5:06 PM Tuesday26 - November 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ

ಇತ್ತೀಚಿನ ಸುದ್ದಿ

ಮಂಗಳೂರು ದಕ್ಷಿಣ: ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್. ಲೋಬೋ ಅಖಾಡಕ್ಕೆ; ಮತದಾರರ ಚಿತ್ತ ಎತ್ತ?

15/04/2023, 21:14

ಮಂಗಳೂರು(reporterkarnataka.com): ಬಹು ನಿರೀಕ್ಷಿತ ಮಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೊನೆಗೂ ಘೋಷಣೆಯಾಗಿದೆ. ಡಜನಿಗೂ ಅಧಿಕ ಅಭ್ಯರ್ಥಿ ಗಳ ನಡುವಿನ ಹಗ್ಗ ಜಗ್ಗಾಟದಲ್ಲಿ ಕೊನೆಗೂ ಟಿಕೆಟ್ ಮಾಜಿ ಶಾಸಕ ಜೆ.ಆರ್. ಲೋಬೋ ಅವರ ಪಾಲಾಗಿದೆ. ಬಿಜೆಪಿ ಈಗಾಗಲೇ ಹಾಲಿ ಶಾಸಕ ವೇದವ್ಯಾಸ ಕಾಮತ್ ಅವರಿಗೆ ಟಿಕೆಟ್ ಘೋಷಿಸಿದೆ. ಕಾಂಗ್ರೆಸ್ ಟಿಕೆಟ್ ಘೋಷಣೆಯೊಂದಿಗೆ ಇದೀಗ ಮಂಗಳೂರು ದಕ್ಷಿಣ ಕ್ಷೇತ್ರಕ್ಕೆ ಕ್ಲಾರಿಟಿ ದೊರಕಿದೆ. ಹಾಗೆ ಜೆಡಿಎಸ್ ನಿಂದ ಡಾ. ಸುಮತಿ ಹೆಗ್ಡೆ ಸ್ಪರ್ಧಿಸಲಿದ್ದಾರೆ. ಆಮ್ ಆದ್ಮಿ ಪಾರ್ಟಯಿಂದ ಸಂತೋಷ್ ಕಾಮತ್ ಅವರಿಗೆ ಈಗಾಗಲೇ ಟಿಜೆಟ್ ಲಭಿಸಿದೆ.

ಮಂಗಳೂರು ದಕ್ಷಿಣದ ಕ್ಷೇತ್ರದ ಚುನಾವಣಾ ರಂಗು ಬದಲಾಗಿದೆ. ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರು ಎರಡನೇ ಅವಧಿಗೆ ಸ್ಪರ್ಧಿಸುತ್ತಿದ್ದಾರೆ. 2013ರಲ್ಲಿ ಶಾಸಕರಾಗಿ ಆಯ್ಕೆಗೊಂಡಿದ್ದ ಕಾಂಗ್ರೆಸ್ ನ ಲೋಬೊ ಅವರು 2018ರ ಚುನಾವಣೆಯಲ್ಲಿ ಆಕಸ್ಮಿಕವಾಗಿ ಸೋಲು ಅನುಭವಿಸಿದ್ದರು. ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ನಡೆಸಿ, ಮಂಗಳೂರು ನಗರಕ್ಕೆ ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನಗೊಳ್ಳುವಲ್ಲಿ ಲೋಬೊ ಅವರು ಪ್ರಮುಖ ಪಾತ್ರ ವಹಿಸಿದ್ದರು. ಲೋಬೊ ಅವರ ಅಭಿವೃದ್ಧಿ ಕಾರ್ಯವನ್ನು ಅವರ ರಾಜಕೀಯ ವಿರೋಧಿಗಳು ಕೂಡ ಒಪ್ಪಿಕೊಳ್ಳುತ್ತಾರೆ.
ಮಂಗಳೂರು ಮಹಾನಗರಪಾಲಿಕೆಯ ಕಮಿಷನರ್ ಆಗಿ ಕಾರ್ಯನಿರ್ವಹಿಸಿದ ಓರ್ವ ಸರಕಾರಿ ಅಧಿಕಾರಿಯಾಗಿದ್ದ ಲೋಬೊ ಅವರು ರಾಜಕೀಯಕ್ಕೆ ಬಂದಿರುವುದು ಕೂಡ ಆಕಸ್ಮಿಕವೇ.
ಜೆ.ಆರ್.ಲೋಬೊ ಅವರು ಹೆಚ್ಚು ಮಾತನಾಡಲಾರರು. ಕಡಿಮೆ ಮಾತನಾಡಿ ಹೆಚ್ಚು ಕೆಲಸ ಮಾಡುವ ಛಾತಿ ಅವರದ್ದು. ಅಧಿಕಾರಿಯಾಗಿದ್ದಾಗಲೂ, ನಂತರ ಶಾಸಕರಾದ ಬಳಿಕವೂ ಅವರದ್ದು ಮಿತವಾದ ಮಾತು. ಯಾವುದೇ ಹಿಂಬಾಲಕರನ್ನು ಕಟ್ಟಿಕೊಳ್ಳದೆ ಸದ್ದುಗದ್ದಲವಿಲ್ಲದ ತಿರುಗಾಡುವ ಜಾಯಮಾನ ಅವರದ್ದು. ಲೋಬೊ ಅವರ ಈ ಗುಣಗಳನ್ನೇ ಮತದಾರರು ಹೆಚ್ಚು ಇಷ್ಟಪಡುತ್ತಾರೆ.
2018ರ ಚುನಾವಣೆಯ ವೇಳೆ ನಡೆದ ಕೆಲವೊಂದು ವಿದ್ಯಮಾನ ಲೋಬೊ ಅವರ ಹಿನ್ನಡೆಗೆ ಕಾರಣವಾಗಿತ್ತು. ಆದರೆ ಈಗ ಅಂತಹ ಪರಿಸ್ಥಿತಿ ಇಲ್ಲವೆಂದು ಅವರ ಅಭಿಮಾನಿಗಳು ಹೇಳುತ್ತಾರೆ. ಅವರನ್ನು ಸೋಲಿಸಿದ ಮತದಾರರೇ ಮುಂದಿನ ದಿನಗಳಲ್ಲಿ ಪಶ್ಚಾತ್ತಾಪ ಪಟ್ಟದುಂಟು.
ಇದೀಗ ಲೋಬೊ ಅವರಿಗೆ ಕಾಂಗ್ರೆಸ್ ನಿಂದ ಮೂರನೇ ಬಾರಿ ಸ್ಪರ್ಧಿಸಲು ಅವಕಾಶ ದೊರಕಿಗೆ. ಎರಡನೇ ಬಾರಿ ಸ್ಪರ್ಧಿಸುತ್ತಿರುವ ಹಾಲಿ ಶಾಸಕ ವೇದವ್ಯಾಸ ಕಾಮತ್ ಅವರು ಪ್ರಮುಖ ಎದುರಾಳಿ. ಗೆಲುವು ಯಾರಿಗೆ ಎಂಬುದನ್ನು ಮೇ 13ರ ವರೆಗೆ ಕಾದು ನೋಡಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು