3:37 PM Wednesday14 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ನಾನು ಎಲ್ಲೂ ಓಡಿ ಹೋಗಿಲ್ಲ, ಕಾಂಗ್ರೆಸಿಗರು ನನ್ನನ್ನು ಅಪಹರಿಸಿ ನಾಮಪತ್ರ ವಾಪಸ್ ಪಡೆಯುವಂತೆ ಮಾಡಿದ್ದಾರೆ: ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಕುಂಪಲ ಆರೋಪ

24/04/2023, 19:34

ಮಂಗಳೂರು(reporterkarnataka.com):
ನಾನು ಎಲ್ಲೂ ಓಡಿ ಹೋಗಿಲ್ಲ. ಜೆಡಿಎಸ್ ನಿಂದ ಮಂಗಳೂರು ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ನನ್ನನ್ನು ಕಾಂಗ್ರೆಸ್ ಪಕ್ಷದ ತಂಡವೊಂದು ಅಪಹರಿಸಿ ಬಲವಂತವಾಗಿ ನಾಮಪತ್ರ ಹಿಂತೆಗೆಯುವಂತೆ ಮಾಡಿದೆ ಎಂದು ಮಂಗಳೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಅಲ್ತಾಫ್ ಕುಂಪಲ ಗಂಭೀರ ಆರೋಪ ಮಾಡಿದ್ದಾರೆ.
ನನಗೆ ಯಾವುದೇ ರೀತಿಯಲ್ಲಿ ಆಮಿಷ ಒಡ್ಡಲಾಗಿಲ್ಲ. ನಾನು ಓಡಿ ಹೋಗಲೂ ಇಲ್ಲ.
ನನ್ನನ್ನು ಅಪಹರಿಸಿ ಬೆದರಿಸಿ ನನ್ನಿಂದ ನಾಮಪತ್ರ ಹಿಂದೆ ಪಡೆಯುವಂತೆ ಮಾಡಲಾಗಿದೆ. ಈ ಕುರಿತು ಪೊಲೀಸ್ ಕಮಿಷನರ್ ಅವರಿಗೆ ಭದ್ರತೆ ನೀಡುವಂತೆ ಮನವಿ ಮಾಡಲಾಗಿದೆ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹೇಳಿದರು.
ಜೆಡಿಎಸ್ ರಾಜ್ಯ ವಕ್ತಾರ ಎಂ.ಬಿ. ಸದಾಶಿವ ಅವರು ಮಾತನಾಡಿ, ಈ ಬಾರಿ ಯಾರ ಸಹಾಯವೂ ಇಲ್ಲದೆ ಸ್ವತಂತ್ರವಾಗಿ ನಮ್ಮ ಜೆಡಿಎಸ್ ಪಕ್ಷದ ಸರಕಾರ
ಅಸ್ತಿತ್ವಕ್ಕೆ ಬರಲಿದೆ. ನಾವು ಜನಪರವಾದ ಪಂಚರತ್ನ ಯೋಜನೆಯ ಮೂಲಕ ಜನರ ಮನಸಿಗೆ ಹತ್ತಿರವಾಗಿದ್ದೇವೆ. ಜೆಡಿಎಸ್ ಹೇಳಿರುವ ಜನಪರ ಕಾರ್ಯಕ್ರಮವನ್ನು ಆಡಳಿತಕ್ಕೆ ಬರುವ ಮರುಕ್ಷಣವೇ ಜಾರಿಗೆ ತರಲು ನಾವು ಸಿದ್ಧರಿದ್ದೇವೆ. ಜನರ ಮಧ್ಯೆ ಗೊಂದಲ, ವೈಷಮ್ಯ ಮೂಡಿಸುವ ರಾಜಕೀಯ ನಾವು ಎಂದಿಗೂ ಮಾಡಿಲ್ಲ. ಕುಮಾರಸ್ವಾಮಿ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವುದು ನಿಶ್ಚಿತ ಎಂದರು.
ಜಿಲ್ಲೆಯಲ್ಲಿ 8 ಕಡೆಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದ್ದು ಮಂಗಳೂರು ಉತ್ತರ ಕ್ಷೇತ್ರದಲ್ಲಿ ಮಾಜಿ ಶಾಸಕ, ಕಾಂಗ್ರೆಸ್ ಹಿರಿಯ ಮುಖಂಡ ಮೊಯಿದೀನ್ ಬಾವಾ ಅವರನ್ನು ಕಣಕ್ಕಿಳಿಸಿದ್ದು ಗೆಲ್ಲುವ ವಿಶ್ವಾಸ ನಮ್ಮಲ್ಲಿದೆ.
ವಿಷಾದದ ಸಂಗತಿ ಏನೆಂದರೆ ಜಿಲ್ಲೆಯ 8 ಕ್ಷೇತ್ರಗಳಲ್ಲಿ ಅಭ್ಯರ್ಥಿಯನ್ನು ಹಾಕಿದ್ದೆವು. ಮಂಗಳೂರು ಕ್ಷೇತ್ರದಲ್ಲಿ ಜನಸಾಮಾನ್ಯರಿಗೆ ಬೇಕಾದ ಅಲ್ತಾಫ್ ಕುಂಪಲ ಎಂಬ ಒಬ್ಬ ವ್ಯಕ್ತಿಯನ್ನು ಅವರ ಸಮಾಜಸೇವೆಯನ್ನು ಗುರುತಿಸಿ ಟಿಕೆಟ್ ನೀಡಿದ್ದೇವೆ. ಆದರೆ ಎರಡು ದಿನಗಳ ಹಿಂದೆ ಅವರು ಹಬ್ಬದ ದಿನ ಮಸೀದಿಯಿಂದ ಹೊರಬರುವಾಗ ತಂಡವೊಂದು ಅವರನ್ನು ಬೆದರಿಸಿ ಚುನಾವಣಾಧಿಕಾರಿಯ ಬಳಿಗೆ ಕರೆದೊಯ್ದು ನಾಮಪತ್ರ ಹಿಂತೆಗೆದುಕೊಳ್ಳುವಂತೆ ಮಾಡಲಾಯಿತು. ಇದು ಎಲ್ಲರೂ ಚಿಂತಿಸಬೇಕಾದ ವಿಷಯವಾಗಿದೆ. ಯಾಕೆಂದರೆ ಒಬ್ಬ ಸಾಮಾನ್ಯ ಕಾರ್ಯಕರ್ತನನ್ನೇ ಎದುರಿಸಲಾಗದವರು ಸಮಾಜದ ಜನರನ್ನು ಹೇಗೆ ನಡೆಯಿಸಿಕೊಳ್ಳಬಹುದು?” ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ನಜೀರ್ ಉಳ್ಳಾಲ್, ವಸಂತ ಪೂಜಾರಿ, ಅಶ್ರಫ್ ಸಾಜೀದ್, ಆಶ್ರಫ್ ಖಾಜಿ, ಯುವ ಜನತಾದಳದ ಅಕ್ಷಿತ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು