8:58 PM Wednesday14 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ಕ್ಷೇತ್ರದ ಜನರ ಸೇವಕನಾಗಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ್ದೇನೆ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು

20/04/2023, 19:38

ಬಂಟ್ವಾಳ(reporterkarnataka.com):
ನಿಮ್ಮ ಮನೆಯ ಮಗನಾಗಿ, ಕ್ಷೇತ್ರದ ಜನರ ಸೇವಕನಾಗಿ, ಅತ್ಯಂತ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿದ್ದೇನೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.
ಅವರು ಬಂಟ್ವಾಳ ವಿಧಾನಸಭಾ ಕ್ಷೇತ್ರದ ವೀರಕಂಭ ಗ್ರಾಮದಲ್ಲಿ ಪ್ರಮುಖರ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಸಂದರ್ಭದಲ್ಲಿ ಮಾತನಾಡಿದರು.ಕ್ಷೇತ್ರದಲ್ಲಿ ಮೂರು ಬಾರಿ ಪಾದಯಾತ್ರೆ ನಡೆಸಿದ್ದೇನೆ, ಆ ಸಂದರ್ಭದಲ್ಲಿ ಗ್ರಾಮದ ಸಮಸ್ಯೆ ಗಳನ್ನು ಕಂಡಿದ್ದೇನೆ. ಆ ಬಳಿಕ ಅಂತಹ ಗ್ರಾಮಗಳಿಗೆ ಪ್ರಥಮ ಆದ್ಯತೆಯಲ್ಲಿ ಅಭಿವೃದ್ಧಿ ಮಾಡಿದ್ದೇನೆ. ಕಳೆದ ಅನೇಕ ವರ್ಷಗಳಲ್ಲಿ ಅಭಿವೃದ್ಧಿ ಕಾಣದೆ ಇದ್ದು, ಉದ್ದೇಶಪೂರ್ವಕವಾಗಿ ಕಡೆಗಣಿಸಲಾಗಿರುವ ಗ್ರಾಮೀಣ ಭಾಗಗಳಲ್ಲಿ ಮೊದಲ ಆದ್ಯತೆಯಲ್ಲಿ ಅಭಿವೃದ್ಧಿ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಇದರ ಜೊತೆಯಲ್ಲಿ ಕ್ಷೇತ್ರದ ಪ್ರತಿ ಗ್ರಾಮ ಕ್ಕೂ ಸಮಾನ ರೀತಿಯಲ್ಲಿ ಅನುದಾನ ನೀಡಿ, ಅಭಿವೃದ್ಧಿ ಮಾಡಿದ್ದೇನೆ ಎಂದು ಅವರು ತಿಳಿಸಿದರು.
ಮುಂದಿನ ಅವಧಿಯಲ್ಲಿ ಬಂಟ್ವಾಳ ಕ್ಷೇತ್ರವನ್ನು ರಾಜ್ಯದಲ್ಲಿ ಗುರುತಿಸಲ್ಪಡುವ ರೀತಿಯಲ್ಲಿ ಅಭಿವೃದ್ಧಿ ಮಾಡಬೇಕಾಗಿದೆ ಅನಿಟ್ಟಿನಲ್ಲಿ ಬಿಜೆಪಿಯಿಂದ ನನಗೆ ಅವಕಾಶ ನೀಡಿ ಶಾಸಕನಾಗಿ ಆಯ್ಕೆ ಮಾಡಿ ಎಂದು ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಮಾದವ ಮಾವೆ, ಗ್ರಾಮಪಂಚಾಯತ್ ಅಧ್ಯಕ್ಷ ದಿನೇಶ್ ಪೂಜಾರಿ, ಸದಸ್ಯ ರಾದ ಜಯಪ್ರಸಾದ್ ,ಸಂದೀಪ್, ಜಯಂತಿ, ಮೀನಾಕ್ಷಿ , ಪ್ರಮುಖರಾದ ಸೀಮಾಮಾದವ, ದೇವಿಪ್ರಸಾದ್ ಶೆಟ್ಟಿ, ಚಿದಾನಂದ ಕಲ್ಮಲೆ, ರಮೇಶ್ ಮೈರ, ದಿನೇಶ್ ಗಣೇಶ್ ಕೋಡಿ, ವೀರಪ್ಪ ಮೂಲ್ಯ, ಗಿರಿಯಪ್ಪ ಗೌಡ, ಕೇಶವ ಶೆಟ್ಟಿ ಕೋಡಿ, ಚಂದ್ರಶೇಖರ್ ಬಾಯಿಲ, ನೋಣಯ್ಯ ಎಂ.ಆರ್, ಬೂತ್ ಸಮಿತಿ ಅಧ್ಯಕ್ಷರುಗಳಾದ ಸದಾಶಿವ ಕೇಪುಲಕೋಡಿ,ಪ್ರಕಾಶ್ ಪೂಜಾರಿ, ಧನಂಜಯ ಪಾದೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು