8:20 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನಾಮಪತ್ರ ಸಲ್ಲಿಕೆ: ಬೃಹತ್ ಜನಸ್ತೋಮದೊಂದಿಗೆ ಪಾದಯಾತ್ರೆ

19/04/2023, 14:37

ಪುತ್ತೂರು(reporterkarnataka.com): ಪುತ್ತೂರು ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ ಅವರು ಬುಧವಾರ ಸಾವಿರಾರು ಕಾರ್ಯಕರ್ತರ ಜತೆ ಆಗಮಿಸಿ ನಾಮಪತ್ರ ಸಲ್ಲಿಸಿದರು.
ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು ದರ್ಬೆಯ ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಗೆ ಪುಷ್ಪವಿರಿಸಿ, ಕಾಯಿ ಒಡೆದು ಪಾದಯಾತ್ರೆಗೆ ಚಾಲನೆ ನೀಡಿದರು. ಮಂಗಳವಾದ್ಯ, ಕಲ್ಲಡ್ಕ ಗೊಂಬೆ, ಹುಲಿವೇಷ, ನಾಸಿಕ್ ಬ್ಯಾಂಡ್ ನೊಂದಿಗೆ ಮೆರವಣಿಗೆ ಪುತ್ತೂರು ಆಡಳಿತ ಸೌಧಕ್ಕೆ ಆಗಮಿಸಿತು. ಅಶೋಕ್ ಕುಮಾರ್ ರೈ ಅವರು ಆಡಳಿತ ಸೌಧದಲ್ಲಿರುವ ಚುನಾವಣಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಕೆ ಮಾಡಿದರು. ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ, ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಆಲಿ, ವಿಟ್ಲ, ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್, ಕೆಪಿಸಿಸಿ ಸಂಯೋಜಕ ಹೇಮನಾಥ ಶೆಟ್ಟಿ ಕಾವು, ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು