8:36 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಕಂದಕಕ್ಕೆ ಉರುಳಿದ ಕಾರು: ಮಹಿಳೆ ದಾರುಣ ಸಾವು; ಮತ್ತೋರ್ವ ಮಹಿಳೆ ಗಂಭೀರ ಗಾಯ

10/04/2023, 18:55

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಾಂ

ಕೊಟ್ಟಿಗೆಹಾರದಿಂದ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಕಾರೊಂದು ಚಾರ್ಮಾಡಿ ಘಾಟಿಯ ಎರಡನೇ ತಿರುವಿನ ಬಳಿ ಕಂದಕಕ್ಕೆ ಉರುಳಿ‌ ಗಂಭೀರ ಗಾಯಗೊಂಡಿದ್ದ ಸರೋಜಿನಿ ಶೆಟ್ಟಿ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಉಜಿರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ ಹಾಗೂ ಕುಟುಂಬಸ್ಥರು ಏ.9 ರಂದು ರಾತ್ರಿ ಕೊಪ್ಪದಲ್ಲಿ ಸಂಬಂಧಿಕರೊಬ್ಬರು ಸಾವನ್ನಪ್ಪಿದ್ದು ಅವರ ಅಂತ್ಯಸಂಸ್ಕಾರಕ್ಕೆ ಹೋಗಿ ಮರಳುತ್ತಿದ್ದ ವೇಳೆ ಈ ಅವಘಡ‌ ನಡೆದಿತ್ತು.


ಕಾರಿನಲ್ಲಿ ಪ್ರಯಣಿಸುತ್ತಿದ್ದ ಪುಷ್ಪಾವತಿ ಆರ್.ಶೆಟ್ಟಿ, ಪುತ್ರಿ ಪೂರ್ಣಿಮಾ ಶೆಟ್ಟಿ, ಮೊಮ್ಮಗ ಸಮೃದ್ಧ್, ಸಾಕ್ಷಿ, ಸಂಬಂಧಿಕ ಮಹಿಳೆ ಸರೋಜಿನಿ ಶೆಟ್ಟಿ ಹಾಗೂ ಕಾರು ಚಾಲಕರಾಗಿದ್ದ ಅರುಣ್ ಗಾಯಗೊಂಡಿದ್ದರು.
ಗಾಯಾಳುಗಳನ್ನು ತಕ್ಷಣವೇ ಕಕ್ಕಿಂಜೆ ಹಾಗೂ ಉಜಿರೆ ಆಸ್ಪತ್ರೆಗೆ ದಾಖಲಿಸಿ ಗಂಭೀರ ಗಾಯಗೊಂಡಿದ್ದ ಸರೋಜಿನಿ ಶೆಟ್ಟಿ ಮತ್ತು ಪೂರ್ಣಿಮಾ ಶೆಟ್ಟಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರೆ ಸರೋಜಿನಿ ಶೆಟ್ಟಿ ಅವರು ಮಂಗಳೂರಿನಲ್ಲಿ ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‌

ಇತ್ತೀಚಿನ ಸುದ್ದಿ

ಜಾಹೀರಾತು