ಇತ್ತೀಚಿನ ಸುದ್ದಿ
ಕಾಂಗ್ರೆಸ್ ಓಟ್ ಕೇಳೋಕೆ ಬಂದ್ರೆ “ನಾಯಿ ಬಿಡ್ತೀವಿ”: ಬಜರಂಗದಳ ಮನೆಯಲ್ಲಿ ಎಚ್ಚರಿಕೆ ಬೋರ್ಡ್
02/05/2023, 17:47
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporter Karnataka@gmail.com
ಮಲೆನಾಡ ಮನೆಗಳ ಮುಂದೆ ಕಾಂಗ್ರೆಸ್ಸಿಗರು ಮತ ಕೇಳಲು ಬಂದರೆ ಅವರ ಮೇಲೆ ನಾಯಿ ಬಿಡಲಾಗುವುದು ಎಚ್ಚರ ಎಂಬ ಬೋರ್ಡ್ ಹಾಕಿ ಕಾಂಗ್ರೆಸ್ಸಿನ ಪ್ರಣಾಳಿಕೆಗೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಹಿಂದೂ ಸಂಘಟನೆ ಬಜರಂಗ ದಳವನ್ನ ನಿಷೇಧ ಮಾಡುತ್ತೇವೆ ಎಂದ ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಹಿಂದೂ ಸಂಘಟನೆ ಕಾರ್ಯಕರ್ತರು ಕೆಂಡವಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಗುಡ್ಡಟ್ಟಿ ಎಂಬ ಗ್ರಾಮದಲ್ಲಿ ಅರುಣ್ ಎಂಬ ಭಜರಂಗದಳ ಕಾರ್ಯಕರ್ತ ತಮ್ಮ ಮನೆ ಮುಂದೆ ಬೋರ್ಡ್ ಹಾಕಿ ಮತ ಕೇಳಲು ಬರುವ ಕಾಂಗ್ರೆಸ್ಸಿಗರಿಗೆ ಎಚ್ಚರಿಕೆ ನೀಡಿದ್ದಾರೆ. ಇದು ಬಜರಂಗದಳದವರ ಮನೆ. ಕಾಂಗ್ರೆಸಿಗರು ಮತ ಕೇಳಲು ಅವಕಾಶವಿಲ್ಲ. ಕಾಂಗ್ರೆಸ್ಸಿಗರು ಮತ ಕೇಳಲು ಬಂದರೆ ನಾಯಿ ಬಿಡಲಾಗುವುದು ಎಚ್ಚರ ಎಂದು ಬೋರ್ಡ್ ಹಾಕಿದ್ದಾರೆ. ಕಾಫಿನಾಡ ಚಿಕ್ಕಮಗಳೂರು ಜಿಲ್ಲೆಯಲ್ಲಿ ಹಿಂದೂ ಸಂಘಟನೆ ಬಲಿಷ್ಠವಾಗಿದೆ.
ದತ್ತಪೀಠದ ಹೋರಾಟ ಆರಂಭಗೊಂಡ ಮೇಲೆ ಮಲೆನಾಡು ಭಾಗದಲ್ಲಿ ಹಿಂದೂ ಸಂಘಟನೆ ಮತ್ತಷ್ಟು ಗಟ್ಟಿಯಾಗಿತ್ತು. ಇದೀಗ, ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಕೆಂಡವಾಗಿರೋ ಬಜರಂಗದಳ ನಾನಾ ರೀತಿ ಕಾಂಗ್ರೆಸ್ ವಿರುದ್ಧ ಕಿಡಿಕಾರುತ್ತಿದೆ. ಕಾಂಗ್ತೆಸ್ಸಿನ ಈ ಪ್ರಣಾಳಿಕೆ ಕಾಫಿನಾಡ ಮಲೆನಾಡು ಭಾಗದಲ್ಲಿ ಕಾಂಗ್ರೆಸ್ಸಿಗೆ ಮುಳ್ಳಾಗೋದು ಗ್ಯಾರಂಟಿ.