12:06 AM Tuesday7 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಬಸ್ ಸಂಚಾರ ಮಾರ್ಗ ಬದಲಾವಣೆ: ಸಾರ್ವಜನಿಕರಿಂದ ದೂರು; ಶಾಸಕ ವೇದವ್ಯಾಸ ಕಾಮತ್ ಪರಿಶೀಲನೆ

16/07/2021, 07:56

ಮಂಗಳೂರು(reporterkarnataka news): ನಗರದಲ್ಲಿ ಬಸ್ ಸಂಚಾರಿ ಮಾರ್ಗ ಬದಲಾವಣೆಯ ಕುರಿತು ಸಾರ್ವಜನಿಕವಾಗಿ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಸ್ಟೇಟ್ ಬ್ಯಾಂಕ್ ಖಾಸಗಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಬಸ್ ಸಿಬ್ಬಂದಿಗಳಲ್ಲಿ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ‌ಶಾಸಕ ಕಾಮತ್, ಬಸ್ ಮಾಲಕರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳು ನಡೆಸಿದ ಸಭೆಯಲ್ಲಿ ಪಾಲ್ಗೊಂಡು ಮಾರ್ಗ ಬದಲಾವಣೆಯ ಕುರಿತು ಒಪ್ಪಿಗೆ ಸೂಚಿಸಿದ ಬಳಿಕವೇ ಬಸ್ ಮಾರ್ಗ ಬದಲಾವಣೆ ಮಾಡಲಾಗಿದೆ. ಈ ವರೆಗೆ ಬಸ್ ಮಾಲಕರ ಸಂಘದ ಪ್ರಮುಖರು ಆಗುತ್ತಿರುವ ತೊಂದರೆಯ ಕುರಿತು ನನ್ನ ಬಳಿ ಚರ್ಚಿಸಿಲ್ಲ. ಆ ಬಳಿಕ ಸಾರ್ವಜನಿಕವಾಗಿ ಸಮಸ್ಯೆಯ ಕುರಿತು ಮಾಹಿತಿ ದೊರೆತ ಕೂಡಲೆ ಬಸ್ ಸಿಬ್ಬಂದಿಗಳ ಜೊತೆ ಮಾತುಕತೆ ನಡೆಸಿದ್ದೇನೆ ಎಂದರು.

ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿ ನಡೆಸಿದ್ದೇನೆ. ಕೆಲವು ಕಡೆಗಳಲ್ಲಿ ರಸ್ತೆ ವಿಭಜಕಗಳನ್ನು ತೆರವುಗೊಳಿಸುವುದು ಸೇರಿದಂತೆ ಒಂದಷ್ಟು ಬದಲಾವಣೆ ಮಾಡಿ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗದಂತೆ ಸರಿಪಡಿಸಲು ತಿಳಿಸಿದ್ದೇನೆ. ಸಂಚಾರಿ ಪೋಲಿಸರೊಂದಿಗೂ ಕೂಡ‌ ಈ ವಿಚಾರದ ಕುರಿತು ಸಭೆ ನಡೆಸಲಾಗುವುದು ಎಂದು ಶಾಸಕ ಕಾಮತ್ ಹೇಳಿದರು.

ಈ ಸಂದರ್ಭದಲ್ಲಿ ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ,ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರ್, ಮಾಜಿ ಮೇಯರ್ ಹಾಗೂ ಸ್ಥಳೀಯ ಮನಪಾ ಸದಸ್ಯರಾದ ದಿವಾಕರ್ ಪಾಂಡೇಶ್ವರ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ಮುತಾಲಿಬ್, ವಸಂತ್ ಜೆ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು