4:49 PM Monday23 - September 2024
ಬ್ರೇಕಿಂಗ್ ನ್ಯೂಸ್
2 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಬಾಲಕಿಯರ ಕ್ರೀಡಾ ವಸತಿ ನಿಲಯ ಕಟ್ಟಡ ಉದ್ಘಾಟನೆ ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಎತ್ತರದಿಂದ ಗ್ರಾಪಂ ಆವರಣಕ್ಕೆ ಕಾರು… ವಿಶ್ವ ವಿಜ್ಞಾನಿಗಳ ಪಟ್ಟಿ: ಬಳ್ಳಾರಿಯ ವಿಎಸ್‌ಕೆಯುನ ಮೂವರು ಪ್ರಾಧ್ಯಾಪಕರಿಗೆ ಸ್ಥಾನ ​ ಸರಕಾರದ ನೇಮಕಾತಿಯಲ್ಲಿ ಮೀಸಲಾತಿ ಪರಿಗಣಿಸಿ: ಪಂಪಾಪತಿ ಆಗ್ರಹ ನಂಜನಗೂಡು: 20 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ

ಇತ್ತೀಚಿನ ಸುದ್ದಿ

ಸಿಎಂ ಯಡಿಯೂರಪ್ಪಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದ್ದೇಕೆ?: ಕೇಸರಿ ಪಕ್ಷದ ಮುಂದಿನ ಕಾರ್ಯತಂತ್ರವೇನು?

15/07/2021, 21:15

ಬೆಂಗಳೂರು(reporterkarnataka news): ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್‌ ನಿಂದ ಬುಲಾವ್‌ ಬಂದಿದೆ. ಜುಲೈ 16ರಂದು ಅಂದ್ರೆ ನಾಳೆ ಯಡಿಯೂರಪ್ಪ ದೆಹಲಿಗೆ ತೆರಳಲಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕೂಗು ಆಗಾಗ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಬಿಎಸ್ ವೈ ರಾಜೀನಾಮೆ ನೀಡುತ್ತಾರಾ ಎಂಬ ಕುತೂಹಲ ಎಲ್ಲೆಡೆ ಮೂಡಿದೆ.

ರಾಜ್ಯ ನಾಯಕತ್ವ ಬದಲಾವಣೆ ಕುರಿತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ದಿನ ಬೆಳಗಾದರೆ ಒಂದೊಂದು ಹೇಳಿಕೆ ನೀಡುತ್ತಿರುತ್ತಾರೆ. ಈ ಮಧ್ಯೆ ಸಚಿವ ಸಿ.ಪಿ.ಯೋಗೀಶ್ವರ್, ಅರವಿಂದ ಬೆಲ್ಲದ ಆಗಾಗ ರಂಗಪ್ರವೇಶ ಮಾಡಿ ನಾಯಕತ್ವ ಬದಲಾವಣೆ ವಿಷಯವನ್ನು ಜೀವಂತವಿಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ಮೊನ್ನೆ ಮೊನ್ನೆ ರಾಜ್ಯಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಅವರು ನಾಯಕತ್ವ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇವೆಲ್ಲದರ ನಡುವಲ್ಲೇ ಬಿಜೆಪಿ ವರಿಷ್ಠರು ಯಡಿಯೂರಪ್ಪ ಅವರನ್ನು ದೆಹಲಿಗೆ ಕರೆಯಿಸಿಕೊಳ್ಳುತ್ತಿರೋದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಯಡಿಯೂರಪ್ಪ ಅವರು ಶುಕ್ರವಾರ ದೆಹಲಿಗೆ ಭೇಟಿ ನೀಡಲಿದ್ದು, ರಾತ್ರಿ ಅಲ್ಲಿಯೇ ತಂಗಲಿದ್ದಾರೆ. ನಾಳಿದ್ದು(ಶನಿವಾರ) ರಾಜ್ಯಕ್ಕೆ ವಾಪಸಾಗಲಿದ್ದಾರೆ.

ಮುಂದಿನ ಚುನಾವಣೆಯ ದೃಷ್ಟಿಯನ್ನಿಟ್ಟುಕೊಂಡೇ ಕೇಂದ್ರ ಸಂಪುಟದಲ್ಲಿ ಹಲವು ಸಚಿವರಿಗೆ ಕೋಕ್‌ ನೀಡಿ, ಹೊಸ ಮುಖಗಳಿಗೆ ಅವಕಾಶವನ್ನು ನೀಡಿತ್ತು. ಹಾಗಾದರೆ ಅದೇ ರೀತಿ ಕರ್ನಾಟಕದಲ್ಲಿಯೂ ಬದಲಾವಣೆ ಮಾಡಲಾಗುತ್ತದೆಯೇ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಆದರೆ ಸದ್ಯದ ಮಟ್ಟಿಗೆ ಸಿಎಂ ಬದಲಾವಣೆ ಸಾಧ್ಯತೆ ಬಹಳ ಕಡಿಮೆ. ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಸುವ ಉದ್ದೇಶ ಬಿಜೆಪಿ ಹೈಕಮಾಂಡ್ ಗೆ ಇರುತ್ತಿದ್ದರೆ ಕೇಂದ್ರ ಸಂಪುಟದಲ್ಲಿ ಬಿಎಸ್ ವೈ ಪುತ್ರ ರಾಘವೇಂದ್ರ ಅವರಿಗೆ ಸಚಿವ ಸ್ಥಾನ ನೀಡುತ್ತಿತ್ತು. ಅದಲ್ಲದೆ ಮುಂದಿನ ಚುನಾವಣೆಯನ್ನು ಯಡಿಯೂರಪ್ಪ ಅವರಿಲ್ಲದೆ ಎದುರಿಸುವುದು ಬಿಜೆಪಿಗೆ ಸುಲಭ ಸಾಧ್ಯವಲ್ಲ. ರಾಜ್ಯದಲ್ಲಿ ಬಿಜೆಪಿ ನಿಂತಿರುವುದೇ ಯಡಿಯೂರಪ್ಪ ಅವರಿಂದ ಎನ್ನುವುದು ಕೂಡ ಬಿಜೆಪಿ ಹೈಕಮಾಂಡ್ ಗೆ ಚೆನ್ನಾಗಿ ಗೊತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸಂಪುಟ ಪುನರ್ ರಚನೆ ಕುರಿತು ಪಕ್ಷದ ಹೈಕಮಾಂಡ್ ಚರ್ಚಿಸಲಿದೆ ಎನ್ನಲಾಗಿದೆ. ಪಕ್ಷವನ್ನು ಆಗಾಗ ಸಂಕಷ್ಟಕ್ಕೆ ಗುರಿ ಮಾಡುವವರಿಗೆ ಮಣೆ ಹಾಕಿ ಅವರ ಬಾಯಿ ಮುಚ್ಚಿಸುವ ಮೂಲಕ ಮುಂದಿನ ಚುನಾವಣೆಗೆ ಹೋಗುವುದು ಪಕ್ಷದ ಗುರಿಯಾಗಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು