9:20 PM Sunday16 - November 2025
ಬ್ರೇಕಿಂಗ್ ನ್ಯೂಸ್
ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ…

ಇತ್ತೀಚಿನ ಸುದ್ದಿ

ಮೂಡಿಗೆರೆ ಪೊಲೀಸ್ ಠಾಣೆ ಮಹಡಿಯೇರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

15/04/2023, 10:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಹಿಳೆಯೊಬ್ಬರು ಪೊಲೀಸ್ ಠಾಣೆಯ ಮಹಡಿ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮೂಡಿಗೆರೆಯಲ್ಲಿ ನಡೆದಿದೆ. ಹಳೇ ಮೂಡಿಗೆರೆ ಗ್ರಾಮದ ಶಿಲ್ಪಾ ಎಂಬುವವರು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ.
ಮಹಿಳೆ ಹಾಗೂ ಅವರ ಅಕ್ಕನ ನಡುವೆ ಗಲಾಟೆ ನಡೆದಿತ್ತು. ಈ ಸಂಬಂಧ ಮೂಡಿಗೆರೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ವಿಚಾರಣೆ ವೇಳೆ ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಳು. ಇದೇ ವಿಚಾರಕ್ಕೆ 2022ರಲ್ಲಿ ಮೂಡಿಗೆರೆ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಕಳೆದ ಒಂದು ವರ್ಷದಿಂದ ಮಹಿಳೆ ನ್ಯಾಯಾಲಯಕ್ಕೆ ಹಾಜರಾಗದ ಕಾರಣ ಸಮನ್ಸ್ ಜಾರಿಗೊಳಿಸಲಾಗಿತ್ತು. ಇದರಿಂದ ಬೇಸತ್ತು ಮಹಿಳೆ ಕೋರ್ಟ್ ಸಮನ್ಸ್ ಹಿಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದೀಗ ಮಹಿಳೆ ಆತ್ಮಹತ್ಯೆಗೆ ಯತ್ನಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು