5:43 PM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ಪ್ರಾಣಿಗಳಿಗೆ ಹಿಂಸೆ ನೀಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ. ರಾಜೇಂದ್ರ ಖಡಕ್ ಎಚ್ಚರಿಕೆ

15/07/2021, 08:15

ಮಂಗಳೂರು (reporterkarnataka news): ಕೋವಿಡ್-19 ಸೋಂಕು ಅಥವಾ ಇನ್ನಿತರ ಯಾವುದೇ ಕಾರಣಗಳಿಂದಾಗಿ ಸಾಕು ಪ್ರಾಣಿ ಹಾಗೂ ಪಕ್ಷಿಗಳ ಪೋಷಣೆ – ರಕ್ಷಣೆ ನಿಲ್ಲಬಾರದು, ಅವುಗಳ ಪೋಷಣೆಗೆ ಅಗತ್ಯವಿರುವ ಎಲ್ಲ ರೀತಿಯ ಸಹಕಾರವನ್ನು ಜಿಲ್ಲಾಡಳಿತದಿಂದ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದರು. 
ಅವರು ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಪ್ರಾಣಿ ದಯಾ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಪ್ರಾಣಿಗಳು ರಸ್ತೆ ಬದಿಯಲ್ಲಿ ಅನಾಥವಾಗಿ ಬಿದ್ದಿರುವುದು ಕಂಡುಬರುತ್ತಿದ್ದು, ಅಂತಹ ಪ್ರಾಣಿಗಳ ರಕ್ಷಣೆ ಹಾಗೂ ಪೋಷಣೆಗೆ ಪ್ರಾಣಿ ದಯಾ ಸಂಘವು ಕಾರ್ಯನಿರ್ವಹಿಸುವುದರೊಂದಿಗೆ, ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು, ಪ್ರಾಣಿ ಹಿಂಸೆಗಳ ದುಷ್ಟರಿಣಾಮಗಳ ಕುರಿತು ಅರಿವು ಮೂಡಿಸಬೇಕು ಎಂದು ಹೇಳಿದರು.
ಪ್ರಾಣಿಗಳನ್ನು ಮಾರಾಟ ಮಾಡುವುದು ಅಥವಾ ಕೊಲ್ಲುವುದು ಕಂಡುಬಂದಲ್ಲಿ ಪ್ರಾಣಿ ದಯಾ ಸಂಘದ ಸದಸ್ಯರು ಪ್ರಕರಣ ದಾಖಲಿಸಬೇಕು, ಗೋಶಾಲೆ ನಿರ್ಮಾಣಕ್ಕೆ ಸ್ಥಳ ಗುರುತಿಸಲು ಅಧಿಕಾರಿಗಳು ಕಾಳಜಿ ವಹಿಸಬೇಕು, ಜಿಲ್ಲೆಯಲ್ಲಿ ಪ್ರತೀ ಗ್ರಾಮದಲ್ಲಿ ಗೋಮಾಳ ನಿರ್ಮಿಸಿ ಅದರ ನಿರ್ವಹಣೆಯನ್ನು ಸ್ಥಳೀಯ ದೇವಸ್ಥಾನಗಳಿಗೆ ನೀಡಬೇಕು, ಅದಕ್ಕೆ ಸಂಬಂಧಿಸಿದ ಖರ್ಚು-ವೆಚ್ಚವನ್ನು ಜಿಲ್ಲಾಡಳಿತದ ವತಿಯಿಂದ ಭರಿಸಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕಸ ವಿಂಗಡಣೆ ಸರಿಯಾದ ಕ್ರಮದಲ್ಲಿ ಆಗದಿರುವ ಕಾರಣ ಗಾಜು, ಪ್ಲಾಸ್ಟಿಕ್, ಮೂಳೆ ಇನ್ನಿತರ ಅಪಾಯಕಾರಿ ವಸ್ತುಗಳನ್ನು ಪ್ರಾಣಿಗಳು ಸೇವಿಸಿ ಸಾವಿಗೀಡಾಗುತ್ತಿವೆ, ಹಾಗಾಗಿ ತ್ಯಾಜ್ಯ ವಿಂಗಡಣೆಗೆ ಸರಿಯಾದ ಕ್ರಮ ಆಗಬೇಕು, ಪ್ರತೀ ಪಂಚಾಯತ್ ವ್ಯಾಪ್ತಿಯಲ್ಲೂ ಸೂಕ್ತವಾಗಿ ಕಸ ವಿಲೇವಾರಿ ಮಾಡುವ ವ್ಯವಸ್ಥೆ ಆಗಬೇಕು ಎಂದು ಹೇಳಿದರು.
ನಗರದ ಫುಟ್‍ಪಾತ್‍ಗಳಲ್ಲಿರುವ ಪೆಟ್ ಶಾಪ್‍ಗಳಿಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಅನಿರೀಕ್ಷಿತ ಭೇಟಿ ನೀಡಿ, ಅವುಗಳು ನೋಂದಣಿಯಾಗಿರುವ ಬಗ್ಗೆ ಮಾಹಿತಿ ಪಡೆಯಬೇಕು, ನೋಂದಣಿ ಆಗದ ಪೆಟ್ ಶಾಪ್‍ಗಳ ವಿರುದ್ಧ ಕಾನುನು ಬದ್ದ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. 
ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ನಗರದ ಉಪ ಪೊಲೀಸ್ ಆಯುಕ್ತ ಹರಿರಾಮ್ ಶಂಕರ್, ಮಹಾನಗರಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರು, ಪ್ರಾಣಿದಯಾ ಸಂಘದ ಸದಸ್ಯರು ಹಾಗೂ ಇತರರು ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು