7:02 AM Tuesday31 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ…

ಇತ್ತೀಚಿನ ಸುದ್ದಿ

ಮೂಡಿಗೆರೆ: ರಸ್ತೆಗೆ ಸಂಬಂಧಿಸಿದ ಜಮೀನು ವಿವಾದ; ಕತ್ತಿ, ಹಾರೆಯಿಂದ ಹಲ್ಲೆ ನಡೆಸಿ ವ್ಯಕ್ತಿಯ ಬರ್ಬರ ಹತ್ಯೆ

05/05/2023, 19:31

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಚಿಕ್ಕಹಳ್ಳ ಗ್ರಾಮದಲ್ಲಿ
ಜಮೀನಿನ ರಸ್ತೆಗೆ ಸಂಬಂಧಿಸಿದ ವಿವಾದದಲ್ಲಿ
ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಕೊಲೆಗೀಡಾದವರನ್ನು ಚಿಕ್ಕಳ್ಳ ಗ್ರಾಮದ ಪ್ರವೀಣ್ (46) ಎಂದು ಗುರುತಿಸಲಾಗಿದೆ.

ರಸ್ತೆಗೆ ಸಂಬಂಧಿಸಿದಂತೆ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ವಿವಾದ ನಡೆಯುತ್ತಿತ್ತು. ಇಂದು ಬೆಳಿಗ್ಗೆ ತನ್ನ ಜಮೀನಿನಲ್ಲಿ ಹಾದುಹೋಗಿದ್ದ ವಿವಾದಿತ ರಸ್ತೆಯಲ್ಲಿ ವಿರೋಧಿ ಗುಂಪಿನವರು ಕೆಲಸ ಮಾಡುತ್ತಿದ್ದಾಗ ಅದನ್ನು ಪ್ರಶ್ನಿಸಲು ಬಂದ ಪ್ರವೀಣ್ ಮೇಲೆ ಗುಂಪು ಕತ್ತಿ, ಹಾರೆಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಯಿತು.
ತೀವ್ರವಾಗಿ ಗಾಯಗೊಂಡಿದ್ದ ಪ್ರವೀಣ್ ಕೊನೆಯುಸಿರೆಳೆದಿದ್ದಾರೆ. ಆಲ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಚಿಕ್ಕಮಗಳೂರು ಆಸ್ಪತ್ರೆ ಒಯ್ಯಲಾಗಿದೆ.
ಈ ಸಂದರ್ಭದಲ್ಲಿ ಪ್ರವೀಣ್ ಅವರ ತಂದೆ ಲಕ್ಷ್ಮಣಗೌಡ ಅವರ ಬಲಗೈಗೂ ತೀವ್ರ ಪೆಟ್ಟಾಗಿದೆ ಎಂದು ತಿಳಿದು ಬಂದಿದೆ.
ಗ್ರಾಮದಲ್ಲಿ ರಸ್ತೆಗೆ ಸಂಬಂಧಿಸಿದಂತೆ ಕೆಲ ವರ್ಷಗಳಿಂದ ವಿವಾದ ನಡೆಯುತ್ತಿತ್ತು, ಈಗ್ಗೆ ಕೆಲ ತಿಂಗಳ ಹಿಂದೆ ಪರಸ್ಪರ ಎರಡು ಕಡೆಯವರ ನಡುವೆ ಹೊಡೆದಾಟ ನಡೆದಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು