೇ. 100ರಷ್ಟು ಮತದಾನ ನಡೆಯಲು ಸಹಕರಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಅವರು ಕರೆ ನೀಡಿದರು.
ಅವರು ಸೋಮವಾರ ನಗರದ ಸಂತ ಅಲೋಶಿಯಸ್ ಕಾಲೇಜಿನ ಎರಿಕ್ ಮಥಾಯಸ್ ಸಭಾಂಗಣದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಸಂತ ಅಲೋಶಿಯಸ್ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಯೋಗದಲ್ಲಿ ಆಯೋಜಿಸಲಾದ ಮತದಾನ ಜಾಗೃತಿಯ ವ್ಯಂಗ್ಯ ಚಿತ್ರಗಳ ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.


18 ವರ್ಷ ಪೂರೈಸಿದ ಎಲ್ಲರಿಗೂ ಭಾರತೀಯ ಸಂವಿಧಾನ ನೀಡಿರುವ ಅದ್ಭುತ ಶಕ್ತಿ ಮತ ಚಲಾವಣೆಯ ಹಕ್ಕು.ಅದನ್ನು
ಮೇ 10.ರಂದು ನಡೆಯಲಿರುವ ಚುನಾವಣೆಯಲ್ಲಿ ಚಲಾಯಿಸುವ ಮೂಲಕ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತಗಳಲ್ಲೂ ತಮ್ಮ ಇಚ್ಛೆಯ ಶಾಸಕರನ್ನು ಆಯ್ಕೆ ಮಾಡುವಂತೆ ತಿಳಿಸಿದರು.
ಮತದಾನ ನನ್ನ ಹಕ್ಕು ಎಂಬ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪ್ರತಿಯೊಬ್ಬ ಮತದಾರನೂ ಮತಗಟ್ಟೆಗೆ ಬಂದು ತಮ್ಮ ಮತಚಲಾಯಿಸುವ ಮೂಲಕ ಸಂವಿಧಾನವನ್ನು ಎತ್ತಿ ಹಿಡಿಯಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಚನ್ನಬಸಪ್ಪ, ಸಂತ ಅಲೋಷಿಯಸ್ ಕಾಲೇಜಿನ ಪ್ರಾಂಶುಪಾಲ ರೆ.ಡಾ. ಪ್ರವೀಣ್ ಮಾರ್ಟಿಸ್, ವ್ಯಂಗ್ಯ ಚಿತ್ರಕಾರ ಜಾನ್ ಚಂದ್ರನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು