2:43 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಪೊಲೀಸ್ ಧ್ವಜ ಮೆರವಣಿಗೆ: ಕಡಲನಗರಿಯ ಸರ್ವಿಸ್ ಬಸ್ ನಿಲ್ದಾಣದೊಳಗೆ ಖಾಸಗಿ ವಾಹನಗಳ ಸುನಾಮಿ!; ಟ್ರಾಫಿಕ್ ಜಾಮ್

25/04/2023, 22:07

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಜನರು ನಿರ್ಭೀತಿಯಿಂದ ಮತ ಚಲಾಯಿಸುವಂತೆ ಮಾಡುವ ನಿಟ್ಟಿನಲ್ಲಿ ಜನರಲ್ಲಿ ಧೈರ್ಯ ತುಂಬಲು ನಡೆಸಲಾದ ಪೊಲೀಸ್ ಪಥಸಂಚಲನದಿಂದ ನಗರದ ಆಯಕಟ್ಟಿನ ಪ್ರದೇಶದಲ್ಲಿ ಮಂಗಳವಾರ ಸಂಜೆ ಟ್ರಾಫಿಕ್ ಜಾಮ್ ಉಂಟಾಯಿತು. ಖಾಸಗಿ ಸರ್ವಿಸ್ ಬಸ್ ನಿಲ್ದಾಣ ಅಕ್ಷರಶಃ ಕಿಷ್ಕಿಂಧೆಯಾಗಿ ಪರಿವರ್ತನೆಗೊಂಡಿತು.

ಪೊಲೀಸ್ ಪಥಸಂಚಲನ ಸಾಗುವ ಹಿನ್ನೆಲೆಯಲ್ಲಿ ಹ್ಯಾಮಿಲ್ಟನ್ ಸರ್ಕಲ್ ಆಗಿ ಸ್ಟೇಟ್ ಬ್ಯಾಂಕ್ ಕಡೆಗೆ ಸಾಗಲು ಯಾವುದೇ ವಾಹನಗಳಿಗೆ ಪೊಲೀಸರು ಅವಕಾಶ ನೀಡಲಿಲ್ಲ. ಪೊಲೀಸ್ ಕಮಿಷನರ್ ಕಚೇರಿಯ ಎದುರುಗಡೆ ಇರುವ ರಸ್ತೆಯ ಮೂಲಕ ಖಾಸಗಿ ಸಿಟಿ ಬಸ್, ಸರ್ವಿಸ್ ಬಸ್ ಹಾಗೂ ಸರಕಾರಿ ಬಸ್ ಗಳ ಜತೆಗೆ ಎಲ್ಲ ಖಾಸಗಿ ವಾಹನಗಳಿಗೆ, ಆಟೋರಿಕ್ಷಾಗಳಿಗೆ ಸಾಗಲು ಅವಕಾಶ ನೀಡಲಾಯಿತು. ಇದರಿಂದ ಸಂಜೆ ಸುಮಾರು 6.45ರ ವೇಳೆಗೆ ವಾಹನಗಳ ಸುನಾಮಿಯೇ ಒಮ್ಮಿಂದೊಮ್ಮೆಲೇ ಸರ್ವಿಸ್ ಬಸ್ ನಿಲ್ದಾಣದೊಳಗೆ ನುಗ್ಗಿತು. ಇದರಿಂದ ಬಸ್ ನಿಲ್ದಾಣದಲ್ಲಿದ್ದ ಪ್ರಯಾಣಿಕರು ಸ್ವಲ್ಪ ಹೊತ್ತು ಗಲಿಬಿಲಿಗೊಂಡರು. ಹಾಗೆ ಒಂದು ಕ್ಷಣದಲ್ಲಿ ಬಸ್ ಸ್ಟಾಂಡ್ ಕಿಷ್ಕಿಂಧೆಯಾಗಿ ಪರಿವರ್ತನೆಗೊಂಡಿತು. ಇದರ ಪರಿಣಾಮ ಲೇಡಿಗೋಶನ್ , ಹಂಪನಕಟ್ಟೆ ಸುತ್ತಮುತ್ತಲಿನ ಪ್ರದೇಶ ಮಾತ್ರವಲ್ಲದೆ ನವಭಾರತ ಸರ್ಕಲ್ ವರೆಗೆ ಟ್ರಾಫಿಕ್ ಜಾಮ್ ಉಂಟಾಯಿತು. ಇನ್ನೊಂದು ಕಡೆಯಲ್ಲಿ ಜ್ಯೋತಿ ವರೆಗೆ, ಮತ್ತೊಂದು ಕಡೆಯಲ್ಲಿ ಪಳ್ನೀರ್ ವರೆಗೆ ಸುಗಮ ಸಂಚಾರಕ್ಕೆ ಅಡ್ಡಿಯಾಯಿತು. ಆದರೆ ಒಂದು ತಾಸಿನೊಳಗೆ ಎಲ್ಲವೂ ಕ್ಲಿಯರ್ ಆಗಿ ಸುಗಮ ಸಂಚಾರ ತೆರೆದುಕೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು