1:13 AM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಮಂಗಳೂರು: ಇಂದಿರಾ ಎಜುಕೇಶನ್ ಟ್ರಸ್ಟ್ ಅಧೀನ ಕಾಲೇಜುಗಳ ಪದವಿ ಪ್ರದಾನ

01/05/2023, 18:27

ಮಂಗಳೂರು(reporterkarnataka.com):
ನಗರದ ಫಳ್ನೀರ್ ನಲ್ಲಿರುವ ಇಂದಿರಾ ಎಜುಕೇಷನ್‌ ಟ್ರಸ್ಟ್ ಅಧೀನ ಕಾಲೇಜುಗಳ ಪದವಿ ಪ್ರದಾನ ಕಾರ್ಯಕ್ರಮ ನಗರದ ಮಿಲಾಗ್ರಿಸ್‌ ಜುಬಿಲಿ ಸಭಾಂಗಣದಲ್ಲಿ ಶನಿವಾರ ನಡಯಿತು.
ಮುಖ್ಯ ಅತಿಥಿಯಾಗಿ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ (ಮೌಲ್ಯಮಾಪನ) ಡಾ.ಎನ್.ರಾಮಕೃಷ್ಣ ರೆಡ್ಡಿ, ಗೌರವ ಅತಿಥಿಯಾಗಿ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಮಾಜಿ ಸಿಂಡಿಕೇಟ್ ಸದಸ್ಯ ಪ್ರೊ.ಡಾ.ಯು.ಟಿ. ಇಫ್ತಿಕಾರ್ ಅಲಿ ಪಾಲ್ಗೊಂಡಿದ್ದರು.
ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಡಾ.ಗ್ರೀಶಾ ಜೋಸ್; ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲೆ ಡಾ.ಎನ್. ಜಿಯೋವಿಯಾ ಜಾರ್ಜ್ (ಪಿಟಿ), ಅಲೈಡ್ ಹೆಲ್ತ್ ಸೈನ್ಸ್ ವಿಭಾಗದ ಪ್ರಾಂಶುಪಾಲೆ ಕೃತಿಕಾ, ಅರೆ ವೈದ್ಯಕೀಯ ವಿಜ್ಞಾನಗಳ ಉಸ್ತುವಾರಿ ಪ್ರಾಂಶುಪಾಲೆ ಮೀಜಾ ಪಾಲ್ಗೊಂಡಿದ್ದರು.
ವಾರ್ಷಿಕ ವರದಿಯನ್ನು ಆಯಾಯ ಕಾಲೇಜುಗಳ ಪ್ರಾಂಶುಪಾಲರು ವಾಚನ ಮಾಡಿದರು. ಸಮಾರಂಭದ ಮುಖ್ಯ ಅತಿಥಿ ಡಾ.ಎನ್.ರಾಮಕೃಷ್ಣರೆಡ್ಡಿ ಅವರು, ಆರೋಗ್ಯ ವೃತ್ತಿಪರರ ಪ್ರಾಮುಖ್ಯತೆ ಮತ್ತು ವೃತ್ತಿಯ ಅಭಿವೃದ್ಧಿಗಾಗಿ ಡಾ.ಯು.ಟಿ.ಇಫ್ತಿಕರ್ ಅಲಿ ಅವರು ನೀಡಿದ ಅಗಾಧ ಕೊಡುಗೆ ಕುರಿತು ತಮ್ಮ ವಿಚಾರವನ್ನು ಹಂಚಿಕೊಂಡರು.
ಎಂಎಸ್ಸಿ ನರ್ಸಿಂಗ್, ಬಿಎಸ್ಸಿ ನರ್ಸಿಂಗ್, ಪೋಸ್ಟ್ ಬೇಸಿಕ್ ಬಿಎಸ್ಸಿ ನರ್ಸಿಂಗ್ ಮತ್ತು ಅಲೈಡ್ ಹೆಲ್ತ್ ಸೈನ್ಸಸ್ ಪದವಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಅರೆ ವೈದ್ಯಕೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಡಿಪ್ಲೊಮಾ ಪ್ರಮಾಣ ಪತ್ರ ನೀಡಲಾಯಿತು.
ಇಂದಿರಾ ನರ್ಸಿಂಗ್ ಕಾಲೇಜಿನ ಉಪನ್ಯಾಸಕಿ ಇವಾನ್ಸಾ ರಾಲಿನ್ ವಾರ್ಜ್ರಿ ಸ್ವಾಗತಿಸಿದರು. ಸಹ ಪ್ರಾಧ್ಯಾಪಕಿ ಸಿಜಿ ಆಗಸ್ಟಿನ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು