8:37 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಸಂಧಾನ ವಿಫಲ: ಬಿಜೆಪಿಗೆ ರಾಜೀನಾಮೆ ಘೋಷಿಸಿದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್

16/04/2023, 08:49

ಹುಬ್ಬಳ್ಳಿ(reporterkarnataka.com): ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಟಿಕೆಟಿಗೆ ಸಂಬಂಧಿಸಿದಂತೆ ಬಿಜೆಪಿ ಕೇಂದ್ರೀಯ ನಾಯಕರ ಜತೆ ನಡೆಸಿದ ಮಾತುಕತೆ ವಿಫಲವಾಗಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಡರ್ ಬಿಜೆಪಿಗೆ ರಾಜೀನಾಮೆ ಘೋಷಿಸಿದಿದ್ದಾರೆ.
ಬಿಜೆಪಿ ವರಿಷ್ಢ ನಾಯಕ ಧರ್ಮೇಂದ್ರ ಪ್ರಧಾನ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರು ಶೆಟ್ಟರ್ ಜತೆ ಸಂಧಾನ ನಡೆಸಲು ಹುಬ್ಬಳಿಯ ನಿವಾಸಕ್ಕೆ ಆಗಮಿಸಿದ್ದರು. ಆದರೆ ಕೇಂದ್ರ ನಾಯಕರ ಜತೆಗಿನ ಮಾತುಕತೆ ವಿಫಲವಾಗಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಶೆಟ್ಟರ್ ಅವರು ಪಕ್ಷಕ್ಕೆ ತನ್ನ ರಾಜೀನಾಮೆ ಘೋಷಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಬಿಜೆಪಿ ಟಿಕೆಟ್ ಕೊಡದಿದ್ದರೂ ಸ್ಪರ್ಧಿಸಿಯೇ ಸಿದ್ದ ಎಂದು ಕೇಸರಿ ಪಾಳಯಕ್ಕೆ ಸೆಡ್ಡು ಹೊಡೆದಿದ್ದಾರೆ.
ಮೊನ್ನೆಯವರೆಗೂ ನನಗೆ ಟಿಕೆಟ್ ನೀಡುವ ಭರವಸೆ ನೀಡಲಾಗಿತ್ತು. ನನ್ನ ರಾಜಕೀಯ ಇತಿಹಾಸದಲ್ಲಿ ಯಾವುದೇ ಕಪ್ಪು ಚುಕ್ಕಿ ಇಲ್ಲ. ನನ್ನ ವಿರುದ್ಧ ಯಾವುದೇ ಭ್ರಷ್ಟಾಚಾರದ ಆರೋಪ ಇಲ್ಲ. 2018ರ ಚುನಾವಣೆಯಲ್ಲೂ 21 ಸಾವಿರ ಮತಗಳ ಅಂತರದಿಂದ ಜಯಗಳಿಸಿದ್ದೇನೆ. ಪ್ರತಿ ಬಾರಿಯ ಚುನಾವಣೆಯಲ್ಲೂ ದೊಡ್ಡ ಅಂತರದಲ್ಲಿ ಗೆಲುವು ಸಾಧಿಸಿದ್ದೇನೆ. ನನ್ನ ಕ್ಷೇತ್ರದಲ್ಲಿ ಮಾಡಲು ಇನ್ನಷ್ಟು ಕೆಲಸವಿದೆ. ಇನ್ನೊಂದು ಬಾರಿ ತನಗೆ ಅವಕಾಶ ನೀಡಬೇಕೆಂದು ಕೋರಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೇಳಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು