2:33 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಹೆಣ್ಣು ಮಗು ಕರುಣಿಸಿದ ಖುಷಿ: ಕಟೀಲಪ್ಪೆಗೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪಟ್ಟೆಸೀರೆ ಸಮರ್ಪಣೆ

22/04/2023, 23:42

ಕಟೀಲು(reporterkarnataka.com): ಬಯಕೆ ಈಡೇರಿದೆ. ಆಕೆ ಅಂದುಕೊಂಡಂತೆ ಹೆಣ್ಣು ಮಗು ಹುಟ್ಡಿದೆ. ತಾಯಿ ಫುಲ್ ಖುಷಿಗೊಂಡಿದ್ದಾರೆ. ತಾನು ಹೊತ್ತ ಹರಕೆಯಂತೆ ಕರಾವಳಿಯ ಪವಿತ್ರ ಕ್ಷೇತ್ರಗಳಲ್ಲಿ ಒಂದಾದ ಕಟೀಲು ದುರ್ಗಾಪರಮೇಶ್ವರಿಯ ಸನ್ನಿಧಿಗೆ ಬಂದ ಆ ಮಹಾ ತಾಯಿ ಹರಕೆಯೊಪ್ಪಿಸಿದ್ದಾರೆ.
ಈ ಮಹಾ ತಾಯಿ ಬೇರೆ ಯಾರೂ ಅಲ್ಲ, ತುಳುನಾಡು ಮೂಲದ ಖ್ಯಾತ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು. ಹೆಣ್ಣು ಮಗುವಿಗಾಗಿ ಹರಕೆ ಹೊತ್ತಿದ್ದ ಶಿಲ್ಪಾ ಶೆಟ್ಟಿ ಹೆಣ್ಣು ಮಗು ಜನಿಸಿದರೆ ಕಟೀಲು ದುರ್ಗಾ ಪರಮೇಶ್ವರಿಗೆ ಪಟ್ಟೆ ಸೀರೆಯನ್ನು ಕಾಣಿಕೆ ರೂಪದಲ್ಲಿ ನೀಡೋದಾಗಿ ಹರಕೆ ಹೊತ್ತಿದ್ದರಂತೆ. ಅದೇ ರೀತಿ ಇಂದು ಬಂದು ತಮ್ಮ ಹರಕೆಯನ್ನು ತೀರಿಸಿದ್ದಾರೆ.
ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಶಿಲ್ಪಾ ಶೆಟ್ಟಿ ಅವರು ಪತಿ ರಾಜ್ ಕುಂದ್ರಾ. ಮಕ್ಕಳಾದ ವಿಯಾನ್, ಸಮಿಷಾ, ಸಹೋದರಿ ನಟಿ ಶಮಿತಾ ಶೆಟ್ಟಿ. ಶಿಲ್ಪಾ ಶೆಟ್ಟಿಯವರ ತಾಯಿ ಭೇಟಿ ನೀಡಿ ಸೇವೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮೊಕ್ತೇಸರ ವಾಸುದೇವ ಆಸ್ರಣ್ಣ ಪ್ರಸಾದ ನೀಡಿದರು. ಅರ್ಚಕರಾದ ಅನಂತ ಆಸ್ರಣ್ಣ ಶ್ರೀಹರಿ ಆಸ್ರಣ್ಣ ವಕೀಲ ರವಿ ಪೂಜಾರಿ ಉಪಸ್ಥಿತರಿದ್ದರು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೇಗುಲದ ನಾಗಸ್ವರ ವಾದಕರಾದ ಲಿಂಗಪ್ಪ ಸೇರಿಗಾರರ ವಾದ್ಯವಾದನವನ್ನು ಆಲಿಸಿದ ಶಿಲ್ಪಾ ಶೆಟ್ಟಿ ಹಾಗೂ ಶಮಿತಾ ಶೆಟ್ಟಿ ಕಟೀಲು ರಥಬೀದಿಯಲ್ಲಿ ನಡೆಯುತ್ತಿದ್ದ ಯಕ್ಷಗಾನವನ್ನು ಕೆಲಹೊತ್ತು ವೀಕ್ಷಿಸಿ, ವೇಷಗಳ ಪೋಟೋ ತೆಗೆದು ಸಂಭ್ರಮಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು