11:54 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಬಂಟ್ವಾಳ: ಕಾಂಗ್ರೆಸ್ ಹಿರಿಯ ನಾಯಕ ಜನಾರ್ಧನ ಪೂಜಾರಿ ಭೇಟಿಯಾಗಿ ಆಶೀರ್ವಾದ ಪಡೆದ ರಮಾನಾಥ ರೈ

19/04/2023, 21:12

ಬಂಟ್ವಾಳ(reporterkarnataka.com):
ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿರುವ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಬುಧವಾರ ಕಾಂಗ್ರೆಸ್ ನ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಹಿರಿಯ ನಾಯಕನ ಆರೋಗ್ಯ, ಯೋಗಕ್ಷೇಮದ ಬಗ್ಗೆ ವಿಚಾರಿಸಿದರು.
ಗುರುವಾರ ಬೆಳಿಗ್ಗೆ 9 ಗಂಟೆಗೆ ಬಂಟ್ವಾಳ ಶ್ರೀ ವೆಂಕಟರಮಣ ದೇವಸ್ಥಾನದ ಬಳಿಯಿಂದ ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆ ಹೊರಟು, ಮಧ್ಯಾಹ್ನ 12:35ಕ್ಕೆ ಮಿನಿವಿಧಾನಸೌಧದಲ್ಲಿ ರಮಾನಾಥ ರೈ ನಾಮಪತ್ರ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬುಧವಾರ ಬೆಳಿಗ್ಗೆ ಜನಾರ್ಧನ ಪೂಜಾರಿ ಅವರ ಬಂಟ್ವಾಳದ ನಿವಾಸಕ್ಕೆ ಭೇಟಿ ನೀಡಿ ಅವರು ಮಾತುಕತೆ ನಡೆಸಿದರು.
ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ. ಇಂತಹ ವಿಷಯಗಳ ಬಗ್ಗೆ ಬಲವಾಗಿ ಮಾತನಾಡುವವರು ಯಾರೂ ಇಲ್ಲ. ಅದಕ್ಕೋಸ್ಕರವಾದರೂ ರಮಾನಾಥ ರೈ ಗೆದ್ದು ಬರಬೇಕು ಎಂದು ಜನಾರ್ಧನ ಪೂಜಾರಿ ಈ ಸಂದರ್ಭ ಅಭಿಪ್ರಾಯಪಟ್ಟರು. ಅಲ್ಲದೆ, ಈ ಚುನಾವಣೆಯಲ್ಲಿ ರಮಾನಾಥ ರೈ ಮತ್ತೊಮ್ಮೆ ಗೆದ್ದುಬರಲಿ ಎಂದು ಹಾರೈಸಿದರು.
ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಕೆಪಸಿಸಿ ಸದಸ್ಯರುಗಳಾದ ಪಿಯೂಸ್ ಎಲ್. ರೊಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಪ್ರಮುಖರಾದ ಪದ್ಮಶೇಖರ್ ಜೈನ್, ಮಾಯಿಲಪ್ಪ ಸಾಲ್ಯಾನ್ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು