12:12 PM Sunday16 - November 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್

ಇತ್ತೀಚಿನ ಸುದ್ದಿ

2022- 23ನೇ ವಿತ್ತೀಯ ವರ್ಷದಲ್ಲಿ ಎಂಸಿಸಿ ಬ್ಯಾಂಕಿಗೆ 12.20 ಕೋಟಿ ರೂ. ದಾಖಲೆ ಲಾಭ: ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ

13/04/2023, 00:56

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 16 ಶಾಖೆಗಳನ್ನು ಹೊಂದಿರುವ ಎಂಸಿಸಿ ಬ್ಯಾಂಕ್ ಲಿಮಿಟೆಡ್ 2022- 23ನೇ ವಿತ್ತೀಯ ವರ್ಷದಲ್ಲಿ 12.20 ಕೋಟಿ ರೂ. ದಾಖಲೆ ಲಾಭವನ್ನು ಪಡೆದಿದೆ ಎಂದು ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಹೇಳಿದರು.
ಬುಧವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2022- 23ನೇ ಹಣಕಾಸು ವರ್ಷದಲ್ಲಿ ಬ್ಯಾಂಕ್ ಗಣನೀಯ ಪ್ರಮಾಣದಲ್ಲಿ ವ್ಯವಹಾರ ಪ್ರಗತಿಯನ್ನು ಸಾಧಿಸಿದೆ. ಬ್ಯಾಂಕಿನ ನಿವ್ವಳ ಮೌಲ್ಯ 46 ಕೋಟಿ ರೂ. ನಿಂದ 59 ಕೋಟಿ ರೂಪಾಯಿಗೆ ಏರಿದೆ. ಬ್ಯಾಂಕ್ ವ್ಯವಹಾರ 933.21 ಕೋಟಿ ತಲುಪಿದೆ ಎಂದು ವಿವರ ನೀಡಿದರು.
ದಾಖಲೆ ಲಾಭ ಮತ್ತು ಕನಿಷ್ಠ ಎನ್ ಪಿಎ ಜೊತೆಗೆ 2022- 23ನೇ ಹಣಕಾಸು ವರ್ಷದಲ್ಲಿ ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ನೇತೃತ್ವದ ಆಡಳಿತ ಮಂಡಳಿ, ಅಧಿಕಾರಿ ವರ್ಗ ಮತ್ತು ಸಿಬ್ಬಂದಿಗಳ ಶ್ರಮದಿಂದ ಬ್ಯಾಂಕ್ ಸ್ಥಾಪನೆಯಾದಂದಿನಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ಮಾತ್ರ ಸೀಮಿತವಾಗಿದ್ದ ಬ್ಯಾಂಕಿನ ಕಾರ್ಯಕ್ಷೇತ್ರವನ್ನು ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಹೀಗೆ 5 ಜಿಲ್ಲೆಗಳಿಗೆ ವಿಸ್ತರಿಸಲಾಗಿದೆ. ಶೀಘ್ರದಲ್ಲೇ ಈ ಜಿಲ್ಲೆಗಳಲ್ಲಿ ಬ್ಯಾಂಕಿನ ಶಾಖೆಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ನುಡಿದರು.


ಕರ್ನಾಟಕ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಎಂಸಿಸಿ ಬ್ಯಾಂಕಿಗೆ 111 ವರ್ಷಗಳ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಪ್ರಪ್ರಥಮ ಬಾರಿಗೆ 1.37% ಎನ್ ಪಿಎ ದಾಖಲಾಗಿದೆ. ಬ್ಯಾಂಕಿನ ಇತಿಹಾಸದಲ್ಲೇ 2022-23ನೇ ವಿತ್ತೀಯ ವರ್ಷದಲ್ಲಿ ಮೊದಲ ಬಾರಿಗೆ ಸ್ಥಾಪಕರ ದಿನಾಚರಣೆಯನ್ನು ಬ್ಯಾಂಕಿನಲ್ಲಿ ಸಂಭ್ರಮೋಲ್ಲಾಸದಿಂದ ಆಚರಿಸಲಾಯಿತು. ನವೀಕೃತ ಸಭಾ ಭವನಕ್ಕೆ ಸ್ಥಾಪಕರ ಹೆಸರು ಇಡಲಾಯಿತು. ಎಲ್ಲ 16 ಶಾಖೆಗಳಲ್ಲಿ ಗ್ರಾಹಕರ ಸಮಾವೇಶ ಏರ್ಪಡಿಸಲಾಯಿತು. ಇದು ಬ್ಯಾಂಕಿನ ಗ್ರಾಹಕರ ಸಂಖ್ಯೆ ವೃದ್ದಿಸಲು ಸಹಕಾರಿ ಆಯಿತು ಎಂದು ಅನಿಲ್ ಲೋಬೊ ತಿಳಿಸಿದರು.
ಬ್ಯಾಂಕಿನ ಶತಮಾನೋತ್ತರ ದಶಮಾನೋತ್ಸವವನ್ನು ಸಾಮಾಜಿಕ ಕಾಳಜಿಯೊಂದಿಗೆ ಸಮಾಜದ ಅಶಕ್ತ ವರ್ಗದ ಜನರ ಚಿಕಿತ್ಸೆ, ವಸತಿ ನಿವೇಶನ ದುರಸ್ತಿ, ಮಕ್ಕಳ ವಿದ್ಯಾಭ್ಯಾಸ ಹಾಗೂ ಹೆಣ್ಣು ಮಕ್ಕಳ ವಿವಾಹ ವೆಚ್ಚಕ್ಕೆ ನೆರವು ನೀಡುವುದರ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು ಎಂದು ಬ್ಯಾಂಕ್ ಉಪಾಧ್ಯಕ್ಷ ಜೆರಾಲ್ಡ್ ಜೂಡ್ ಡಿಸಿಲ್ವ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಹಾ ಪ್ರಬಂಧಕ ಸುನಿಲ್ ಮಿನೇಜಸ್, ಸದಸ್ಯರಾದ ಆಂಡ್ರ್ಯೂ ಡಿಸೋಜ, ಡಾ. ಜೆರಾಲ್ಡ್ ಪಿಂಟೊ, ಅನಿಲ್ ಪತ್ರಾವೊ, ಜೆ.ಪಿ. ರೊಡ್ರಿಗಸ್, ಡೇವಿಡ್ ಡಿಸೋಜ, ಎಲ್ರೋಯ್ ಕಿರಣ್ ಕ್ರಾಸ್ಟೊ, ಹೆರಾಲ್ಡ್ ಮೊಂತೆರೊ, ರೋಶನ್ ಡಿಸೋಜ, ವಾರ್ಸೆಲ್ ಡಿಸೋಜ, ಸಿ.ಜಿ. ಪಿಂಟೋ, ಸುಶಾಂತ್ ಸಲ್ದಾನ್ಹಾ, ಐರಿನ್ ರೆಬೆಲ್ಲೊ, ಡಾ. ಫ್ರೀಡಾ ಡಿಸೋಜ, ಅಲ್ವಿನ್ ಪಿ. ಮೊಂತೆರೊ, ಫೆಲಿಕ್ಸ್ ಡಿಕ್ರೂಜ್ ಹಾಗೂ ಶರ್ಮಿಳಾ ಮಿನೇಜಸ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು