10:47 PM Wednesday14 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ಮೂಡಿಗೆರೆ ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ನಾಮಪತ್ರ ಸಲ್ಲಿಕೆ: 10 ಸಾವಿರಕ್ಕೂ ಹೆಚ್ಚು ಜನರಿಂದ ರೋಡ್ ಶೋ

20/04/2023, 18:51

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ಅವರು ಗುರುವಾರ ಸಹಸ್ರ ಸಹಸ್ರ ಸಂಖ್ಯೆಯ ಕಾರ್ಯಕರ್ತರ ಜೊತೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ದೀಪಕ್ ದೊಡ್ಡಯ್ಯ ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಸಾಥ್ ನೀಡಿದರು.
10 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರೊಂದಿಗೆ ದೀಪಕ್ ದೊಡ್ಡಯ್ಯ ಅವರು ರೋಡ್ ಶೋ ನಡೆಸಿದರು. ಪಕ್ಷದ ಕಚೇರಿಯಿಂದ ಮೂಡಿಗೆರೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಬೃಹತ್ ವೇದಿಕೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ ಮಾಡಿದರು.
ಸಿಟಿ ರವಿ ಅವರು ಮಾಜಿ ಶಾಸಕ ಕುಮಾರಸ್ವಾಮಿ ವಿರುದ್ಧ ಆಣೆ ಪ್ರಮಾಣದ ವಿಚಾರವನ್ನು ಪ್ರಸ್ತಾಪಿಸಿ. ಧರ್ಮಸ್ಥಳದ ಮಂಜುನಾಥ ಸ್ವಾಮಿಗೆ ದೋಖ ಮಾಡಿದ ವ್ಯಕ್ತಿ ಎಚ್ ಡಿ ಕುಮಾರಸ್ವಾಮಿಗೆ ಡೋಕ ಮಾಡದೆ ಇರ್ತಾರ ಅಂತ ಲೇವಡಿ ಮಾಡಿದರು.
ಕುಮಾರಸ್ವಾಮಿ ವಿರುದ್ಧ ನೇರವಾಗಿ ಕಿಡಿ ಕಾರಿದ ಸಿ ಟಿ ರವಿ. ಬೆಕ್ಕು ಕದ್ದು ಮುಚ್ಚಿ ಹಾಲು ಕುಡಿದರೆ ಜಗತ್ತಿಗೆ ಗೊತ್ತಾಗೋದಿಲ್ವೇ ಎಂದು ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು