12:25 PM Tuesday8 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಮಂಗಳೂರು: ನಾಳೆ ನೋವಿಗೋ ಸೊಲ್ಯುಶನ್ಸ್ ನೂತನ ಶಾಖೆ ಆರಂಭ; 2025ರ ವೇಳೆಗೆ 1500ಕ್ಕೂ ಹೆಚ್ಚು ಉದ್ಯೋಗಾವಕಾಶ

22/04/2023, 20:34

ಮಂಗಳೂರು( reporterkarnataka.com): ಬೆಂಗಳೂರು ಮತ್ತು ಮಂಗಳೂರು ನಗರಗಳಲ್ಲಿ 2012ರಲ್ಲಿ ಆರಂಭಗೊಂಡಿದ್ದ ಹೆಸರಾಂತ ಐಟಿ ಕಂಪನಿಯಾದ ನೋವಿಗೋ ಸೊಲ್ಯುಶನ್ಸ್ ಹೊಸ ಶಾಖೆ ನಗರದ ಪಳ್ನೀರ್ ನಲ್ಲಿ ಏಪ್ರಿಲ್ 23ರಂದು ಸಂಜೆ 5 ಗಂಟೆಗೆ ಉದ್ಘಾಟನೆಗೊಳ್ಳಲಿದೆ.
ನಗರದ ಪಳ್ನೀರ್ ನಲ್ಲಿರುವ ನೋವಿಗೋ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರವೀಣ್ ಕುಮಾರ್ ಕಲ್ಭಾವಿ, ಸಹ ಸಂಸ್ಥಾಪಕ ಮತ್ತು ತಂತ್ರಜ್ಞಾನ ಅಧಿಕಾರಿ ಮೊಹಮ್ಮದ್ ಹನೀಫ್, ಸಹ ಸಂಸ್ಥಾಪಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೊಹಮ್ಮದ್ ಜರೂದ್ ಹಾಗೂ ಸಹ ಸಂಸ್ಥಾಪಕ ಮತ್ತು ಮುಖ್ಯ ಗ್ರಾಹಕ ಅಧಿಕಾರಿ ಶಿಹಾಬ್ ಕಲಂದರ್ ಅವರು ಈ ಕುರಿತು ವಿವರ ನೀಡಿದರು.
ಮಂಗಳೂರಿನ ಫಳ್ನೀರ್ ನಲ್ಲಿರುವ ಕರುಣಾ ಪ್ರೈಡ್ ಸೆಂಟರ್ ನ 5ನೇ ಮಹಡಿಯಲ್ಲಿ ಹೊಸ ಶಾಖೆ ತೆರೆಯಲಿದೆ.

ಉದ್ಘಾಟನಾ ಸಮಾರಂಭದಲ್ಲಿ ಇನ್ಫೋಸಿಸ್ ಬಿಪಿಎಂ ಲಿ. ಸಿಇಒ ಹಾಗೂ ಎಂಡಿ ಎಕ್ಸಿಕ್ಯೂಟಿವ್ ಉಪಾಧ್ಯಕ್ಷರಾದ ಅನಂತ ರಾಧಾಕೃಷ್ಣನ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಜೊತೆಗೆ ವಿವಿಧ ಗಣ್ಯರು ಉಪಸ್ಥಿತರಿರುವರು ಎಂದರು.


ಮಂಗಳೂರಿನಲ್ಲಿ ನೋವಿಗೋ ಸೊಲ್ಯುಶನ್ಸ್ ಕಂಪನಿ ವೇಗವಾಗಿ ಬೆಳೆಯುತ್ತಿದ್ದು, ಮೂರು ವರ್ಷಗಳಲ್ಲಿ ಅನಿಯಮಿತ ಸಾಧನೆ ದಾಖಲಿಸಿದೆ. ದುಬೈ, ಯುಎಇ, ಯುಕೆ, ಸಿಂಗಾಪುರದಲ್ಲಿ ಶಾಖೆ ಹೊಂದಿದ್ದು, ಟೆಕ್ಸಾಸ್ ನ ಡಲ್ಲಾಸ್ ನಲ್ಲಿ ಪ್ರಧಾನ ಕಚೇರಿ ಹೊಂದಿದೆ. ಮಂಗಳೂರು, ಬೆಂಗಳೂರು, ಚೆನ್ನೈ ಮತ್ತು ಕೊಚ್ಚಿಯಲ್ಲಿ ಶಾಖೆ ವಿಸ್ತರಿಸುತ್ತಿದ್ದು, ಮುಂದಿನ ವರ್ಷದಲ್ಲಿ ಕೆನಡಾ, ಕತಾರ್, ನೆದರ್ ಲ್ಯಾಂಡ್ ದೇಶದಲ್ಲಿ ಹೊಸ ಶಾಖೆಯು ಕಾರ್ಯಾಚರಿಸಲಿದೆ ಎಂದು ಅವರು ವಿವರಿಸಿದರು‌.
2025ರ ವೇಳೆಗೆ 1500ಕ್ಕೂ ಹೆಚ್ಚು ಉದ್ಯೋಗ ದೊರಕಿಸುವ ಯೋಜನೆ ಹೊಂದಿದೆ. ಪ್ರಸ್ತುತ 700ಕ್ಕೂ ಅಧಿಕ ಐಟಿ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು