9:10 PM Tuesday18 - November 2025
ಬ್ರೇಕಿಂಗ್ ನ್ಯೂಸ್
Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಬಿಜೆಪಿಯಲ್ಲಿ ರಾಜೀನಾಮೆ ಪರ್ವ: ಟಿಕೆಟ್ ಘೋಷಣೆಗೂ ಮುನ್ನ ಪಕ್ಷಕ್ಕೆ ಗುಡ್ ಬೈ ಘೋಷಿಸಿದ ಆಯನೂರು ಮಂಜುನಾಥ್

19/04/2023, 14:48

ಶಿವಮೊಗ್ಗ(reporterkarnataka.com): ಶಿವಮೊಗ್ಗ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಆಯನೂರು ಮಂಜುನಾಥ್ ಅವರು ಟಿಕೆಟ್ ಘೋಷಣೆಗೂ ಮುನ್ನ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಜತೆಗೆ ವಿಧಾನ ಪರಿಷತ್ ಸದಸ್ಯತ್ವಕ್ಕೂ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.ಬಿಜೆಪಿ ಅಭ್ಯರ್ಥಿ ಗಳ ಪಟ್ಟಿ ಬಿಡುಗಡೆಯಾಗಲಾರಂಭಿಸಿದ ದಿನದಿಂದ ಪಕ್ಷಕ್ಕೆ ರಾಜೀನಾಮೆ ನೀಡುವವರ ಸಂಖ್ಯೆ ಹೆಚ್ಚಾಗಿದೆ. ಮಾಜಿ ಸಿಎಂ ಜಗದೀಶ ಶೆಟ್ಟರ್ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ಈಗಾಗಲೇ ರಾಜೀನಾಮೆ ನೀಡಿ ಕಾಂಗ್ರೆಸ್ ನಿಂದ ಸ್ಪರ್ಧಿಸುತ್ತಿದ್ದಾರೆ.

ಇದು ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ ದೊಡ್ಡ ಹೊಡೆತ ಎಂದೇ ಪರಿಗಣಿಸಲಾಗಿದೆ. ಇದರೊಂದಿಗೆ ಮಲೆನಾಡು ಭಾಗದ ಪ್ರಮುಖ ನಾಯಕ ಆಯನೂರು ಮಂಜುನಾಥ‌ ಅವರು ಪಕ್ಷಕ್ಕೆ ರಾಜೀನಾಮೆ ಘೋಷಿಸಿದ್ದಾರೆ‌. ಟಿಕೆಟ್ ಕೈತಪ್ಪುವುದು ಖಾತ್ರಿಯಾಗುತ್ತಿದ್ದಂತೆ ಮಂಜುನಾಥ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಜೆ ರಾಜೀನಾಮೆ ಪ್ರಕಟಿಸಿದ್ದಾರೆ‌. ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಅವರು ಘೊಷಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು