7:10 PM Tuesday26 - November 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ

ಇತ್ತೀಚಿನ ಸುದ್ದಿ

ಮೂಡುಬಿದರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ನಾಮಪತ್ರ ಸಲ್ಲಿಕೆ: ಮಹಮ್ಮಾಯಿ ದೇವರ ದರ್ಶನ ಪಡೆದು ಮೆರವಣಿಗೆ

17/04/2023, 22:42

ಮೂಡುಬಿದಿರೆ(reporterkarnataka.com): ಮೂಡುಬಿದಿರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಸೋಮವಾರ ಸಾವಿರಾರು ಕಾರ್ಯಕರ್ತರು ಹಾಗೂ ಅಭಿಮಾನಿಗಳ ಜತೆ ತೆರಳಿ ನಾಮಪತ್ರ ಸಲ್ಲಿಸಿದರು.
ಸೋಮವಾರ ಬೃಹತ್ ಮೆರವಣಿಗೆಯಲ್ಲಿ ಮೂಡುಬಿದರೆ ಆಡಳಿತಸೌಧಕ್ಕೆ ಬಂದು ಚುನಾವಣಾಧಿಕಾರಿ ಮಹೇಶ್ಚಂದ್ರ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದರು.
ಸ್ವರಾಜ್ಯ ಮೈದಾನದಲ್ಲಿರುವ ಮಹಮ್ಮಾಯಿ ದೇವರ ದರ್ಶನ ಪಡೆದ ಅವರು ತಾಸೆ, ಹುಲಿವೇಷಗಳ ಕುಣಿತ, ಚೆಂಡೆ, ವಾದ್ಯ ಘೋಷಗಳೊಂದಿಗೆ ಮೆರವಣಿಗೆಯಲ್ಲಿ ತೆರದ ಜೀಪ್ ನಲ್ಲಿ ಸಾಗಿ ಬಂದರು.
ಈ ಸಂದರ್ಭದಲ್ಲಿ ಮಾತನಾಡಿದ ಮಿಥುನ್ ರೈ, ಮೂಡುಬಿದಿರೆ ಕ್ಷೇತ್ರದಲ್ಲಿ ಮತದಾರರು ನನ್ನನ್ನು ಶಾಸಕನಾಗಿ ಚುನಾಯಿಸಿದಲ್ಲಿ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿ ಹಾಗೂ ಸರಕಾರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಿ ಖಾಸಗಿ ಆಸ್ಪತ್ರೆಗೆ ಸಮಾನವಾದ ಚಿಕಿತ್ಸಾ ಸೌಲಭ್ಯ ಒದಗಿಸುತ್ತೇನೆ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋಮು ಸಂಘರ್ಷಕ್ಕೆ ನಿರುದ್ಯೋಗ ಸಮಸ್ಯೆಯೇ ಕಾರಣ ಎಂದರು.
ರಾಜಕೀಯ ಗುರು ಅಭಯಚಂದ್ರರು ಕೃಷ್ಣ, ನಾನು ಅರ್ಜುನ. ನಮ್ಮೊಳಗೆ ವೈಮನಸ್ಸು ಉಂಟಾಗಿದೆ ಎಂದು ಕೆಲವರು ಜಾಲತಾಣಗಳಲ್ಲಿ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಇಂತಹ ಯಾವುದೇ ಘಟನೆ ನಡೆದಿಲ್ಲ, ಮುಂದೆಯೂ ಆಗುವುದಿಲ್ಲ. ಕ್ಷೇತ್ರಕ್ಕೆ ಅಭಯಚಂದ್ರ ಜೈನ್ ಅವರ ಕೊಡುಗೆ ಯಾರೂ ಮರೆಯುವಂತಿಲ್ಲ ಎಂದರು.
ಕೆಪಿಸಿಸಿ ವಕ್ತಾರ, ಕೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಮುರೋಳಿ ಮಾತನಾಡಿದರು. ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ’ ಮಿಥುನ್ ರೈ ಅವರನ್ನು ಮೂಡುಬಿದಿರೆಗೆ ಆರಿಸಿದ್ದು ಕೆಪಿಸಿಸಿ ಅಲ್ಲ, ಮೂಡುಬಿದಿರೆ ಜನರೇ ಮಿಥುನ್ ರೈ ಅವರನ್ನು ಆಯ್ಕೆ ಮಾಡಿದ್ದಾರೆ’ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು