12:27 PM Friday16 - May 2025
ಬ್ರೇಕಿಂಗ್ ನ್ಯೂಸ್
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ; ಪ್ರಾಧಿಕಾರ ರಚನೆ ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು

ಇತ್ತೀಚಿನ ಸುದ್ದಿ

ವಿಧಾನಸಭೆ ಚುನಾವಣೆ ಹಿನ್ನೆಲೆ: ಕೊಟ್ಟಿಗೆಹಾರದಲ್ಲಿ ಭದ್ರತಾ ಸಿಬ್ಬಂದಿ ಪಥ ಸಂಚಲನ

10/04/2023, 23:23

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಿಧಾನ ಸಭೆ ಚುನಾವಣೆ ಪ್ರಯುಕ್ತ ಮೂಡಿಗೆರೆ ವಿಧಾನ ಸಭಾ ಕ್ಷೇತ್ರದ ಬಣಕಲ್ ಹಾಗೂ ಕೊಟ್ಟಿಗೆಹಾರದಲ್ಲಿ 50ಕ್ಕೂ ಹೆಚ್ಚು ಸಿಆರ್ ಪಿಎಫ್ ಯೋಧರು ಮತ್ತು ಪೊಲೀಸರು ಸೋಮವಾರ ಸಿಪಿಐ ಸೋಮೇಗೌಡ ನೇತೃತ್ವದಲ್ಲಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ಪಥ ಸಂಚಲನ ನಡೆಸಿದರು.’ಕಾನೂನು ಪಾಲನೆ ಹಾಗೂ ಶಾಂತಿ ಸುವ್ಯವಸ್ಥೆಯ ಹಿನ್ನಲೆಯಲ್ಲಿ ಜನರು ನಿರ್ಭಯವಾಗಿ ಮತ ಚಲಾಯಿಸಲು ದೈರ್ಯ ತುಂಬುವ ಹಿತ ದೃಷ್ಟಿಯಿಂದ ಪಥ ಸಂಚಲನ ನಡೆಸಲಾಗಿದೆ ಎಂದು ಬಣಕಲ್ ಸಬ್ ಇನ್ ಸ್ಪೆಕ್ಟರ್ ಜಂಬೂರಾಜ್ ಮಹಾಜನ್ ತಿಳಿಸಿದ್ದಾರೆ.
ಸಬ್ ಇನ್ ಸ್ಪೆಕ್ಟರ್ ಗಳಾದ ರನ್ನಗೌಡ ಪಾಟೀಲ್,ಸಿ.ಸಿ.ಪವನ್ ಕುಮಾರ್,ಎಎಸ್ಐ ಟಿ.ಕೆ.ಶಶಿ ಹಾಗೂ ಸಿಆರ್ ಪಿಎಫ್ ನ ಪಿಎಸ್ಐ ಹಾಗೂ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿಗಳು ಪಥ ಸಂಚಲನದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು