3:45 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಕರಾವಳಿಯಲ್ಲಿ ಬೊಮ್ಮಾಯಿ ಎಕ್ಸ್ ಪ್ರೆಸ್: ಸಾಲು ಸಾಲು ದೇಗುಲಗಳ ಭೇಟಿ; ಕಡಲನಗರಿಯಲ್ಲಿ ಮಂಗಳಾಂಬೆಯ ದರ್ಶನ, ಗರೋಡಿಯಲ್ಲಿ ವಿಶೇಷ ಪೂಜೆ

12/04/2023, 23:50

ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ‌ ಬೊಮ್ಮಾಯಿ ಅವರು ಬುಧವಾರ ಕಡಲನಗರಿ ಮಂಗಳೂರಿನ ದೇಗುಲಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಮಂಗಳಾದೇವಿ ದೇವಾಲಯ, ಕದ್ರಿ ದೇಗುಲ ಹಾಗೂ ಗರೋಡಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.




ಬುಧವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದುಕೊಂಡರು. ನಂತರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆರಳಿ ದೇವರ ದರ್ಶನ ಪಡೆದರು.ಸಂಪುಟ ನರಸಿಂಹ ಸ್ವಾಮಿ ದೇವರ ದರ್ಶನ ಕೂಡ ಪಡೆದರು. ಕುಕ್ಕೆಯಲ್ಲಿ ಹೊಸಳಿಗಮ್ಮನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಅಲ್ಲಿಂದ ಮಂಗಳೂರಿಗೆ ತೆರಳಿದ ಸಿಎಂ ಮಂಗಳಾದೇವಿ ದೇಗುಲಕ್ಕೆ ಭೇಟಿ ನೀಡಿ ಮಂಗಳಾಂಬೆಯ ದರ್ಶನ ಪಡೆದರು.

ಕಂಕನಾಡಿ ಗರೋಡಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಇದೀಗ ಚುನಾವಣೆ ಬಂದಿರುವ ಹಿನ್ನಲೆಯಲ್ಲೂ ಭೇಟಿ ನೀಡಿ, ರಾಜ್ಯದ ಜನರ ಸುಭೀಕ್ಷೆಗೆ ಪ್ರಾರ್ಥಿಸಿದ್ದೇನೆ ಎಂದು ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು