5:49 AM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

27/04/2023, 23:07

ಮಂಗಳೂರು(reporterkarnataka.com): ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.
ನಗರದ ಹೊರವಲಯದ ವಳಚಿಲ್ ನ ಸಹ್ಯಾದ್ರಿ ಕಾಲೇಜು ಕ್ಯಾಂಪಸ್ ನಲ್ಲಿ ಗುರುವಾರ ನಡೆದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
ಕಾಂಗ್ರೆಸ್ ಈಗಾಗಲೇ 4 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆ. 5ನೇ ಯೋಜನೆಯು ಮಹಿಳೆಯರಿಗೆ ಉಚಿತ ಪ್ರಯಾಣದ್ದಾಗಿದೆ. ನಮ್ಮ ಸರಕಾರ ಅಧಿಕಾರಕ್ಕೆ ಬಂದರೆ ಮೊದಲ ಸಂಪುಟ ಸಭೆಯಲ್ಲೇ ಈ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ಅವರು ನುಡಿದರು.
ರಾಜ್ಯದಲ್ಲಿರುವ ಬಿಜೆಪಿ ಸರಕಾರವನ್ನು ನಾವು ಆಯ್ಕೆ ಮಾಡಿಲ್ಲ. ಓಟಿನಿಂದ ಈ ಸರಕಾರ ಅಸ್ತಿತ್ವಕ್ಕೆ ನಾವು ಬಂದಿಲ್ಲ. ಬಿಜೆಪಿ ಕಳ್ಳತನದಿಂದ ಮಾಡಿದ ಸರಕಾರ ಇದಾಗಿದೆ. ಪ್ರಜಾಪ್ರಭುತ್ವವನ್ನು ಧ್ವಂಸ ಮಾಡಿದ್ದಾರೆ. ಕಳ್ಳತನ ಇವರ ಅಭ್ಯಾಸ. ಕರ್ನಾಟಕವನ್ನು ಮೋದಿಯ ಕೈಗೆ ಕೊಡುವ ಪ್ರಯತ್ನ ನಡೆಯುತ್ತಿದೆ. 40% ಕಮಿಷನ್ ಸರಕಾರ ನಮಗೆ ಬೇಕಾ? ಎಂದು ಅವರು ಪ್ರಶ್ನಿಸಿದರು.
ದೇಶದಲ್ಲಿ ಕಪ್ಪು ಹಣ ಜಾಸ್ತಿಯಾಗಿದೆ.ಕಪ್ಪು ಹಣದ ಬಗ್ಗೆ ಮಾತನಾಡಿದಕ್ಕೆ ನನ್ಬನ್ನು ಸಂಸತ್ ನಿಂದ ಹೊರಗೆ ಹಾಕಲಾಯಿತು. ಅದಾನಿ ಮತ್ತು ಪ್ರಧಾನಿ ನಡುವಿನ ಸಂಬಂಧ ಏನು? ವಿದೇಶದಲ್ಲಿರುವ ನಕಲಿ ಕಂಪನಿಗಳ ಹಣ ಯಾರದ್ದು? ಇದನ್ನೆಲ್ಲ ಪ್ರಶ್ನಿಸಿದಕ್ಕೆ ನನ್ನನ್ನು ಪಾರ್ಲಿಮೆಂಟ್ ನಿಂದ ಹೊರ ಹಾಕಲಾಯಿತು. ಬಿಜೆಪಿ ಕೊಟ್ಟ ಯಾವುದೇ ಭರವಸೆಯನ್ನು ಈಡೇರಿಸಿಲ್ಲ. ಆದರೆ ಅದಾನಿಗೆ ಕೊಟ್ಟ ಭರವಸೆ ಯನ್ನು ಈಡೇರಿಸಿದೆ ಎಂದು ಅವರು ಟೀಕಿಸಿದರು.


ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ, ಮಾಜಿ ಸಚಿವ ಬಿ. ರಮಾನಾಥ ರೈ, ಅಭಯಚಂದ್ರ ಜೈನ್. ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ, ಮಂಗಳೂರು ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು