3:43 PM Wednesday24 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ಹೆಬ್ಬರಿಗೆ ಸಮೀಪ ಅನುಮಾನಾಸ್ಪದವಾಗಿ ವ್ಯಕ್ತಿ ಸಾವು: ಪತ್ನಿಯ ಬಸ್ಸು ಹತ್ತಿಸಿ ಬೈಕ್‌ನಲ್ಲಿ ಬರುತ್ತೇನೆಂದ ಪತಿ ಶವವಾಗಿ ಪತ್ತೆ

26/04/2023, 23:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹೆಂಡತಿಯನ್ನು ಬಸ್ಸು ಹತ್ತಿಸಿ ಬೈಕಿನಲ್ಲಿ ಬರುತ್ತೇನೆಂದು ಹೇಳಿದ ಪತಿ ಹೆಬ್ಬರಿಗೆ ಸಮೀಪ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾದ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೆಬ್ಬರಿಗೆಯಲ್ಲಿ ಬುಧವಾರ ನಡೆದಿದೆ.
ಚಿಕ್ಕಮಗಳೂರು ತಾಲ್ಲೂಕಿನ ತೇಗೂರಿನ ದಿಲೀಪ್ (೪೦) ಮೃತ ಪಟ್ಟ ವ್ಯಕ್ತಿ. ಧರ್ಮಸ್ಥಳದಲ್ಲಿ ಮುಡಿ ತೆಗೆಯುವ ಕಾರ್ಯ ಮಾಡುತ್ತಿದ್ದ ದಿಲೀಪ್ ಉಜಿರೆಯಲ್ಲಿ ವಾಸವಿದ್ದರು. ಪತ್ನಿಯೊಂದಿಗೆ ತೇಗೂರಿಗೆ ಬಂದಿದ್ದ ದಿಲೀಪ್ ಬುಧವಾರ ಬೈಕ್‌ನಲ್ಲಿ ಉಜಿರೆಗೆ ಹೊರಟ್ಟಿದ್ದು ಕೊಟ್ಟಿಗೆಹಾರ ಸಮೀಪ ಬರುತ್ತಿದ್ದಂತೆ ಮಳೆ ಪ್ರಾರಂಭವಾಗಿದ್ದರಿಂದ ಪತ್ನಿಯನ್ನು ಬಸ್ಸಿಗೆ ಹತ್ತಿಸಿ ಉಜಿರೆಗೆ ಹೋಗಿರಲು ಹೇಳಿ ತಾನು ಮಳೆ ನಿಂತ ಮೇಲೆ ಬೈಕ್‌ನಲ್ಲಿ ಬರುವುದಾಗಿ ತಿಳಿಸಿದ್ದಾರೆ.


ಬುಧವಾರ ಸಂಜೆ ಹೆಬ್ಬರಿಗೆ ಸಮೀಪ ರಸ್ತೆ ಬದಿಯಲ್ಲಿ ದಿಲೀಪ್ ಅವರ ಮೃತದೇಹ ಪತ್ತೆಯಾಗಿದೆ. ಮೃತದೇಹದ ಜೊತೆಗಿದ್ದ ಮೊಬೈಲ್‌ನಿಂದಾಗಿ ಮೃತದೇಹದ ಗುರುತು ಪತ್ತೆಯಾಗಿದ್ದು ಈ ಬಗ್ಗೆ ಸ್ಥಳಕ್ಕೆ ಬಣಕಲ್ ಪೊಲೀಸ್ ಠಾಣಾ ಪಿಎಸ್‌ಐ ಜಂಬೂರಾಜ್ ಮಹಾಜನ್, ಎಎಸ್‌ಐ ಶಶಿ, ಸಿಬ್ಬಂದಿಗಳಾದ ಜಗದೀಶ್ ಮುಂತಾದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಂಡಿದ್ದಾರೆ.
ಚಾರ್ಮಾಡಿ ಘಾಟ್ ನಲ್ಲಿ ಸ್ಕೂಟಿ ಪತ್ತೆ:
ದಿಲೀಪ್ ಅವರ ಸ್ಕೂಟಿ ಚಾರ್ಮಾಡಿ ಘಾಟ್ ನ ಅಣ್ಣಪ್ಪಸ್ವಾಮಿ ದೇವಸ್ಥಾನದ ಸಮೀಪ ಅಪಘಾತವಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಿದ್ದ ಮನೆಯ ಗೃಹಪ್ರವೇಶ ಮೇ 5 ರಂದು ಹಮ್ಮಿಕೊಂಡಿದ್ದು ಗೃಹಪ್ರವೇಶಕ್ಕೆ ಆಹ್ವಾನಿಸಲೆಂದು ಚಿಕ್ಕಮಗಳೂರಿಗೆ ಬಂದಿದ್ದವರು. ಹಿಂದಿರುಗುವ ವೇಳೆ ಈ ಘಟನೆ ನಡೆದಿದ್ದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು