7:31 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಣ್ಣು ತೆಗೆಯುವ ಜೆಸಿಬಿಯಿಂದ ಚರಂಡಿ ತುಂಬಿದ ನೀರು ಎತ್ತುವುದು!!: ಮಂಗಳೂರು ಸ್ಮಾರ್ಟ್ ಸಿಟಿಗೆ ಈ ಬಾರಿ ಪ್ರಶಸ್ತಿ ಗ್ಯಾರಂಟಿ! 

13/07/2021, 22:07

ಮಂಗಳೂರು(reporterkarnatakanews): ಮಂಗಳೂರು ಸ್ಮಾರ್ಟ್ ಸಿಟಿ ತಂತ್ರಜ್ಞಾನದಲ್ಲಿ ಎಷ್ಟೊಂದು ಮುಂದುವರಿದಿದೆ ಎನ್ನುವುದಕ್ಕೆ ಇದೊಂದು ತಾಜಾ ನಿದರ್ಶನ. ಮಣ್ಣು ಅಗೆಯುವುದು ಜೆಸಿಬಿಯಿಂದ ಇಲ್ಲಿನ ಎಂಜಿನಿಯರ್ ಹಾಗೂ ಗುತ್ತಿಗೆದಾರರು ಹೊಂಡ, ಚರಂಡಿಯಲ್ಲಿ ನಿಂತ ಮಳೆ ನೀರನ್ನು ತೆಗೆಯುತ್ತಾರೆ!


ನಗರದ ಸ್ಟೇಟ್ ಬ್ಯಾಂಕ್ ಬಳಿಯ ರಸ್ತೆಗೆ ಒಳಚರಂಡಿ ನಿರ್ಮಿಸುವ ಕಾರ್ಯ ತಿಂಗಳುಗಟ್ಟಲೆಯಿಂದ ನನೆಗುದಿಗೆ ಬಿದ್ದಿತ್ತು. ಇದೀಗ ಕಳೆದ ಮೂರು ದಿನಗಳಿಂದ ನಗರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಸ್ಮಾರ್ಟ್ ಸಿಟಿಯಡಿ ಅಗೆದು ಹಾಕಿದ ಹೊಂಡಗಳಲ್ಲಿ ಕೆಸರು ನೀರು ತುಂಬಿದೆ. ಕಳೆದ ಕೆಲವು ದಿನಗಳಿಂದ ಚರಂಡಿ ತುಂಬಿದ ನೀರನ್ನು ಜೆಸಿಬಿ ಮೂಲಕ ಖಾಲಿ ಮಾಡುವ ಕೆಲಸ ನಡೆಯುತ್ತಿದೆ. ಆದರೆ ಜೆಸಿಬಿ ಮೂಲಕ ಎತ್ತಿ ಅಲ್ಲೇ ಬದಿಗೆ ಸುರಿಯುವ ನೀರು ಮತ್ತೆ ಅದೇ ಚರಂಡಿ ಸೇರುತ್ತಿದೆ. ಆಧುನಿಕ ತಂತ್ರಜ್ಞಾನ ಬಳಕೆಗೆ ಈ ಬಾರಿ ಮಂಗಳೂರು ಸ್ಮಾರ್ಟ್ ಸಿಟಿಗೆ ಪ್ರಶಸ್ತಿ ಗ್ಯಾರಂಟಿ ಎಂದು ಸಾರ್ವಜನಿಕರು ಆಡಿಕೊಳ್ಳುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು