2:02 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಸಕ್ರೀಯ ರಾಜಕಾರಣಕ್ಕೆ ನ್ಯಾಯವಾದಿ ಪದ್ಮರಾಜ್ ಎಂಟ್ರಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ

26/04/2023, 10:29

ಮಂಗಳೂರು(reporterkarnataka.com):ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಎಂದೇ ಬಿಂಬಿತವಾಗಿದ್ದ ಯುವ ನ್ಯಾಯವಾದಿ, ಸಾಮಾಜಿಕ ದುರೀಣ ಪದ್ಮರಾಜ್ ಆರ್. ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಆ ಮೂಲಕ ಪದ್ಮರಾಜ್ ಅವರು ನೇರವಾಗಿ ಕಾಂಗ್ರೆಸ್ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಪದ್ಮರಾಜ್ ಅವರಿಗೆ ಮಂಗಳೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡುವಂತೆ ಅವರ ಅಭಿಮಾನಿಗಳು, ಹಿತೈಷಿಗಳು ಒತ್ತಾಯಿಸಿದ್ದರು. ಹಾಗಂತ ಟಿಕೆಟ್ ಗಾಗಿ ಪದ್ಮರಾಜ್ ಅವರು ಕಾಂಗ್ರೆಸ್ ಗೆ ಅರ್ಜಿ ಸಲ್ಲಿಸಿದವರಲ್ಲ. ಇದನ್ನೇ ಕೆಲವು ಕಾಂಗ್ರೆಸಿಗರು ಪ್ರಶ್ನಿಸಿದ್ದರು. ಟಿಕೆಟ್ ಕುರಿತಂತೆ ಪದ್ಮರಾಜ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ದೆಹಲಿಗೆ ಕರೆಸಿತ್ತು. ಹೊಟೇಲ್ ಮೌರ್ಯದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಮುಂತಾದವರು ಪದ್ಮರಾಜ್ ಜತೆ ಮಾತುಕತೆ ನಡೆಸಿದ್ದರು. ಮಂಗಳೂರು ದಕ್ಷಿಣ ಹೊರತುಪಡಿಸಿ ಇತರ 2-3 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಆಫರ್ ನೀಡಿತ್ತು. ಆದರೆ ಪದ್ಮರಾಜ್ ಅವರ ಕಾರ್ಯಕ್ಷೇತ್ರ ಮಂಗಳೂರು ದಕ್ಷಿಣ ಆಗಿರುವುದರಿಂದ ಅವರು ಈ ಎಲ್ಲ ಆಫರ್ ಗಳನ್ನು ವಿನಯದಿಂದ ನಿರಾಕರಿಸಿದ್ದರು. ಇದೀಗ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ದೊಡ್ಡ ಜವಾಬ್ದಾರಿಯನ್ನು ಪಕ್ಷ ನೀಡಿದೆ. ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು