6:56 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಬೊಮ್ಮಾಯಿಗೆ ಮಾತ್ರ ನನ್ನ ಬೆಂಬಲ, ಯಾವುದೇ ಪಕ್ಷಕ್ಕಿಲ್ಲ: ನಟ ಸುದೀಪ್ ಸ್ಪಷ್ಟನೆ

05/04/2023, 19:56

ಬೆಂಗಳೂರು(reporterkarnataka.com): ನಾನು ಯಾವುದೇ ಪಕ್ಷದ ಪರ ಅಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನಾನು ಬೆಂಬಲ ನೀಡುತ್ತೇನೆ. ಬೊಮ್ಮಾಯಿ ಕಷ್ಟದ ಸಮಯದಲ್ಲಿ ನನ್ನ ಜೊತೆಗಿದ್ದರು. ಹೀಗಾಗಿ ಬೊಮ್ಮಾಯಿಯವರಿಗೆ ನಾನು ಬೆಂಬಲ ನೀಡುತ್ತೇನೆ ಎಂದು ಪ್ರಸಿದ್ಧ ನಟ ಕಿಚ್ಚ ಸುದೀಪ್ ಹೇಳಿದ್ದಾರೆ.

ಯಾವುದೇ ಪಕ್ಷಕ್ಕೆ ನಾನು ಸೇರುವುದಿಲ್ಲ. ಪಕ್ಷದ ಪರವಾಗಿ ಪ್ರಚಾರ ಮಾಡುವೆ ಎಂದೂ ಕೂಡ ಹೇಳಲಿಲ್ಲ. ಆದರೆ, ಬಸವರಾಜ ಬೊಮ್ಮಾಯಿ ಪರವಾಗಿ ನಿಂತುಕೊಳ್ಳುತ್ತೇನೆ ಎಂದು ಇಲ್ಲಿನ ಖಾಸಗಿ ಹೊಟೇಲ್‌ನಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನುಡಿದರು.
ಬೊಮ್ಮಾಯಿ ಅವರಿಗೆ ಹಾಗೂ ನಮ್ಮ ಕುಟುಂಬಕ್ಕೆ ಅತ್ಯುತ್ತಮ ಸಂಬಂಧವಿದೆ. ಈ ಹಿನ್ನೆಲೆಯಲ್ಲಿ ಅವರ ಪರವಾಗಿ ಅವರಿಗೆ ಬೆಂಬಲವನ್ನು ನೀಡುತ್ತೇನೆ. ಬೊಮ್ಮಾಯಿ ಅವರು ಬೇರೆ ಪಕ್ಷದಲ್ಲಿದ್ದರೂ ಅವರಿಗೆ ಬೆಂಬಲ ನೀಡುತ್ತಿದ್ದೆ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು