8:45 PM Friday25 - July 2025
ಬ್ರೇಕಿಂಗ್ ನ್ಯೂಸ್
Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ… ಮೈಸೂರು ದಸರಾ: ಜಂಬೂ ಸವಾರಿಯ ಮೊದಲ ಹಂತದ ಸಾಕಾನೆಗಳ ಪಟ್ಟಿ ಬಿಡುಗಡೆ Kodagu | ಬಿರುಸಿನ ಮಳೆ: ಕೊಡಗು ಜಿಲ್ಲೆಯಲ್ಲಿ ನಾಳೆ ಶಾಲೆ, ಪಿಯು ಕಾಲೇಜುಗಳಿಗೆ… ಬಿಜೆಪಿ ನಡೆಸಿರುವ ಅಕ್ರಮವೇ ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆಗೆ ಕಾರಣ ಎನ್ನುವ ಸತ್ಯ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಎಸ್ ಐಟಿಯಿಂದ ಹಿರಿಯ ಐಪಿಎಸ್ ಅಧಿಕಾರಿ ಸೌಮ್ಯಲತಾ… ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಮೃತದೇಹ ಪತ್ತೆ: ಕೊಲೆ ಶಂಕೆ; ಕುಟುಂಬಸ್ಥರಿಂದ ದೂರು ಇಡೀ ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಕೇಂದ್ರವನ್ನಾಗಿ ಶಿವಮೊಗ್ಗ ಅಭಿವೃದ್ಧಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ಬಿ.ರಮಾನಾಥ ರೈ ಚುನಾವಣಾ ಕಚೇರಿ ನಾಳೆ ಉದ್ಘಾಟನೆ

11/04/2023, 15:57

ಬಂಟ್ವಾಳ(reporterkarnataka.com): ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಅವರ ಚುನಾವಣಾ ಕಚೇರಿ ಉದ್ಘಾಟನೆ
ಬುಧವಾರ(ಏ.12) ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ. ಬಿ.ಸಿ. ರೋಡ್ ನ ಪದ್ಮ ಪೆಟ್ರೋಲ್ ಬಂಕ್ ಮುಂಭಾಗದಲ್ಲಿರುವ ಧನಲಕ್ಷ್ಮಿ ಕಾಂಪ್ಲೆಕ್ಸ್ ನಲ್ಲಿ ನೂತನ ಕಚೇರಿ ಉದ್ಘಾಟನೆಯಾಗಲಿದೆ.
ಕಾಂಗ್ರೆಸ್ ಪಕ್ಷವನ್ನು ಈ ಬಾರಿ ರಾಜ್ಯದಲ್ಲಿ ಅಧಿಕಾರಕ್ಕೆ ತರುವ ಉದ್ದೇಶದಿಂದ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲೂ ಭರದ ಚುನಾವಣಾ ಪ್ರಚಾರ ನಡೆಯುತ್ತಿದೆ. ಈ ಚುನಾವಣೆಯಲ್ಲಿ ಬಂಟ್ವಾಳದಲ್ಲಿ ಬಿ. ರಮಾನಾಥ ರೈಯವರನ್ನು ಭಾರೀ ಅಂತರದಲ್ಲಿ ಗೆಲ್ಲಿಸಲು ಕಾರ್ಯಕರ್ತರು ಅವಿರತ ಶ್ರಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಚುನಾವಣಾ ಕಾರ್ಯಗಳನ್ನು ನಿರ್ವಹಿಸಲು ಚುನಾವಣಾ ಕಚೇರಿ ತೆರೆಯಲಾಗುತ್ತಿದೆ.
ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ವಿವಿಧ ಸಮುದಾಯಗಳ ಹಿರಿಯ ಮುಖಂಡರು ಕಚೇರಿ ಉದ್ಘಾಟಿಸಲಿದ್ದಾರೆ. ಅಭ್ಯರ್ಥಿ ಬಿ. ರಮಾನಾಥ ರೈ ಮತ್ತು ಪಕ್ಷದ ವರಿಷ್ಠರು, ಬ್ಲಾಕ್ ಮುಖಂಡರು, ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮತ್ತು ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಉಮೇಶ್ ಸಪಲ್ಯ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು