12:01 PM Wednesday3 - December 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ

ಇತ್ತೀಚಿನ ಸುದ್ದಿ

ಅವಕಾಶ ಕೊಟ್ಟರೆ ಬಂಟ್ವಾಳ ಅಭಿವೃದ್ಧಿಗೆ ಇನ್ನಷ್ಟು ದುಡಿಯುವೆ: ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು

09/04/2023, 15:05

ಬಂಟ್ವಾಳ(reporterkarnataka.com):
ದೇಶವನ್ನು ಉಳಿಸಿದ ನಾಯಕ ನರೇಂದ್ರ ಮೋದಿ ಎಂಬ ಖುಷಿ ನಮಗಿದೆ. ಆಂತಹ ಮಹಾನ್ ವ್ಯಕ್ತಿ ಪ್ರಧಾನಿಯಾಗಿರುವ ಸಂದರ್ಭದಲ್ಲಿ ಶಾಸಕನಾಗಿ ಕ್ಷೇತ್ರದ ಜನತೆಯ ಸೇವೆ ಮಾಡುವ ಭಾಗ್ಯ ಸಿಕ್ಕಿರುವುದು ನನ್ನ ಭಾಗ್ಯ. ನಾನು ಪ್ರಾಮಾಣಿಕತೆಯಿಂದ ಮಾಡಿದ ಕೆಲಸಕ್ಕೆ ಮಕ್ಕಳಿಂದ ಹಿರಿಯರವರೆಗೆ ಕ್ಷೇತ್ರದ ಜನರು ನೀಡುವ ಪ್ರೀತಿ, ಅಭಿಮಾನಕ್ಕೆ ಅಭಾರಿಯಾಗಿದ್ದೇನೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು
ಹೇಳಿದರು.
ಅರಳ ಮಹಾಶಕ್ತಿ ಕೇಂದ್ರದ ಪ್ರಸನ್ನ ಶೆಟ್ಟಿ ಅವರ ಮನೆಯಲ್ಲಿ ನಡೆದ ಪ್ರಮುಖ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ರಾಜಕೀಯ ಅನುಭವವಿಲ್ಲದ ಪ್ರಥಮ ಅವಧಿಯಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ ಮಾಡಿದ್ದು, ಮುಂದಿನ ಅವಧಿಯಲ್ಲಿ ಮತ್ತೆ ಅವಕಾಶ ನೀಡಿದರೆ ಅದ್ಬುತ ರೀತಿಯಲ್ಲಿ ಬಂಟ್ವಾಳದಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿತೋರಿಸುತ್ತೇನೆ ಎಂದು ಅವರು ಭರವಸೆ ನೀಡಿದರು.
ಜಗತ್ತಿನ ಅತ್ಯಂತ ಕಡಿಮೆ ಹಣದುಬ್ಬರ ಇರುವ ದೇಶ ಭಾರತವಾಗಿದ್ದು,ಕೊರೊನಾ ಬಳಿಕದ ದಿನಗಳಲ್ಲಿ ಅರ್ಥಿಕ ವ್ಯವಸ್ಥೆಯಲ್ಲಿ ಸುಧಾರಣೆ ತಂದಿರುವ ಕೀರ್ತಿ ಬಿಜೆಪಿ ಡಬ್ಬಲ್ ಇಂಜಿನ್ ಸರಕಾರಕ್ಕೆ ಸಲ್ಲುತ್ತದೆ ಎಂದು ಅವರು ತಿಳಿಸಿದರು ‌.

ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ಕ್ಷೇತ್ರದ ಯುವಮೋರ್ಚಾದ ಪ್ರಧಾನ ಕಾರ್ಯದರ್ಶಿ ದಿನೇಶ್ ಶೆಟ್ಟಿ ದಂಬೆದಾರ್, ಗ್ರಾಮ ಪಂಚಾಯತ್ ಅಧ್ಯಕ್ಷ ಲಕ್ಮೀಧರ್ ಶೆಟ್ಟಿ, ಸದಸ್ಯರಾದ ತುಂಗಮ್ಮ, ಧನ್ಯ, ಚಂದ್ರಹಾಸ ಪೂಜಾರಿ, ಶಕ್ತಿ ಕೇಂದ್ರದ ಪ್ರಮುಖ್ ಯೋಗೀಶ್ ಕೆ, ಬೂತ್ ಅಧ್ಯಕ್ಷ ‌ರಂಜನ್ ಕುಮಾರ್ ಶೆಟ್ಟಿ, ಪ್ರಮುಖರಾದ ಬಾಲಕೃಷ್ಣ ಶೆಟ್ಟಿ ಸಂಗಬೆಟ್ಟು ಮತ್ತಿತರರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು