3:40 PM Monday15 - September 2025
ಬ್ರೇಕಿಂಗ್ ನ್ಯೂಸ್
ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಪೊಲೀಸ್ ಸಿಬಂದಿಗಳಿಗೆ 40 ಬೆಡ್ ಗಳ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಆರಂಭ

14/05/2021, 19:06

ಮಂಗಳೂರು(reporterkarnataka news):

ಜನರ ರಕ್ಷಣೆಗಾಗಿ ಹಗಲು ರಾತ್ರಿ ತಮ್ಮ ಜೀವದ ಹಂಗು ತೊರೆದು ಕಾರ್ಯನಿರ್ವಹಿಸುತ್ತಿರುವ ಪೊಲೀಸರ ಆರೋಗ್ಯ ರಕ್ಷಣೆಗೆ ಕಮಿಷನರ್ ಎನ್. ಶಶಿಕುಮಾರ್ ಮುಂದಾಗಿದ್ದಾರೆ.

ಜನಸಾಮಾನ್ಯರನ್ನು ಮನೆಯಲ್ಲಿ ಉಳಿಸಿ, ದಿನದ 24 ಗಂಟೆಯೂ ಮನೆ ಮಠ ತೊರೆದು ರಸ್ತೆ ಬದಿ,ಬಸ್ ಸ್ಟಾಂಡ್ ಗಳಲ್ಲಿ ಟೆಂಟ್ ಹಾಕಿ, ಬಿಸಿಲು ಮಳೆಗಳಿಗೆ ಕಷ್ಟ ಪಟ್ಟು ಕಾರ್ಯಾ ನಿರ್ವಹಿಸುವ ಪೋಲಿಸರು ಸೋಂಕಿಗೆ ಒಳಗಾಗುತ್ತಿದ್ದು, ಅವರ ಆರೋಗ್ಯ ಕಾಪಾಡಲು ಪೋಲಿಸ್  ಕಮಿಷನರ್ ಪೊಲೀಸ್ ಸಿಬಂದಿಗಾಗಿಯೇ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಆರಂಭಿಸಿದ್ದಾರೆ.  


ನಗರದ ಅಲೋಶಿಯಸ್ ಕಾಲೇಜು ಆವರಣದಲ್ಲಿರುವ ಹಾಸ್ಟೆಲ್ ಕಟ್ಟಡದಲ್ಲಿ 40 ಬೆಡ್ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರ್‌ ರೆಡಿ ಮಾಡಲಾಗಿದ್ದು, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಉದ್ಘಾಟನೆ ನೆರವೇರಿಸಿದರು.

ಪೊಲೀಸ್ ಕಮಿಷನರ್ ಶಶಿಕುಮಾರ್‌ ಮಾತನಾಡಿ, ಈಗಾಗಲೆ ಮಂಗಳೂರಿನಲ್ಲಿ 62 ಮಂದಿಗೆ ಕೋವಿಡ್ ಸೋಂಕು ತಗಲಿದೆ. ಈಗ 16 ಮಂದಿ ಗುಣಮುಖರಾಗಿದ್ದು, 42 ಮಂದಿ ಹೋಮ್ ಐಸೋಲೇಶನಲ್ಲಿದ್ದಾರೆ.  ಮನೆಯಲ್ಲಿ ಸೂಕ್ತ ವ್ಯವಸ್ಥೆ ಇಲ್ಲದವರು, ಏನಾದ್ರೂ ಆರೋಗ್ಯ ತೊಂದರೆ ಇದ್ದವರು ಇಲ್ಲಿ ಬಂದು ಸೇರಿಕೊಳ್ಳಬಹುದು. ಇಲ್ಲಿ 24 ಗಂಟೆ ಕಾಲ ವೈದ್ಯರು ಮತ್ತು ನರ್ಸ್ ಗಳು ಇರಲಿದ್ದು, ರೋಗಿಗಳ ಆರೈಕೆ ಮಾಡಲಿದ್ದಾರೆ.

ಅಲೋಶಿಯಸ್ ಕಾಲೇಜಿನ ಹಾಸ್ಟೆಲ್ ವತಿಯಿಂದ ಊಟ, ತಿಂಡಿ, ಚಹಾವನ್ನು  ರೆಡಿ ಮಾಡಿ ಕೊಡುತ್ತಿದ್ದಾರೆ. ನೀರು, ಬೆಡ್ ವ್ಯವಸ್ಥೆ ಎಲ್ಲ   ವ್ಯವಸ್ಥೆ  ಇದೆ.  ಮಧುಮೇಹ, ಬಿಪಿ ಇನ್ನಿತರ ಸಣ್ಣಪುಟ್ಟ ಕಾಯಿಲೆಗಳಿಂದ ಬಳಲುತ್ತಿರುವ ಪೊಲೀಸ್ ಇಲಾಖೆಯಲ್ಲಿರುವ ಸೋಂಕಿತರು ಮತ್ತು ಅವರ ಸಂಬಂಧಿಕರಿಗಾಗಿ ಈ ಕೋವಿಡ್ ಕೇರ್ ಆರಂಭಿಸಲಾಗಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು