7:36 PM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಮಂಗಳೂರು ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ ಅವರ ಚುನಾವಣಾ ಕಚೇರಿ ಉದ್ಘಾಟನೆ

17/04/2023, 19:44

ಚಿತ್ರ :ಅನುಷ್ ಪಂಡಿತ್ ಮಂಗಳೂರು

ಮಂಗಳೂರು(reporterkarnataka.com): ಮಂಗಳೂರು ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ ಅವರ ನೂತನ ಚುನಾವಣಾ ಕಚೇರಿಯನ್ನು ಸೋಮವಾರ ನಗರದ ಕದ್ರಿ ನಂತೂರು ರಸ್ತೆಯ ಜಿಮ್ಮಿಸ್ ಸೂಪರ್ ಮಾರ್ಕೆಟ್‍ ಎದುರುಗಡೆಯ ಒರೇನಿಯಾ ವಾಣಿಜ್ಯ ಸಂಕೀರ್ಣದಲ್ಲಿ ಉದ್ಘಾಟಿಸಲಾಯಿತು.


ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತರಾದ ಪದ್ಮನಾಭ್ ಅಮೀನ್ ಮತ್ತು ಸದಾಶಿವ ಅಮೀನ್ ಅವರು ದೀಪ ಬೆಳಗಿಸುವ ಮೂಲಕ ಚುನಾವಣಾ ಕಚೇರಿ ವಿಧ್ಯುಕ್ತವಾಗಿ ಉದ್ಘಾಟನೆ ಮಾಡಿದರು.
ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೋ ಅವರು ಮಾತನಾಡಿ, ನಗರದಲ್ಲಿ ಹಲವು ಶಿಕ್ಷಣ ಸಂಸ್ಥೆಗಳಿದ್ದರೂ ಯುವಕರು ಉದ್ಯೋಗದಿಂದ ವಂಚಿತರಾಗಿದ್ದಾರೆ. ಸಮಾಜದಲ್ಲಿ ಶಾಂತಿ- ಸೌಹಾರ್ದತೆ ಕಾಪಾಡಲು ಹಾಗೂ ಅಭಿವೃದ್ಧಿಗೆ ಜನರು ಬದಲಾವಣೆ ತಂದು ರಾಜ್ಯದಲ್ಲಿ ಉತ್ತಮ ಸರಕಾರವನ್ನು ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು
ಸಂವಿಧಾನ ಉಳಿಸಿ ಸಮಾಜದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡಲು ಈ ಚುನಾವಣೆ ಅತ್ಯಂತ ಮಹತ್ವದ್ದು ಆಗಿದೆ. ಕ್ಷೇತ್ರದ ಅಭಿವೃದ್ಧಿಗೆ ಜನರು ಚುನಾವಣೆಗೆ ಆದ್ಯತೆ ನೀಡಬೇಕು ಎಂದು ಲೋಬೊ ನುಡಿದರು.

ವಿಧಾನ ಪರಿಷತ್‌ನ ಮಾಜಿ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಕೆ.ಎಸ್. ಮಸೂದ್ ಮಾತನಾಡಿ, ಜೆ. ಆರ್.ಲೋಬೊ ಅವರನ್ನು ಶಾಸಕರನ್ನಾಗಿ ಮಾಡಲು ಪಕ್ಷದ ಎಲ್ಲಾ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಬೇಕು. ಜಾತಿ, ಧರ್ಮದ ಭೇದವಿಲ್ಲದೆ ಎಲ್ಲರೂ ಅವರ ಗೆಲುವಿಗೆ ಅವಿರತವಾಗಿ ಶ್ರಮಿಸಬೇಕು ಎಂದರು.
ಧರ್ಮಗುರುಗಳಾದ ರಿಯಾಝ್ ಫೈಝಿ ಮತ್ತು ಫಾದರ್ ರೋನ್ಸನ್ ಪಿಂಟೊ , ಪುರೋಹಿತ ವಿಶ್ವನಾಥ ಭಟ್ ಅವರು ಆಶೀರ್ವಚನ ನೀಡಿದರು.


ದಕ್ಷಿಣ ಕನ್ನಡ ಕಾಂಗ್ರೆಸ್ ಪಕ್ಷದ ಚುನಾವಣಾ ಸಂಯೋಜಕಿ ಶಿಭಾ ರಾಮಚಂದ್ರನ್, ಲೋಬೊ ಅವರ ಪತ್ನಿ ಫಿಲೋಮಿನಾ ಲೋಬೊ, ಕಾಂಗ್ರೆಸ್‌ ಹಿರಿಯ ಧುರೀಣ ಸುರೇಶ್ ಬಲ್ಲಾಳ್, ಶಶಿಧರ್ ಹೆಗ್ಡೆ, ವಿಶ್ವಾಸ್ ದಾಸ್, ನವೀನ್ ಡಿಸೋಜ, ಸಬಿತಾ ಮಿಸ್ಕಿತ್, ಪ್ರಕಾಶ್ ಸಾಲಿಯಾನ್, ಟಿ ಕೆ ಸುಧೀರ್, ಎಂ.ಜಿ. ಹೆಗ್ಡೆ ಉಪಸ್ಥಿತರಿದ್ದರು. ವಿಧಾನ ಪರಿಷತ್‌ನ ಮಾಜಿ ಸದಸ್ಯ ಐವನ್ ಡಿಸೋಜ ಅವರು ಅತಿಥಿಗಳನ್ನು ಸ್ವಾಗತಿಸಿ, ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು