9:58 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ ಕಡಲನಗರಿ ಮಂಗಳೂರಿಗೆ: ಕ್ಲಾಕ್ ಟವರ್ ನಿಂದ ಗೋವಿಂದ ಪೈ ಸರ್ಕಲ್ ವರೆಗೆ ಬೃಹತ್ ರೋಡ್‌ ಶೋ

28/04/2023, 19:43

ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಅದರ ಭಾಗವಾಗಿ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಶನಿವಾರ (ಏ.29) ಮಂಗಳೂರಿನಲ್ಲಿ ಬೃಹತ್ ರೋಡ್‌ ಶೋ ನಡೆಸಲಿದ್ದಾರೆ.
ನಗರದ ಪುರಭವನ ಸಮೀಪದ ಕ್ಲಾಕ್‌ ಟವರ್‍‌ನಿಂದ ಕೊಡಿಯಾಲ್‌ಬೈಲ್‌ನ ಮಂಜೇಶ್ವರ ಗೋವಿಂದ ಪೈ ಸರ್ಕಲ್‌ ವರೆಗೆ ಈ ರೋಡ್‌ ಶೋ ನಡೆಯಲಿದ್ದು, ಸಾವಿರಾರು ಮಂದಿ ಕಾರ್ಯಕರ್ತರು, ಬೆಂಬಲಿಗರು ಭಾಗವಹಿಸುವ ನಿರೀಕ್ಷೆಯಿದೆ.
ಸಂಜೆ 4:30ರಿಂದ ರೋಡ್‌ ಶೋ ಪ್ರಾರಂಭವಾಗಲಿದೆ ಎಂದು ಪಕ್ಷದ ಮೂಲಗಳು ಹೇಳಿವೆ.
ಅಮಿತ್‌ ಶಾ ಅವರ ರೋಡ್‌ ಶೋ ಕರಾವಳಿ ಭಾಗದಲ್ಲಿ ಭಾರೀ ಸಂಚಲನ ಸೃಷ್ಟಿಸಲಿದೆ. ಆ ಮೂಲಕ ಚುನಾವಣೆಯ ಕಾವು ಇನ್ನಷ್ಟು ಏರಲಿದೆ.
ನಾಳೆ ಅಪರಾಹ್ನ 2:30ಕ್ಕೆ ಉಡುಪಿಗೆ ಆಗಮಿಸಲಿರುವ ಅಮಿತ್ ಶಾ ಅವರು ಬಳಿಕ ಬೈಂದೂರಿನಲ್ಲಿ ರೋಡ್‌ ಶೋ ನಡೆಸಲಿದ್ದಾರೆ. ಅನಂತರ ಸಂಜೆ ಮಂಗಳೂರಿಗೆ ಆಗಮಿಸಿ ರೋಡ್‌ ಶೋನಲ್ಲಿ ಪಾಲ್ಗೊಳ್ಳಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು