5:02 PM Thursday28 - November 2024
ಬ್ರೇಕಿಂಗ್ ನ್ಯೂಸ್
ಅಡಿಕೆ ಬೆಳೆಗಾರರ ಸಮಸ್ಯೆ: ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್… ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್… ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ…

ಇತ್ತೀಚಿನ ಸುದ್ದಿ

ಮೂಡಿಗೆರೆ ಶಾಸಕ ಕುಮಾರಸ್ವಾಮಿಗೆ ಟಿಕೆಟ್ ಕೊಡಬೇಡಿ: ಪ್ರಧಾನಿ ಮೋದಿ, ನಡ್ಡಾ,‌ ಅಮಿತ್ ಶಾ ಸಹಿತ ಬಿಜೆಪಿ ನಾಯಕರಿಗೆ ಪತ್ರ

04/04/2023, 21:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಕ್ಷೇತ್ರದಿಂದ ಹಾಲಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ ಮತ್ತೆ ಟಿಕೆಟ್ ನೀಡದಂತೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ಪ್ರಮುಖ ನಾಯಕರಿಗೆ ಮೂಡಿಗೆರೆ ಬಿಜೆಪಿ ಕಾರ್ಯಕರ್ತರು ಪತ್ರ ಬರೆದಿದ್ದಾರೆ.
ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಶಾ, ಬಿ.ಎಲ್. ಸಂತೋಷ್, ಶೋಭಾ ಕರಂದ್ಲಾಜೆ ಅವರಿಗೆ ಪತ್ರ ಬರೆಯಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಕುಮಾರಸ್ವಾಮಿಗೆ ಟಿಕೆಟ್ ಬೇಡವೇ ಬೇಡ ಅಂತ ಪತ್ರ ಬರೆದಿದ್ದಾರೆ. ಇದರೊಂದಿಗೆ ಮೂಡಿಗೆರೆ ಶಾಸಕ ಕುಮಾರಸ್ವಾಮಿ ವಿರುದ್ಧ ಆಕ್ರೋಶ, ಅಸಮಾಧಾನ ಮುಂದುವರಿದಿದೆ.
10 ಪಾಯಿಂಟ್ ಗಳ ಮಾಹಿತಿಯುಳ್ಳ ಪತ್ರವನ್ನ ಕಾರ್ಯಕರ್ತರು ಮೇಲ್ ಮಾಡಿದ್ದಾರೆ.
ಮೂಡಿಗೆರೆ ತಾಲೂಕಿನ ಪ್ರತಿ ಹೋಬಳಿಯಿಂದಲೂ ಪತ್ರಬರೆಯಲಾಗಿದೆ. ಪ್ರಧಾನಿ ಮೋದಿ ಅವರ ಕಚೇರಿಗೂ ಕಾರ್ಯಕರ್ತರು ಪತ್ರ ಕಳುಹಿಸಿದ್ದಾರೆ.
ಸಂತೋಷ್, ಶೋಭಾ ಅವರಿಗೂ ಬಿಜೆಪಿ ಮುಖಂಡರು, ಕಾರ್ಯಕರ್ತರು ಪತ್ರ ಕಳುಹಿಸಿದ್ದಾರೆ.
ಪಕ್ಷ ವಿರೋಧಿ, ಕಾರ್ಯಕರ್ತರ ಕಡೆಗಣನೆ, ವಿಧಾನಸೌಧದ ಮುಂದೆ ಪಕ್ಷ ಮರ್ಯಾದೆ ಕಳೆದದ್ದು
ನೋವು ಹೇಳಿಕೊಂಡವರ ವಿರುದ್ಧ ತಾನೇ ಬಟ್ಟೆ ಹರಿದುಕೊಂಡು ಶಾಸಕರು ಎಂಬ ಆರೋಪ ಕೂಡ ಕೇಳಿ ಬಂದಿದೆ. ಕುಮಾರಸ್ವಾಮಿ ಅವರು ಆಪ್ತರಿಗೆ ಮಾತ್ರ ಹೆಚ್ಚೆಚ್ಚು ಅನುದಾನ ನೀಡಿದ್ದಾರೆ ಎಂಬ ಆರೋಪವೂ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು