ಇತ್ತೀಚಿನ ಸುದ್ದಿ
ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಜಿ. ಕೃಷ್ಣಪ್ಪ ಮನೆ ಮನೆ ಭೇಟಿ: ಕಾರ್ಯಕರ್ತರಿಂದ ಗೆಲ್ಲಿಸುವ ಭರವಸೆ
04/04/2023, 23:27

ಸುಳ್ಯ(reporterkarnataka.com):
ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರು ದಿನೇಶ್ ಮಾಡ್ತಿಲಾ ಮನೆಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೃಷ್ಣಪ್ಪ ಅವರನ್ನು ಗೆಲ್ಲಿಸುವ ಭರವಸೆ ನೀಡಿದರು. ಕಾಂಗ್ರೆಸ್ ಅಭ್ಯರ್ಥಿ ಜತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ, ಪ್ರಧಾನ ಕಾರ್ಯದರ್ಶಿಗಳಾದ ಪಿ. ಎಸ್. ಗಂಗಾಧರ್, ಉಪಾಧ್ಯಕ್ಷರಾದ ದಿನೇಶ್ ಅಂಬೇಕಲ್ಲು, ಸುಳ್ಯ ವಿಧಾನ ಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ಸದಾನಂದ ಮಾವಜಿ, ಎನ್ ಎಸ್ ಯುಐ ಅಧ್ಯಕ್ಷ ಕೀರ್ತನ್ ಗೌಡ ಕೊಡಪಾಲ, ಸೇವಾದಳ ಅಧ್ಯಕ್ಷರಾದ ಜಯಪ್ರಕಾಶ್ ನೆಕ್ರಪ್ಪಾಡಿ ಸೇರಿದಂತೆ ಐವರ್ನಾಡು ಗ್ರಾಮ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.