4:39 AM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ದ.ಕ. ಜಿಲ್ಲೆಯಲ್ಲಿ ಭಾರಿ ಮಳೆ: ತುಂಬಿ ಹರಿದ ನೇತ್ರಾವತಿ, ಕುಮಾರಧಾರಾ; ಚೇಳ್ಯಡ್ಕ ಸೇತುವೆ ಮುಳುಗಡೆ, ಕುಕ್ಕೆ ಸ್ನಾನಘಟ್ಟ 2ನೇ ದಿನವೂ ಜಲಾವೃತ

15/07/2021, 18:06

ಮಂಗಳೂರು(reporterkarnataka news); ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಬಿರುಸಿನ ಮಳೆಯಾಗುತ್ತಿದ್ದು, ಜಿಲ್ಲೆಯ ಪ್ರಮುಖ ನದಿಗಳು, ಹಳ್ಳ-ಕೊಳ್ಳ ತುಂಬಿ ಹರಿಯುತ್ತಿದೆ. ಪವಿತ್ರಾ ಯಾತ್ರಾ ಸ್ಥಳವಾದ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಎರಡನೇ ದಿನವಾದ ಇಂದು ಕೂಡ ಮುಳುಗಿದೆ. ಪುತ್ತೂರು- ಪಾಣಾಜೆ ಸಂಪರ್ಕಿಸುವ ಚೇಳ್ಯಡ್ಕ ಸೇತುವೆ ಭಾರಿ ಮಳೆಗೆ ಮುಳುಗಡೆಯಾಗಿ ಜನ ಸಂಚಾರಕ್ಕೆ ತೊಂದರೆ ಉಂಟಾಗಿದೆ.

ಜಿಲ್ಲೆಯ ಪ್ರಮುಖ ನದಿಗಳಾದ ನೇತ್ರಾವತಿ, ಕುಮಾರಧಾರ, ಫಲ್ಗುಣಿ, ನಂದಿನಿ, ಶಾಂಭವಿ ಹಾಗೂ ಪಯಸ್ವಿನಿ ತುಂಬಿ ಹರಿಯುತ್ತದೆ. ಹಳ್ಳ-ಕೊಳ್ಳಗಳು ಕೂಡ ನೀರಿನಿಂದ ತುಂಬಿವೆ. ಧರ್ಮಸ್ಥಳದಲ್ಲಿ ನಿನ್ನೆ ನೇತ್ರಾವತಿ ರುದ್ರರೂಪ ತಾಳಿತ್ತು. ಆದರೆ ಯಾವುದೇ ಅನಾಹುತ ಉಂಟು ಮಾಡದೆ ನಂತರ ಶಾಂತವಾಯಿತು.

ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಸ್ನಾನಘಟ್ಟ ಎರಡನೇ ದಿನವಾದ ಇಂದು ಕೂಡ ಮುಳುಗಿದೆ. ಜಿಲ್ಲೆಯ ಹಲವೆಡೆ ಗುಡ್ಡ ಕುಸಿದ ಬಗ್ಗೆ ವರದಿಯಾಗಿದೆ. ಪುತ್ತೂರು ನಗರದಲ್ಲಿ ಗುರುವಾರ ಧರೆ ಕುಸಿದು ಎರಡು ಮನೆಗಳಿಗೆ ಅಪಾಯ ಉಂಟಾಗಿದೆ. ಕುಮಾರಧಾರಾ ಮತ್ತು ನೇತ್ರಾವತಿ ಸಂಗಮ ಸ್ಥಳವಾದ ಉಪ್ಪಿನಂಗಡಿಯಲ್ಲಿ ನದಿ ನೀರಿನ ಮಟ್ಟ ಅಪಾಯದ ಮಟ್ಟದತ್ತ ಸಾಗುತ್ತಿದೆ. ಈಗಾಗಲೇ ನದಿ ನೀರಿನ ಮಟ್ಟ 27.5. ಅಡಿಗೆ ತಲುಪಿದೆ. 30 ಅಡಿ ಅಪಾಯದ ಮಟ್ಟವಾಗಿದೆ. ಗೃಹ ರಕ್ಷಕ ದಳದ ಸಿಬ್ಬಂದಿಗಳು ಹಾಗೂ ಕಂದಾಯ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಎರಡು ಬೋಟು ಹಾಗೂ ಮೂವರು ನುರಿತ ಈಜುಗಾರರ ತಂಡವನ್ನು ಸನ್ನದ್ಧ ಸ್ಥಿತಿಯಲ್ಲಿ ಇಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು