7:07 AM Wednesday27 - November 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ

ಇತ್ತೀಚಿನ ಸುದ್ದಿ

ಮುಲ್ಕಿಗೆ 3ರಂದು ಪ್ರಧಾನಿ ಮೋದಿ ಭೇಟಿ: ಸಂಚಾರದಲ್ಲಿ ಬದಲಾವಣೆ; ವಾಹನಗಳ ನಿಲುಗಡೆಗೆ ನಿಷೇಧ

01/05/2023, 23:34

ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರ ಸಮಾವೇಶ
ಮೂಲ್ಕಿಯಲ್ಲಿ ಮೇ 3ರಂದು ನಡೆಯಲಿರುವ ಹಿನ್ನಲೆಯಲ್ಲಿ ಅಂದು ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ.
ಹಳೆಯಂಗಡಿ ಜಂಕ್ಷನ್‌ನಿಂದ ಮೂಲ್ಕಿ ವಿಜಯ ಸನ್ನಿಧಿಯವರೆಗೆ ರಾಷ್ಟ್ರೀಯ ಹೆದ್ದಾರಿ 66 ರಸ್ತೆಯ ಎರಡೂ ಬದಿಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ. ಹಾಗೆಯೇ ಬಾರಿಕೇಡ್ ಪಾಯಿಂಟ್ಸ್‌ ಕಾರ್ನಾಡ್ ಬೈಪಾಸ್, ಕಾರ್ನಾಡ್ ಜಂಕ್ಷನ್, ಮುಲ್ಕಿ ರೈಲ್ವೆ ಸ್ಟೇಷನ್ ಕ್ರಾಸ್(ಕಿನ್ನಿಗೋಳಿ),ಎಸ್.ಕೋಡಿ ಕ್ರಾಸ್ ವಾಹನ ನಿಲುಗಡೆ ನಿಷೇಧ ಮಾಡಲಾಗಿದೆ.

ಉಡುಪಿಯಿಂದ ಮಂಗಳೂರು ಕಡೆಗೆ ಬರುವ ಎಲ್ಲ ವಾಹನಗಳು ಮೂಲ್ಕಿ ವಿಜಯ ಸನ್ನಿದಿಯ ಬಳಿ ಎಡಕ್ಕೆ ತಿರುಗಿ ಕಿನ್ನಿಗೋಳಿ-ಕಟೀಲು-ಬಜಪೆ-ಕಾವೂರು ಮಾರ್ಗವಾಗಿ ಮಂಗಳೂರು ಕಡೆ ಹೋಗಬೇಕು. ಹಾಗೆ ಮಂಗಳೂರಿನಿಂದ ಉಡುಪಿಗೆ ತೆರಳುವ ವಾಹನಗಳು ಕೆಪಿಟಿ ಜಂಕ್ಷನ್‌ನಲ್ಲಿ ಬಲಕ್ಕೆ ತಿರುಗಿ ಬೊಂದೇಲ್-ಕಾವೂರು-ಬಜಪೆ-ಕಟೀಲು-ಕಿನ್ನಿಗೋಳಿ- ಮೂಲ್ಕಿ ಕಡೆಗೆ ಅಥವಾ ಕುಳೂರು ಜಂಕ್ಷನ್‌ನಲ್ಲಿ ಬಲಕ್ಕೆ ಚಲಿಸಿ ಕಾವೂರು-ಬಜಪೆ, ಕಟೀಲು-ಕಿನ್ನಿಗೋಳಿ ಮಾರ್ಗವಾಗಿ ಮೂಲ್ಕಿ ಕಡೆಗೆ ಸಂಚರಿಸಬೇಕು. ಸುರತ್ಕಲ್ ಕಡೆಯಿಂದ ಉಡುಪಿ ಕಡೆಗೆ ತೆರಳುವ ವಾಹನಗಳು ಹಳೆಯಂಗಡಿ ಜಂಕ್ಷನ್ ಬಳಿ ಬಲಕ್ಕೆ ತಿರುಗಿ ಪಕ್ಷಿಕೆರೆ-ಎಸ್.ಕೋಡಿ ಮಾರ್ಗವಾಗಿ ಮೂಲ್ಕಿ ಕಡೆಗೆ ಸಂಚರಿಸಬೇಕು.
ರಾಷ್ಟ್ರೀಯ ಹೆದ್ದಾರಿಯಿಂದ ಕೆ.ಎಸ್.ರಾವ್ ನಗರಕ್ಕೆ ಹೋಗುವ ರಸ್ತೆ, ಕೊಲ್ನಾಡು ಜಂಕ್ಷನ್‌ನಿಂದ ಕೈಗಾರಿಕಾ ಪ್ರದೇಶಕ್ಕೆ ತೆರಳುವ ರಸ್ತೆಯ ಎರಡೂ ಬದಿಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ.
ವಾಹನ ನಿಲುಗಡೆ ಪ್ರದೇಶಗಳು ಮಂಗಳೂರು ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ಬಸ್‌ಗಳು ಬೆಳಗ್ಗೆ 9 ಗಂಟೆಯ ಒಳಗಾಗಿ ಸಾರ್ವಜನಿಕರನ್ನು ಕಾರ್ಯಕ್ರಮ ಸ್ಥಳದ ಪ್ರವೇಶ ದ್ವಾರದಲ್ಲಿ ಇಳಿಸಿ ಜಾಗತಿಕ ಬಂಟರ ಸಂಘದ ಬಳಿಯ ವಾಹನ ನಿಲುಗಡೆ ಪ್ರದೇಶದಲ್ಲಿ ವಾಹನಗಳನ್ನು ನಿಲುಗಡೆ ಮಾಡಬೇಕು.ಉಡುಪಿ ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ಬಸ್‌ಗಳು ಕಾರ್ನಾಡು ಬೈಪಾಸ್‌ನಲ್ಲಿ ಸಾರ್ವಜನಿಕರನ್ನು ಇಳಿಸಿ ಯುಟರ್ನ್ ಮಾಡಿ ಜಾಗತಿಕ. ಬಂಟರ ಸಂಘದ ಬಳಿಯ ಪಡುಬೈಲ್ ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲುಗಡೆ ಮಾಡಬೇಕು. ಮಂಗಳೂರು ಹಾಗೂ ಉಡುಪಿ ಕಡೆಯಿಂದ ಬರುವ ಸಾರ್ವಜನಿಕ ಲಘುವಾಹನಗಳು ಹಾಗೂ ದ್ವಿಚಕ್ರ ವಾಹನಗಳುಕಾರ್ಯಕ್ರಮ ಸ್ಥಳದ ಎದುರಿನ ಅಂದರೆ ಉಡುಪಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಎಡಬದಿಯಲ್ಲಿ ನಿಲುಗಡೆ ಮಾಡಬೇಕು. ಮಂಗಳೂರು ಕಡೆಯಿಂದ ಆಗಮಿಸುವ ಸಾರ್ವಜನಿಕ ಲಘುವಾಹನಗಳ ಹಾಗೂ ದ್ವಿಚಕ್ರ ವಾಹನಗಳುಮಂಗಳೂರು–ಉಡುಪಿ ರಸ್ತೆಯಲ್ಲಿರುವ ಸುಂದರರಾಮ್ ಶೆಟ್ಟಿ ಕನ್ವೆನ್ಶನ್ ಹಾಲ್ ಬಳಿಯ ವಾಹನ ನಿಲುಗಡೆ ಸ್ಥಳದಲ್ಲಿ ನಿಲುಗಡೆ ಮಾಡಬೇಕು. ಕಾರ್ಯಕ್ರಮಕ್ಕೆ ಬರುವ ವಿಐಪಿ ವಾಹನಗಳು ಕಾರ್ಯಕ್ರಮ ಸ್ಥಳದ ಪಶ್ಚಿಮ ಬದಿಯಲ್ಲಿನ ಅಂದರೆಮಂಗಳೂರು -ಉಡುಪಿ ರಸ್ತೆಯ ಎಡಬದಿಯ ಪಾರ್ಕಿಂಗ್ ಸ್ಥಳದಲ್ಲಿ ನಿಲುಗಡೆ ಮಾಡಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು