ಇತ್ತೀಚಿನ ಸುದ್ದಿ
ಬಂಟ್ವಾಳ: 187 ಪ್ರಿಸೈಡಿಂಗ್ ಆಫೀಸರ್ ಸೇರಿದಂತೆ 491 ಅಧಿಕಾರಿಗಳಿಗೆ ಮೊದಲ ಹಂತದ ತರಬೇತಿ
21/04/2023, 20:30
ಬಂಟ್ವಾಳ(reporterkarnataka.com):
ಮತದಾನದ ಕರ್ತವ್ಯ ನಿರ್ವಹಣೆ ಬಗ್ಗೆ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ 187 ಪ್ರಿಸೈಡಿಂಗ್ ಅಧಿಕಾರಿಗಳು ಮತ್ತು 304 ಸಹಾಯಕ ಪ್ರಿಸೈಡಿಂಗ್ ಅಧಿಕಾರಿಗಳೂ ಸೇರಿದಂತೆ ಒಟ್ಟು 491 ಅಧಿಕಾರಿಗಳಿಗೆ ಮೊದಲ ಹಂತದ ತರಬೇತಿಯು ಮೊಡಂಕಾಪಿನ ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.
22 ಜನ ಸೆಕ್ಟರ್ ಅಧಿಕಾರಿಗಳು ತರಬೇತಿ ನೀಡಿದರು. ಮಾಸ್ಟರ್ ಟ್ರೈನರ್ ಗಳಾದ ಅಬ್ದುಲ್ ರಝಾಕ್, ಉದಯ ಕುಮಾರ್ ಮತ್ತು ಸನತ್ ರಾಮ್ ಮಾರ್ಗದರ್ಶನ ಮಾಡಿದರು. ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಜಿಲ್ಲಾ ಮಟ್ಟದ ತರಬೇತಿ ನೋಡಲ್ ಅಧಿಕಾರಿಯವರು, ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕರು ಹಾಗೂ ಪದನಿಮಿತ್ತ ಭೂದಾಖಲೆಗಳ ನಿರ್ದೇಶಕರಾದ ನಿರಂಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚುನಾವಣಾಧಿಕಾರಿ ಅಬಿದ್ ಗದ್ಯಾಲ್, ಸಹಾಯಕ ಚುನಾವಣಾಧಿಕಾರಿ ಎಸ್.ಬಿ.ಕೂಡಲಗಿ, ಗ್ರೇಡ್ 2 ತಹಶೀಲ್ದಾರ್ ದಯಾನಂದ ಕೆ.ಎಸ್., ಭೂ ದಾಖಲೆಗಳ ಸಹಾಯಕ ನಿರ್ದೇಶಕರಾದ ಮಧು ಎಂ., ಚುನಾವಣಾ ಉಪತಹಶೀಲ್ದಾರ್ ನವೀನ್ ಕುಮಾರ್ ಬೆಂಜನಪದವು, ಉಪತಹಶೀಲ್ದಾರ್ ನರೇಂದ್ರನಾಥ್ ಮಿತ್ತೂರು, ರಾಜೇಶ್ ನಾಯ್ಕ್ ಎನ್.ಎಮ್,ವಿಜಯ ವಿಕ್ರಮ್ ಚುನಾವಣಾ ಕರ್ತವ್ಯ ನಿರತ ಕಂದಾಯ ಇಲಾಖೆ, ಸರ್ವೆ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು. ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಊಟ ಮತ್ತು ಉಪಾಹಾರದ ವ್ಯವಸ್ಥೆ ಮಾಡಲಾಗಿತ್ತು. ತರಬೇತಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ತರಬೇತಿ ಪಡೆದ ಅಧಿಕಾರಿಗಳಿಗೆ ಈ ಬಗ್ಗೆ ಪರೀಕ್ಷೆ ನಡೆಸಿ ತರಬೇತಿ ಮಟ್ಟವನ್ನು ಪರಿಶೀಲಿಸಲಾಯಿತು. ತರಬೇತಿ ಪಡೆದ ಬಗ್ಗೆ ಮತಗಟ್ಟೆ ಅಧಿಕಾರಿಗಳು ಸಂತೃಪ್ತಿ ಹಾಗೂ ಮತದಾನದ ಕಾರ್ಯ ನಡೆಸಿಕೊಡಲು ಸಿದ್ಧವಿರುವ ಬಗ್ಗೆ ಆತ್ಮ ವಿಶ್ವಾಸ ವ್ಯಕ್ತಪಡಿಸಿದರು.