ಇತ್ತೀಚಿನ ಸುದ್ದಿ
ಭಾರತಕ್ಕೆ ವಿಶ್ವದ ಮೂಲೆ ಮೂಲೆಗಳಿಂದ ಜೈಕಾರ: ಮುಲ್ಕಿ ನವ ಕರ್ನಾಟಕ ಸಂಕಲ್ಪ ಸಮಾವೇಶದಲ್ಲಿ ಪ್ರಧಾನಿ ಮೋದಿ
03/05/2023, 12:51
ಮುಲ್ಕಿ(reporterkarnataka.com): ಕರ್ನಾಟಕದಲ್ಲಿ ಭಯೋತ್ಪಾದನೆಯ ನಿಗ್ರಹಕ್ಕೆ ಬಿಜೆಪಿ ಕ್ರಮಕೈಗೊಳ್ಳುತ್ತಿದೆ. ಆದರೆ, ಕಾಂಗ್ರೆಸ್ ಪಕ್ಷ ಬೆಂಬಲ ನೀಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಮೂಲ್ಕಿ ಸಮೀಪದ ಕೊಲ್ನಾಡಿನಲ್ಲಿ ಬುಧವಾರ ನವ ಕರ್ನಾಟಕ ಸಂಕಲ್ಪ ಸಮಾವೇಶದಲ್ಲಿ ಅವರು ಮಾತನಾಡಿದರು.
ದೇಶದಲ್ಲಿ ಆತಂಕವಾದ ನಿಗ್ರಹಕ್ಕೆ ಬಿಜೆಪಿ ಸರಕಾರವು ಹೆಣಗಾಡುತ್ತಿದೆ. ಆದರೆ ಕಾಂಗ್ರೆಸ್ ಆತಂಕವಾದಲ್ಲಿ ತೊಡಗಿದವರಿಗೆ ಬೆಂಬಲ ನೀಡುತ್ತಿದೆ. ಅವರನ್ನು ಬಿಡುಗಡೆ ಮಾಡುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.







ದೇಶದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಭಾರತಕ್ಕೆ ವಿದೇಶಗಳಲ್ಲಿ ಗೌರವ ಹೆಚ್ಚಾಗಿದೆ. ಆಮೆರಿಕ, ಇಂಗ್ಲೆಂಡ್, ಆಸ್ಟ್ರೇಲಿಯಾ, ಜಪಾನ್ ಸೇರಿದಂತೆ ವಿಶ್ವದ ಮೂಲೆ ಮೂಲೆಗಳಲ್ಲಿ ಭಾರತ ಪರ ಜೈಕಾರ ಕೇಳಿ ಬರುತ್ತಿದೆ. ಇದು ನಮಗೆಲ್ಲರಿಗೂ ಹೆಮ್ಮೆಯ ವಿಚಾರವಾಗಿದೆ ಎಂದು ಅವರು ನುಡಿದರು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದರೆ, ಪಕ್ಷದ ಅಭ್ಯರ್ಥಿ ಗಳಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ರಾಜೇಶ್ ಉಮಾನಾಥ ಕೋಟ್ಯಾನ್, ಆಶಾ ತಿಮ್ಮಪ್ಪ. ಭಾಗೀರಥಿ
ಮುರಳ್ಯ, ಸತೀಶ್ ಕುಂಪಲ, ಹರೀಶ್ ಪೂಂಜ ಮುಂತಾದವರು ಉಪಸ್ಥಿತರಿದ್ದರು.














