12:19 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಮಂಗಳೂರು ಉತ್ತರ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ನಾಮಪತ್ರ ಸಲ್ಲಿಕೆ: ಭಾರೀ ಜನಸ್ತೋಮದೊಂದಿಗೆ ಪಾದಯಾತ್ರೆ

18/04/2023, 23:42

ಮಂಗಳೂರು(reporterkarnataka.com): ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ವೈ. ಭರತ್ ಶೆಟ್ಡಿ ಅವರು ಸಾವಿರಾರು ಕಾರ್ಯಕರ್ತರು ಹಾಗೂ ಅಭಿಮಾನಿಗಳ ಜತೆ ತೆರಳಿ ಮಂಗಳವಾರ ನಾಮಪತ್ರ ಸಲ್ಲಿಸಿದರು.
ನಗರದ ಹಂಪನಕಟ್ಟೆ ಬಳಿಯ ಮಿನಿ ವಿಧಾನ ಸೌಧದ ತಾಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿಯವರಿಗೆ ಡಾ. ಭರತ್ ಶೆಟ್ಡಿ ನಾಮಪತ್ರ ಸಲ್ಲಿಕೆ ಮಾಡಿದರು.
ಇದಕ್ಕೆ ಮುನ್ನ ಪಕ್ಷದ ಪ್ರತಿನಿಧಿಗಳು, ಕಾರ್ಯಕರ್ತರು ಹಾಗೂ ಬೆಂಬಲಿಗರ ಸಮ್ಮುಖದಲ್ಲಿ ಡಾ. ಭರತ್ ಶೆಟ್ಟಿ ಅವರು ಕಾವೂರು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ಕಾವೂರು ಮಹಾಲಿಂಗೇಶ್ವರ ದೇವಸ್ಥಾನದಿಂದ ಸಾರ್ವಜನಿಕ ಸಭೆ ಆಯೋಜಿಸಿದ್ದ ಕಾವೂರು ಮೈದಾನದವರೆಗೆ ನಡೆದ ಕಾಲ್ನಡಿಗೆ ಜಾಥಾದಲ್ಲಿ ತೆರಳಿ್ರು. ಅಪಾರ ಸಂಖ್ಯೆಯಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಶಾಸಕ ಡಾ. ಭರತ್ ಶೆಟ್ಟಿ ಮಾತನಾಡಿ, ಜನರ ಬೆಂಬಲದಿಂದ ಐದು ವರ್ಷ ಶಾಸಕನಾಗುವ ಅವಕಾಶ ಸಿಕ್ಕಿದೆ. ವೈದ್ಯನಾಗಿದ್ದ ನಾನು ರಾಜಕೀಯಕ್ಕೆ ಹೊಸಬನಾಗಿದ್ದೆ. ಹಿರಿಯ ನಾಯಕರ ಬೆಂಬಲ ಸಿಕ್ಕಿರುವುದು ನನ್ನ ಅದೃಷ್ಟ. ಅಭಿವೃದ್ಧಿಗೆ ನಾನೊಬ್ಬನೇ ಕಾರಣನಲ್ಲ. ನಮ್ಮ ಪಕ್ಷದ ಟೀಮ್ ವರ್ಕ್‌ನಿಂದ ಸಂಪೂರ್ಣ ಅಭಿವೃದ್ಧಿ ನಡೆದಿದೆ ಎಂದು ಅಭಿಪ್ರಾಯಪಟ್ಟರು.


ಬಿಜೆಪಿ ಮುಖಂಡ ತಿಲಕ್ ರಾಜ್ ಮಾತನಾಡಿ, ಡಾ.ಭರತ್ ಶೆಟ್ಟಿ ಅವರು 5 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ಮುಂದಿನ 5 ವರ್ಷಗಳ ಕಾಲ ಮತ್ತೆ ಶಾಸಕರಾಗಿ ಕೆಲಸ ಮಾಡಲು ಅವಕಾಶ ನೀಡಬೇಕು. ಶಾಸಕರಾಗಿ ಜನತೆಗೆ ಸ್ಪಂದಿಸಿ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಕಳೆದ ಚುನಾವಣೆಯಲ್ಲಿ 26,000 ಮತಗಳ ಅಂತರದಿಂದ ಗೆದ್ದಿದ್ದ ಅವರು ಈ ಬಾರಿ 50,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಬೇಕು. ಅದಕ್ಕಾಗಿ ನಾವೆಲ್ಲರೂ ಶ್ರಮಿಸಬೇಕು ಎಂದು ಹೇಳಿದರು.
ಮಾಜಿ ಕಾರ್ಪೊರೇಟರ್, ಕಾಂಗ್ರೆಸ್ ಮುಖಂಡ ಅಶೋಕ್ ಶೆಟ್ಟಿ, ಪುರಂದರ ದಾಸ್ ಕೂಳೂರು, ಶಶಿಕಲಾ ಬಿಜೆಪಿಗೆ ಸೇರ್ಪಡೆ ಆದರು.
ಮೇಯರ್ ಜಯಾನಂದ ಅಂಚನ್, ಬಿಜೆಪಿ ಮುಖಂಡ ಗಣೇಶ್ ಹೊಸಬೆಟ್ಟು, ಪೂಜಾ ಪೈ, ಕೃಷ್ಣ ಶೆಟ್ಟಿ ಕಡಬ, ರಾಜೀವ್ ಕಾಂಚನ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು