4:00 PM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

24ನೇ ದೇರೆಬೈಲ್ ವಾರ್ಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲೋಬೊ ಬಿರುಸಿನ ಪ್ರಚಾರ: ಮನೆ ಮನೆ ಭೇಟಿ

23/04/2023, 12:02

ಮಂಗಳೂರು(reporterkarnataka.com): ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್ . ಲೋಬೊ ಅವರು ನಗರದ 24ನೇ ದೇರೆಬೈಲ್ ವಾರ್ಡಿನಲ್ಲಿ ಬಿರುಸಿನ ಪ್ರಚಾರ ಆರಂಭಿಸಿದರು. ವಾರ್ಡಿನ ವ್ಯಾಪ್ತಿಯಲ್ಲಿ ಬರುವ ಆದರ್ಶ ನಗರ ಮತ್ತು ಶಿವ ನಗರದ ಪರಿಸರದಲ್ಲಿ ಬರುವ ಮನೆಗಳಿಗೆ ತೆರಳಿ ಲೋಬೊ ರವರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ವಿಜ್ಞಾಪಿಸಿದರು.ಈ ಸಂದರ್ಭದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಲೋಬೊ ಅವರು, 2013ರಿಂದ 2018ರ ಅವಧಿಯಲ್ಲಿ ಶಾಸಕನಾಗಿದ್ದಾಗ ಅನೇಕ ಯೋಜನೆಗಳನ್ನು ತಂದಿದ್ದೇನೆ. ಮಂಗಳೂರನ್ನು ಅಭಿವೃದ್ಧಿಯ ಪಥದಲ್ಲಿ ಕೊಂಡೋಯ್ಯಲು ಜನರ ಸಹಕಾರ ಅತೀ ಅಗತ್ಯ.ಜನರ ಬೆಂಬಲವಿಲ್ಲದೇ ಯಾವುದೇ ಅಭಿವೃದ್ಧಿ ಆಗುವುದಿಲ್ಲ. ಜನರು ಬದಲಾವಣೆಯನ್ನು ನಿರೀಕ್ಷಿಸುತ್ತಿದ್ದಾರೆ. ಖಂಡಿತವಾಗಿ ಒಳ್ಳೆಯ ದಿನಗಳು ಬರಲಿವೆ ಎಂದರು.


ಈ ಸಂದರ್ಭದಲ್ಲಿ ಮಾಜಿ ಎಂಎಲ್ ಸಿ ಐವನ್ ಡಿಸೋಜ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಬ್ಲಾಕ್ ಅಧ್ಯಕ್ಷ ಪ್ರಕಾಶ್ ಸಾಲ್ಯಾನ್, ಜಿಲ್ಲಾ ಒಬಿಸಿ ಅಧ್ಯಕ್ಷ ವಿಶ್ವಾಸ್ ದಾಸ್, ವಾರ್ಡ್ ಅಧ್ಯಕ್ಷ ರಾಜೇಂದ್ರ ಚಿಲಿಂಬಿ, ಮಾಜಿ ಕಾರ್ಪೊರೇಟರ್ ರಜನೀಶ್, ಮೇಲ್ವಿನ್ ಲೋಬೊ, ಮಿಥುನ್, ಅಶೋಕ್ ಕೋಟ್ಯಾನ್, ಮೈಕಲ್, ಪ್ರವೀಣ್, ಸಂದೇಶ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು