3:29 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಸಿಎಂ ಕುರ್ಚಿಗೆ ಟವೆಲ್ ಹಾಸಿದ ಸಿ.ಟಿ. ರವಿ!: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪರ ಈಶ್ವರಪ್ಪ ಬಹಿರಂಗ ಬ್ಯಾಟಿಂಗ್!!

25/04/2023, 20:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅಧಿಕಾರಕ್ಕೆ ಬರುವ ಮುನ್ನವೇ ಬಿಜೆಪಿಯಲ್ಲಿ ಸಿಎಂ ಕುರ್ಚಿಗಾಗಿ ಕೂಗು ಹೆಚ್ಚಾಗಲಾರಂಭಿಸಿದೆ. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪರ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಬ್ಯಾಟಿಂಗ್ ಮಾಡಿದ್ದಾರೆ.
ಕಡೂರು ತಾಲೂಕಿನ ನಿಡಘಟ್ಟದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದ
ಬಹಿರಂಗ ಸಭೆಯಲ್ಲೇ ಸಿ.ಟಿ.ರವಿ ಪರ ಈಶ್ವರಪ್ಪ ಒಲವು ತೋರಿಸಿದ್ದಾರೆ.
ಮುಂದಿನ ಸಿಎಂ ಸಿ.ಟಿ.ರವಿ ಆಗಲೆಂದು ಈಶ್ವರಪ್ಪ ಅವರು ಬಹಿರಂಗ ಘೋಷಣೆ ಮಾಡಿದ್ದಾರೆ.

ಸಮಾವೇಶದಲ್ಲಿ ಮಾತಾಡುವ ವೇಳೆಯಲ್ಲಿ ಮುಂದಿನ ಸಿಎಂ ಸಿ.ಟಿ.ರವಿ ಆಗಲೆಂದು ಹೇಳಿದ ಈಶ್ವರಪ್ಪ ಹೇಳಿದ್ದಾರೆ.
ಚಿಕ್ಕಮಗಳೂರಿನಿಂದ ಸಿಟಿ ರವಿ ಗೆಲ್ಲಿಸಿ, ಮುಂದಿನ ಮುಖ್ಯಮಂತ್ರಿ ಆಗಬೇಕೆಂದು ಕೂಡ ಈಶ್ವರಪ್ಪ ಆಶಿಸಿದ್ದಾರೆ.
ನಿನ್ನೆ ಮೈಸೂರಿನಲ್ಲಿ ಸಿ.ಟಿ. ರವಿ ಸಿಎಂ ಆಗುವ ಇಂಗಿತವನ್ನು ಹೊರ ಹಾಕಿದ್ದರು. ಇಂದು ಬಹಿರಂಗ ಸಭೆಯಲ್ಲೇ ಈಶ್ವರಪ್ಪ ಅವರು ರವಿ ಸಿಎಂ ಆಗಲಿ ಎನ್ನುವ ಹೇಳಿಕೆ ನೀಡಿದ್ದಾರೆ‌
ರಾಜ್ಯ ರಾಜಕಾರಣದಲ್ಲಿ ಹಾಗೂ ಬಿಜೆಪಿ ಪಾಳಯದಲ್ಲಿ ಈಶ್ವರಪ್ಪ ಅವರ ಹೇಳಿಕೆಗೆ ಅಷ್ಟು ಮಹತ್ವ ಏನೂ ಇಲ್ಲ. ಭ್ರಷ್ಟಾಚಾರ ಆರೋಪದ ಮೇಲೆ ಅವರು ಮಂತ್ರಿ ಪದವಿ ಕಳೆದುಕೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು