6:43 AM Wednesday31 - December 2025
ಬ್ರೇಕಿಂಗ್ ನ್ಯೂಸ್
ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ

ಇತ್ತೀಚಿನ ಸುದ್ದಿ

ಕೃಷ್ಣನಗರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಭರ್ಜರಿ ರೋಡ್ ಶೋ: ಕಾಂಗ್ರೆಸ್‌ಗೆ ಮತಯಾಚನೆ

24/04/2023, 19:37

ಉಡುಪಿ(reporterkarnataka.com): ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಕೃಷ್ಣನಗರಿ ಉಡುಪಿಯಲ್ಲಿ ಪಾದಯಾತ್ರೆಯ ಮೂಲಕ ಭರ್ಜರಿ ರೋಡ್ ಶೋ ನಡೆಸಿ ಕಾಂಗ್ರೆಸ್‌ ಗೆ ಮತಯಾಚನೆ ಮಾಡಿದರು.
ರೋಡ್ ಶೋ ಉಡುಪಿಯ ಸಿಟಿ ಬಸ್ ಸ್ಟ್ಯಾಂಡ್ ಬಳಿಯಿಂದ ಸಾವಿರಾರು ಕಾರ್ಯಕರ್ತರೊಂದಿಗೆ ಆರಂಭಗೊಂಡು ನಗರದ ಸರ್ವಿಸ್ ಬಸ್ ನಿಲ್ದಾಣ, ತ್ರಿವೇಣಿ ಸರ್ಕಲ್, ಕೆ ಎಂ. ಮಾರ್ಗ, ಡಯಾನ ಸರ್ಕಲ್, ಹಳೆ ತಾಲೂಕು ಕಚೇರಿ ಮೂಲಕ ಅಜ್ಜರಕಾಡು ಹುತಾತ್ಮ ಸ್ಮಾರಕದ ಬಳಿ ಸಮಾಪನಗೊಂಡಿತು.
ಪಾದಯಾತ್ರೆಯಲ್ಲಿ ಮಾಜಿ ಸಚಿವ ಹಾಗೂ ಕಾಪು ಕ್ಷೇತ್ರದ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ, ಉಡುಪಿ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ನಾಯಕರಾದ ಎಮ್ ಎ ಗಫೂರ್, ಕಿಶನ್ ಹೆಗ್ಡೆ ಕೊಳಕೆಬೈಲು, ವಿಶ್ವಾಸ್ ಅಮೀನ್, ವೆರೋನಿಕಾ ಕರ್ನೆಲಿಯೋ ಹಾಗೂ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು