5:20 PM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ಕೆನರಾ ಪಿಯು ಕಾಲೇಜು ಮತ್ತು ಕೆನರಾ ವಿಕಾಸ್ ಪಿಯು ಕಾಲೇಜಿನಲ್ಲಿ ಉನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ

26/04/2023, 21:55

ಮಂಗಳೂರು(reporterkarnataka.com): ನಗರದ ಕೆನರಾ ಪದವಿಪೂರ್ವ ಕಾಲೇಜು ಮತ್ತು ಕೆನರಾ ವಿಕಾಸ್ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಿ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮವು ನಗರದ ಟಿ .ವಿ. ರಮಣ್ ಪೈ ಕನ್ವೆನ್ಷನ್ ಸಭಾಂಗಣದಲ್ಲಿ ನಡೆಯಿತು.
ಕೆನರಾ ವಿಕಾಸ್ ಪಿಯು ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 596 ಅಂಕಗಳಿಸಿ ಎರಡನೇ ಸ್ಥಾನ ಪಡೆದುಕೊಂಡ ಸ್ವಾತಿ ಎಸ್. ಪೈ ಮತ್ತು ಕೆನರಾ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ 595 ಅಂಕಗಳಿಸಿ ತೃತೀಯ ಸ್ಥಾನ ಪಡೆದ ಪ್ರತೀಕ್ ಮಲ್ಯ, ವಿಜ್ಞಾನ ವಿಭಾಗದಲ್ಲಿ 592 ಅಂಕಗಳಿಸಿ ಐದನೇ ಸ್ಥಾನ ಪಡೆದ ವೈಭವಿ ನಾಗರಾಜ ನಾಯಕ್ ಇವರುಗಳನ್ನು ಸನ್ಮಾನಿಸಲಾಯಿತು.
570ಕ್ಕಿಂತ ಅಧಿಕ ಅಥವಾ 95 ಶೇಕಡಕ್ಕಿಂತ ಹೆಚ್ಚು ಅಂಕಗಳಿಸಿದ ಕೆನರಾ ಪಿಯು ಕಾಲೇಜಿನ ವಿಜ್ಞಾನ ವಿಭಾಗದ 14 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದ 26 ವಿದ್ಯಾರ್ಥಿಗಳು ಹಾಗೂ ಕೆನರಾ ವಿಕಾಸ್ ಪಿಯು ಕಾಲೇಜಿನ ವಿಜ್ಞಾನ ವಿಭಾಗದ 8 ವಿದ್ಯಾರ್ಥಿಗಳು ವಾಣಿಜ್ಯ ವಿಭಾಗದ 7 ವಿದ್ಯಾರ್ಥಿಗಳನ್ನು ಅಭಿನಂದಿಸಿ ಗೌರವಿಸಲಾಯಿತು.
ಸಮಾರಂಭದಲ್ಲಿ ಕೆನರಾ ಪಿಯು ಕಾಲೇಜಿನ ಸಂಚಾಲಕರಾದ ಟಿ. ಗೋಪಾಲಕೃಷ್ಣ ಶೆಣೈ ಅವರು ಮಾತನಾಡಿ, ನಮ್ಮ ಕೆನರಾ ಸಂಸ್ಥೆಯ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ತೋರಿದ ಸಾಧನೆ ಗಮನಾರ್ಹವಾದುದು. ಕೆನರಾ ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ ಎಂಬುವುದಕ್ಕೆ ನಮ್ಮ ವಿದ್ಯಾರ್ಥಿಗಳ ಸಾಧನೆ ಸಾಕ್ಷಿಯಾಗಿದೆ ಎಂದು ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

ಕೆನರಾ ವಿಕಾಸ ಪಿಯು ಕಾಲೇಜಿನ ಸಂಚಾಲಕರಾದ ಸಿ.ಎ ಎಂ. ವಾಮನ್ ಕಾಮತ್ ರವರು ಮಾತನಾಡಿ, ಕೆನರಾ ಸಂಸ್ಥೆಗಳಲ್ಲಿ ಓದಿದ ವಿದ್ಯಾರ್ಥಿಗಳು ದೇಶ ವಿದೇಶಗಳಲ್ಲಿ ಪ್ರಸಿದ್ಧಿ ಪಡೆದಿದ್ದಾರ. ಇದಕ್ಕೆ ಪೂರಕವೆಂಬಂತೆ ಇಂದು ಕೂಡ ನಮ್ಮ ಸಂಸ್ಥೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಸಾಧನೆ ಹೆಮ್ಮೆಪಡುವಂಥದ್ದು ಎಂದು ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕೆನರಾ ಶಿಕ್ಷಣ ಸಂಸ್ಥೆಗಳ ಗೌರವ ಕಾರ್ಯದರ್ಶಿ ಎಂ.ರಂಗನಾಥ ಭಟ್ ಅವರು ಮಾತನಾಡಿ, ಕೆನರಾ ಶಿಕ್ಷಣ ಸಂಸ್ಥೆಗಳು ಇಂದು ನಿನ್ನೆಯದ್ದಲ್ಲ. ಈ ಶಿಕ್ಷಣ ಸಂಸ್ಥೆಗಳ ಬಗೆಗೆ ನಾಡಿನ ಜನರಿಗೆ ಅಪಾರ ಅಭಿಮಾನವಿದೆ. ಈ ಅಭಿಮಾನ ಇನ್ನಷ್ಟು ಹೆಚ್ಚಾಗುವಂತೆ ನಮ್ಮ ವಿದ್ಯಾರ್ಥಿಗಳು ಸಾಧನೆ ತೋರಿದ್ದಾರೆ. ಅಂತಹ ನಮ್ಮೆಲ್ಲ ವಿದ್ಯಾರ್ಥಿಗಳಿಗೆ ನಮ್ಮ ಶಿಕ್ಷಣ ಸಂಸ್ಥೆಯ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಅಭಿಮಾನ ವ್ಯಕ್ತಪಡಿಸಿದರು.


ಈ ಸಮಾರಂಭದಲ್ಲಿ ಕೆನರಾ ಹೈಸ್ಕೂಲ್ ಅಸೋಸಿಯೇಷನ್ ಸಂಯೋಜಕರಾದ ಬಸ್ತಿ ಪುರುಷೋತ್ತಮ ಶೆಣೈ ಕೆನರಾ ವಿಕಾಸ್ ಕಾಲೇಜಿನ ಮ್ಯಾನೇಜರ್ ರಾಘವೇಂದ್ರ ಕುಡ್ವ, ಕೆನರಾ ಹೈಸ್ಕೂಲ್ ಅಸೋಸಿಯೇಷನ್ ಜಂಟಿ ಕಾರ್ಯದರ್ಶಿ ಎಂ. ಸುರೇಶ್ ಕಾಮತ್, ಕೆನರಾ ಹೈಸ್ಕೂಲ್ ಅಸೋಸಿಯೇಷನ್ ಸಮಿತಿ ಸದಸ್ಯ ಎಂ. ನರೇಶ್ ಶೆಣೈ, ಕೆನರಾ ಪಿಯು ಕಾಲೇಜಿನ ಡೀನ್ ಗೋಪಾಲಕೃಷ್ಣ ಶೆಟ್ಟಿ, ಕೆನರಾ ಪಿಯು ಕಾಲೇಜಿನ ಪ್ರಾಂಶುಪಾಲೆ ಲತಾ ಮಹೇಶ್ವರಿ ಕೆ ಬಿ, ಕೆನರಾ ವಿಕಾಸ್ ಪಿಯು ಕಾಲೇಜಿನ ಪ್ರಾಂಶುಪಾಲೆ ಐಶ್ವರ್ಯ ಕೆ. ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಕೆನರಾ ಶಿಕ್ಷಣ ಸಂಸ್ಥೆಗಳ ಪಿ. ಆರ್. ಓ ಉಜ್ವಲ್ ಮಲ್ಯ ನಿರೂಪಿಸಿ ಧನ್ಯವಾದ ಅರ್ಪಿಸಿದರು. ಕೆನರಾ ಪಿ.ಯು. ಕಾಲೇಜಿನ ಇಂಗ್ಲಿಷ್ ಉಪನ್ಯಾಸಕಿ ಸುಜಾತ ಪಿ.ವಿ ಸಾಧನೆ ಮಾಡಿದ ವಿದ್ಯಾರ್ಥಿಗಳ ಹೆಸರುಗಳನ್ನು ಪ್ರಸ್ತುತಪಡಿಸಿದರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಹೆತ್ತವರು ಪೋಷಕರು ಕಾಲೇಜುಗಳ ಉಪನ್ಯಾಸಕರು ಮತ್ತು ಕಛೇರಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು