3:16 PM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಮಂಗಳೂರಿನ ಪಂಪ್‌ವೆಲ್ ಫ್ಲೈಓವರ್ ನಿಂದ ಸರ್ವಿಸ್ ರಸ್ತೆಗೆ ಜಾರಿದ ವೈದ್ಯರ ಕಾರು: ಅಪಾಯದಿಂದ ಪಾರು

15/07/2021, 20:23

ಮಂಗಳೂರು(reporterkarnataka news):  ಭಾರಿ ಮಳೆಯ ನಡುವೆ ನಗರದ ಖಾಸಗಿ ಆಸ್ಪತ್ರೆಯೊಂದರ ವೈದ್ಯರ ಕಾರು ಪಂಪ್‌ವೆಲ್ ಫ್ಲೈ ಓವರ್ ನಿಂದ ಸರ್ವಿಸ್ ರಸ್ತೆಗೆ ಜಾರಿದ ಘಟನೆ ಗುರುವಾರ ಸಂಜೆ ನಡೆದಿದೆ.

ತೊಕ್ಕೊಟ್ಟು ಕಡೆಯಿಂದ ಮಂಗಳೂರಿಗೆ ವೈದ್ಯರ ಕಾರು ತೆರಳುತ್ತಿತ್ತು. ಆ ವೇಳೆಎದುರಿನಿಂದ ವೇಗವಾಗಿ ವಾಹನವೊಂದು ಬಂದಿದ್ದು ವಾಹನದ ವೇಗಕ್ಕೆ ರಸ್ತೆಯಲ್ಲಿ ನಿಂತಿದ್ದ ಮಳೆ ನೀರು ವೈದ್ಯರ ಕಾರಿನ ಮುಂಭಾಗದ ಗ್ಲಾಸ್ ಮೇಲೆ ಚೆಲ್ಲಿದ ಪರಿಣಾಮ ನಿಯಂತ್ರಣ ತಪ್ಪಿದ ಕಾರು ಸರ್ವಿಸ್ ರಸ್ತೆಗೆ ಜಾರಿದೆ. ನಂತರ ಸ್ಥಳೀಯ ನಾಗರಿಕರ ನೆರವಿನಿಂದ ಪೊಲೀಸರು ಸರ್ವಿಸ್ ರಸ್ತೆಗೆ ಜಾರಿದ ಕಾರನ್ನು ರಸ್ತೆಯಲ್ಲಿ ತಂದು ನಿಲ್ಲಿಸಿದರು.

ಮಂಗಳೂರು ದಕ್ಷಿಣ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು