ಇತ್ತೀಚಿನ ಸುದ್ದಿ
ಪೊಳಲಿ ಅಮ್ಮನವರ ಗದ್ದೆಯಲ್ಲಿ ಯಾಂತ್ರೀಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ ಕಾರ್ಯಾಗಾರ: 2 ಎಕರೆ ಪ್ರದೇಶದಲ್ಲಿ ವ್ಯವಸಾಯ
14/07/2021, 08:53
ಬಂಟ್ವಾಳ(reporterkarnataka news): ದ.ಕ.ಜಿ.ಪಂ., ಕೃಷಿ ಇಲಾಖೆ ಹಾಗೂ ಬಂಟ್ವಾಳ ಕೃಷಿಕ ಸಮಾಜದ ಸಹಯೋಗದಲ್ಲಿ ಯಾಂತ್ರೀಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ ಕಾರ್ಯಾಗಾರಕ್ಕೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಗದ್ದೆಯಲ್ಲಿ ಚಾಲನೆ ನೀಡಲಾಯಿತು.
ಪೊಳಲಿ ದೇವಸ್ಥಾನದ ಸುಮಾರು 2 ಎಕರೆ ವಿಸ್ತೀರ್ಣದಲ್ಲಿ ಭತ್ತದ ನಾಟಿ ಕಾರ್ಯ ನಡೆಯಲಿದೆ. ಕೃಷಿ ಸಂಜೀವಿನಿ, ರೋಟರಿ ಟಿಲ್ಲರನ್ನು ಕೂಡ ಈ ಸಂದರ್ಭದಲ್ಲಿ ಪ್ರದರ್ಶನ ಮಾಡಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್, ಬೂಡಾ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.