10:40 AM Tuesday31 - March 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ…

ಇತ್ತೀಚಿನ ಸುದ್ದಿ

ಕಡಲನಗರಿ ಮಂಗಳೂರಿನಲ್ಲಿ ಗೃಹ ಸಚಿವ ಅಮಿತ್ ಶಾ ಭರ್ಜರಿ ರೋಡ್ ಶೋ: ಕ್ಲಾಕ್ ಟವರ್ ನಿಂದ ಆರಂಭ

29/04/2023, 19:32

ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಯ ಪ್ರಚಾರಾರ್ಥವಾಗಿ ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾ ಅವರು ಶನಿವಾರ ಕಡಲನಗರಿ ಮಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದರು.
ಬಿಗಿ ಬಂದೋಬಸ್ತ್ ನಡುವೆ ನಗರದ ಪುರಭವನ ಸಮೀಪದ ಕ್ಲಾಕ್‌ ಟವರ್‍‌ನಿಂದ ಅಮಿತ್ ಶಾ ಅವರ ರೋಡ್ ಶೋ ಆರಂಭವಾಯಿತು. ರಸ್ತೆಯ ಇಕ್ಕಡೆಗಳಲ್ಲಿ ಭಾರಿ ಸಂಖ್ಯೆಯಲ್ಲಿ ಜನರು ನೆರೆದಿದ್ದರು. ಅಮಿತ್ ಶಾ ಅವರು ರಸ್ತೆಯ ಎರಡೂ ಬದಿಗಳಲ್ಲಿ ನೆರೆದಿದ್ದ ಸಾವಿರಾರು ಜನರತ್ತ ಕೈಬೀಸಿದರು. ಕ್ಲಾಕ್ ಟವರ್ ನಿಂದ ಸಂಜೆ 6.35ಕ್ಕೆ ರೋಡ್ ಶೋ ಆರಂಭವಾಯಿತು. ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್,‌ ಪಕ್ಷದ ಅಭ್ಯರ್ಥಿ ಗಳಾದ ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ, ಸತೀಶ್ ಕುಂಪಲ, ಉಮಾನಾಥ ಕೋಟ್ಯಾನ್, ಪಕ್ಷದ ಜಿಲ್ಲಾಧ್ಯಕ್ಷ ಸುದರ್ಶನ್ ಮುಂತಾದವರು ಉಪಸ್ಥಿತರಿದ್ದರು.


ಕ್ಲಾಕ್ ಟವರ್ ನಿಂದ ಆರಂಭವಾದ ರೋಡ್ ಶೋ
ಕೊಡಿಯಾಲ್‌ಬೈಲ್‌ನ ರಾಷ್ಟ್ರ ಕವಿ ಮಂಜೇಶ್ವರ ಗೋವಿಂದ ಪೈ ಸರ್ಕಲ್‌ ಬಳಿ ಸಮಾಪ್ತಿಗೊಂಡಿತು. ಗೋವಿಂದ ಪೈ ಸರ್ಕಲ್ ಬಳಿ ಭಾರೀ ಸಂಖ್ಯೆಯಲ್ಲಿ ಜನರು ನೆರೆದಿದ್ದರು.
ರೋಡ್ ಶೋ ಹಿನ್ನೆಲೆಯಲ್ಲಿ ನಗರದ ಕ್ಲಾಕ್ ಟವರ್ ಪ್ರದೇಶವನ್ನು ಕೇಸರಿಮಯ ಮಾಡಲಾಗಿತ್ತು. ಕ್ಲಾಕ್ ಟವರ್ ಸುತ್ತ ಬಿಜೆಪಿ ಬಾವುಟ ಹಾರುತ್ತಿತ್ತು.
ಶಾ ಭೇಟಿ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಸಂಚಾರ ವ್ಯವಸ್ಥೆಯಲ್ಲಿಯೂ ಬದಲಾವಣೆ ಮಾಡಲಾಗಿತ್ತು. ವಾಹನಗಳ ಸಂಖ್ಯೆ ಇಳಿಮುಖವಾಗಿತ್ತು. ಹಂಪನಕಟ್ಟೆ ಪ್ರದೇಶದ ಅಂಡರ್ ಪಾಸ್ ನ ಬಾಗಿಲು ಹಾಕಿ ಮುಚ್ಚಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು